ಸಂಪುಟ ವಿಸ್ತರಣೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಸಿಗಲಿಲ್ಲ ಒಂದೂ ಸ್ಥಾನ
Team Udayavani, Jan 13, 2021, 6:43 PM IST
ಕಲಬುರಗಿ: ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಒಂದೂ ಸ್ಥಾನ ಸಿಗದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.
ಕಲ್ಯಾಣ ಕರ್ನಾಟಕದ ವಿಭಾಗೀಯ ಕೇಂದ್ರ ಹೊಂದಿರುವ ಕಲಬುರಗಿಗೆ ಈ ಸಲವಾದರೂ ಒಂದು ಸ್ಥಾನವಾದರೂ ಸಿಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷೆ ಠುಸ್ಸಾಗಿದೆ.
ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳ ಪೈಕಿ ಬಳ್ಳಾರಿ, ಬೀದರ್ ಜಿಲ್ಲೆಗೆ ಈಗಾಗಲೇ ತಲಾ ಒಂದು ಸ್ಥಾನದ ಅವಕಾಶ ಸಿಕ್ಕರೆ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗೆ ಪ್ರಾತಿನಿಧ್ಯ ತೆ ಇಲ್ಲ. ಹೀಗಾಗಿ ಬುಧವಾರ ನಡೆದ ಸಂಪುಟ ವಿಸ್ತರಣೆಯಲ್ಲಿ ಒಬ್ಬರಿಗೂ ಅವಕಾಶ ಸಿಕ್ಕಿಲ್ಲ.
ಕಲ್ಯಾಣ ಕರ್ನಾಟದ 41 ವಿಧಾನ ಸಭಾ ಕ್ಷೇತ್ರಗಳ ಪೈಕಿ 18 ಸ್ಥಾನಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಈ ಪೈಕಿ ಬಳ್ಳಾರಿ ಜಿಲ್ಲೆಯ ಆನಂದಸಿಂಗ್ ಹಾಗೂ ಬೀದರ್ ಜಿಲ್ಲೆಯಿಂದ ಪ್ರಭು ಚವ್ಹಾಣ ಮಾತ್ರ ಸಚಿವರಾಗಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ; ಒಂದೇ ಕುಟುಂಬಕ್ಕೆ ಸೀಮಿತ: ಶೆಟ್ಟರ್
ಈ ಸಲ ಕೊಪ್ಪಳದ ಹಾಲಪ್ಪಚಾರ್ಯ, ಯಾದಗಿರಿಯಿಂದ ರಾಜುಗೌಡ, ಕಲಬುರಗಿಯಿಂದ ಸುಭಾಷ ಆರ್. ಗುತ್ತೇದಾರ, ದತ್ತಾತ್ರೇಯ ಪಾಟೀಲ್ ರೇವೂರ, ರಾಜಕುಮಾರ ಪಾಟೀಲ್ ತೇಲ್ಕೂರ ಮುಂತಾದವರ ಹೆಸರು ಸಚಿವ ಸ್ಥಾನಕ್ಕೆ ಪ್ರಮುಖವಾಗಿ ಕೇಳಿ ಬಂದಿತ್ತು. ಹಾಲಪ್ಪಚಾರ್ಯ ಹಾಗೂ ರಾಜುಗೌಡ ಹೆಸರು ಪಟ್ಟಿಯಲ್ಲಿ ಇದೆ ಎನ್ನಲಾಗಿತ್ತು. ಆದರೂ ಕೊನೆ ಘಳಿಗೆಯಲ್ಲಿ ಕೈ ತಪ್ಪಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.
ಏಪ್ರಿಲ್, ಮೇ ತಿಂಗಳಲ್ಲಿ ಸಂಪುಟ ಪುನಾರಚನೆ ಯಾದರೆ ಆ ಸಂದರ್ಭದಲ್ಲಾದರೂ ಕಲಬುರಗಿ ಗೆ ಸಚಿವ ಸ್ಥಾನ ಸಿಗುವ ಬಗ್ಗೆ ದೃಢ ವಿಶ್ವಾಸ ಹೊಂದಲಾಗಿದೆ ಎಂದು ಬಿಜೆಪಿ ಕಲಬುರಗಿ ವಿಭಾಗೀಯ ಪ್ರಭಾರಿ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತಿಳಿಸಿದ್ದಾರೆ.
ನಿಯೋಗ: ಈ ಸಲ ಕಲಬುರಗಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷದ ವರಿಷ್ಠರಿಂದ ದೃಢ ವಿಶ್ವಾಸ ದೊರಕಿತ್ತು. ಸ್ಥಾನ ಸಿಗದಿರುವ ಬಗ್ಗೆ ನಿರಾಸೆ ಉಂಟಾಗಿದೆ ಹೀಗಾಗಿ ಜಿಲ್ಲೆಯ ಐವರು ವಿಧಾನಸಭಾ ಸದಸ್ಯರು, ಮೂವರು ವಿಧಾನ ಪರಿಷತ್ ಸದಸ್ಯರು, ಸಂಸದರು ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ರೆಲ್ಲರೂ ಒಗ್ಗೂಡಿ ಸಿಎಂ ಹಾಗೂ ಪಕ್ಷದ ವರಿಷ್ಠರ ಬಳಿ ನಿಯೋಗ ಹೋಗಲಾಗುವುದು ಎಂದು ಕಲಬುರಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.