Congress: ಕೈ ಬೇಗುದಿ ಸ್ಫೋಟ- ಖರ್ಗೆಗೆ ಪತ್ರ ಬರೆದ ನಾಲ್ವರು ದಲಿತ ಸಚಿವರು

- ಮೇಲ್ಮನೆಗೆ ಸುಧಾಮ್‌ ದಾಸ್‌ ನೇಮಕಕ್ಕೆ ವಿರೋಧ

Team Udayavani, Aug 19, 2023, 7:53 AM IST

cong flag

ಬೆಂಗಳೂರು: ಶಾಸಕ ಬಿ.ಆರ್‌. ಪಾಟೀಲ್‌ ಪತ್ರದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಇನ್ನೊಂದು ಪತ್ರ ಸಮರ ಪ್ರಾರಂಭವಾಗಿದೆ. ನಿವೃತ್ತ ಇ.ಡಿ. ಅಧಿಕಾರಿ ಸುಧಾಮದಾಸ್‌ ಅವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡುವ ವಿಚಾರಕ್ಕೆ ಸಂಬಂಧಿಸಿ ದಲಿತ ಸಮುದಾಯದ ನಾಲ್ವರು ಸಚಿವರು ಆಕ್ರೋಶ ವ್ಯಕ್ತಪಡಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಪತ್ರ ಬರೆದಿದ್ದಾರೆ. ಇದು ಕಾಂಗ್ರೆ ಸ್‌ ನೊಳಗೆ ಉದ್ಭವಿಸಿರುವ ಭಿನ್ನ ಮ ತವನ್ನು ಜಗ ಜ್ಜಾ ಹೀರು ಮಾಡಿದೆ.

ಗೃಹ ಸಚಿವ ಡಾ| ಪರಮೇಶ್ವರ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಡಾ| ಎಚ್‌.ಸಿ. ಮಹದೇವಪ್ಪ, ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಪತ್ರ ಬರೆದಿದ್ದಾರೆ. ಇತ್ತೀಚೆಗೆ ಪಕ್ಷಕ್ಕೆ ಸೇರಿದ ಸುಧಾಮ್‌ ದಾಸ್‌ ಅವರ ಹೆಸರನ್ನು ಪರಿಷತ್ತಿಗೆ ನಾಮನಿರ್ದೇಶನ ಮಾಡಲು ಹೊರಟಿರುವ ಬಗ್ಗೆ ಈ ನಾಲ್ವರು ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದು, ಪರೋಕ್ಷವಾಗಿ ಉಪ ಮು ಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌ ನಡೆಯನ್ನು ಪ್ರಶ್ನಿಸಿದಂತಾಗಿದೆ.

ಮಾಜಿ ಸಚಿವರಾದ ಎಂ.ಆರ್‌. ಸೀತಾರಾಂ, ಉಮಾಶ್ರೀ ಹಾಗೂ ಸುಧಾಮ್‌ ದಾಸ್‌ ಅವರನ್ನು ವಿಧಾನ ಪರಿಷತ್ತಿಗೆ ನಾಮ ನಿರ್ದೇಶನ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಸಂಬಂಧ ಮೂರು ದಿನಗಳ ಹಿಂದೆಯೇ ರಾಜ್ಯಪಾಲರಿಗೆ ಪತ್ರ ಕಳುಹಿಸಲಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಈ ಪ್ರಕ್ರಿಯೆಯಲ್ಲಿ ಸಾಮಾಜಿಕ ನ್ಯಾಯ ಹಾಗೂ ಪ್ರಾತಿನಿಧ್ಯವನ್ನು ಪಾಲಿಸಿಲ್ಲ ಎಂದು ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ಇದರಿಂದ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದಕ್ಕೆ ಮತ್ತೂಂದು ಉದಾಹರಣೆ ದೊರೆತಂತಾಗಿದೆ. ವಿಶೇಷವಾಗಿ ಸುಧಾಮ್‌ ದಾಸ್‌ ನಾಮನಿರ್ದೇಶನದ ಬಗ್ಗೆ ಈ ನಾಲ್ವರು ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದ್ದು, ಅವರ ಬದಲು ದಲಿತ ಸಮುದಾಯಕ್ಕೆ ಸೇರಿದ ಹಿರಿಯರಿಗೆ ಅವಕಾಶ ನೀಡಬೇಕಿತ್ತು ಎಂದು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಪತ್ರ ನಿಜ
ಈ ಬೆಳವಣಿಗೆಗೆ ಸಂಬಂಧಿಸಿ ಸುದ್ದಿಗಾರರ ಜತೆಗೆ ಮಾತನಾಡಿರುವ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ, ಹೈಕಮಾಂಡ್‌ಗೆ ಪತ್ರ ಬರೆದಿರುವುದು ನಿಜ. ಸುಧಾಮ್‌ ದಾಸ್‌ ಮೂರು ತಿಂಗಳು ಹಿಂದಿನವರೆಗೆ ಸರಕಾರಿ ಅಧಿಕಾರಿಯಾಗಿದ್ದರು. ಅವರು ಈಗಷ್ಟೇ ಪಕ್ಷಕ್ಕೆ ಬಂದಿದ್ದಾರೆ. ಇನ್ನೊಂದಿಷ್ಟು ದಿನಗಳ ಕಾಲ ಅವರು ಪಕ್ಷಕ್ಕೆ ಸೇವೆ ಮಾಡಲಿ ಎಂದು ಅಭಿಪ್ರಾಯಪಟ್ಟರು. 30 ವರ್ಷಗಳಿಂದ ಪಕ್ಷಕ್ಕಾಗಿ ಕೆಲಸ ಮಾಡಿದ ದಲಿತ ನಾಯಕರಿಗೆ ಅವಕಾಶ ಸಿಗಲಿ ಎಂಬುದಷ್ಟೇ ನಮ್ಮ ಸಲಹೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಕಾರವೇ ನಾವು ಪತ್ರ ಬರೆದಿದ್ದೇವೆ. ಹೈಕಮಾಂಡ್‌ ಈ ಬಗ್ಗೆ ನಿರ್ಧಾರ ಮಾಡುತ್ತದೆ ಎಂದರು. ಈ ಮೂಲಕ ನೀವು ಡಿ.ಕೆ. ಶಿವಕುಮಾರ್‌ ನಿಲುವನ್ನು ವಿರೋಧಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು.

ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ್‌ ಪ್ರತಿಕ್ರಿಯಿಸಿ, ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮದ ಮುಂದೆ ಮಾತನಾಡಲು ಇಷ್ಟಪಡುವುದಿಲ್ಲ. ಪತ್ರ ಬರೆದಿರುವುದು ಆಂತರಿಕ ವಿಚಾರ. ನನ್ನ ಅಭಿಪ್ರಾಯವನ್ನು ಹೈಕಮಾಂಡ್‌ಗೆ ತಿಳಿ ಸುತ್ತೇನೆ ಎಂದಿದ್ದಾರೆ.

ಡಿಕೆಶಿಗೆ ಚೆಕ್‌ವೆುಟ್‌?
ದಲಿತ ಸಮುದಾಯದ ಸಚಿವರು ಬರೆದ ಈ ಪತ್ರ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಪಕ್ಷದ ಆಂತರಿಕ ವಲಯದಿಂದ ಕೊಟ್ಟ ಚೆಕ್‌ವೆುಟ್‌ ಎಂಬ ಚರ್ಚೆ ಈಗ ಕಾಂಗ್ರೆಸ್‌ ವಲಯದಲ್ಲಿ ಪ್ರಾರಂಭವಾಗಿದೆ. ಸುಧಾಮ್‌ ದಾಸ್‌ ಬಗ್ಗೆ ಮಾತ್ರ ಅಸಮಾಧಾನ ವ್ಯಕ್ತವಾಗಿರುವುದರಿಂದ ಇದು ಶಿವಕುಮಾರ್‌ ವಿರುದ್ಧ ಮಾತ್ರ ಪ್ರಯೋಗವಾದ ಅಸ್ತ್ರ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಇನ್ನೊಂದೆಡೆ ತಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸುವಲ್ಲಿ ಸಿಎಂ ಸಿದ್ದರಾಮಯ್ಯ ವಿಫ‌ಲರಾಗಿದ್ದಾರೆ ಎಂದು ಮುಸ್ಲಿಂ ನಾಯಕರೂ ಬೇಸರಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

Janapada-Academy

Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ

AANE 2

Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ

Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ

PM Modi: ಜನರ ಸಮಸ್ಯೆ ವಿಷಯ ಮಾತಾಡಲಿ: ಮಲ್ಲಿಕಾರ್ಜುನ ಖರ್ಗೆ

PM Modi: ಜನರ ಸಮಸ್ಯೆ ವಿಷಯ ಮಾತಾಡಲಿ: ಮಲ್ಲಿಕಾರ್ಜುನ ಖರ್ಗೆ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Janapada-Academy

Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Janapada-Academy

Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ

High-Court

Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

current

Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು

mob

WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್‌ ಅಧಿಕಾರಿ ದೂರು

AANE 2

Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.