ಕಲಬುರಗಿಯಲ್ಲಿ ಎಂಟು ಕಡೆ ಕೋವಿಶೀಲ್ಡ್ ಲಸಿಕೆ ವಿತರಣೆ ಆರಂಭ: ಮೊದಲ ಲಸಿಕೆ ಪಡೆದ ಅನಂತರಾಜ್
Team Udayavani, Jan 16, 2021, 2:02 PM IST
ಕಲಬುರಗಿ: ಕೊರೊನಾ ಮಹಾಮಾರಿಗೆ ದೇಶದಲ್ಲಿ ಮೊದಲ ಬಲಿಯಾದ ಕಲಬುರಗಿ ಜಿಲ್ಲೆಯಲ್ಲಿ ಶನಿವಾರ ಎಂಟು ಕಡೆಗಳಲ್ಲಿ ಕೋವಿಶೀಲ್ಡ್ ಲಸಿಕೆ ವಿತರಣೆಗೆ ಚಾಲನೆ ನೀಡಲಾಯಿತು. ಜಿಮ್ಸ್ ಆಸ್ಪತ್ರೆಯ ಡಿ-ಗ್ರೂಪ್ ನೌಕರ ಅನಂತರಾಜ್ ಜಿಲ್ಲೆಯ ಮೊದಲ ಲಸಿಕೆ ಫಲಾನುಭವಿಯಾಗಿದ್ದಾರೆ.
ನಗರದ ಜಿಮ್ಸ್ ವೈದ್ಯಕೀಯ ಕಾಲೇಜು, ಅಫಜಲಪುರ ತಾಲೂಕಿನ ಗೊಬ್ಬೂರ ಪ್ರಾಥಮಿಕ ಆರೋಗ್ಯ ಕೇಂದ್ರ, ಚಿಂಚೋಳಿ, ಸೇಡಂ, ಜೇವರ್ಗಿ, ಆಳಂದ, ಅಫಜಲಪುರ, ಚಿತ್ತಾಪುರ ತಾಲೂಕು ಆಸ್ಪತ್ರೆಗಳಲ್ಲಿ ಕೋವಿಶೀಲ್ಡ್ ಲಸಿಕೆ ವಿತರಣೆ ಆರಂಭಿಸಲಾಗಿದೆ.
ಜಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆ ಡಿ-ಗ್ರೂಪ್ ನೌಕರ ಅನಂತರಾಜ್ ಮೊದಲ ಲಸಿಕೆ ಲಸಿಕೆ ಸ್ವೀಕರಿಸಿದರು. ಎರಡನೇ ಲಸಿಕೆ ಫಲಾನುಭವಿಯಾಗಿ ಡಿ-ಗ್ರೂಪ್ ನೌಕರೆ ಅಂಜಲಿ ಬಂಡಗಾರ ಲಸಿಕೆ ಪಡೆದರು.
ಇದನ್ನೂ ಓದಿ :ಭಯಪಡುವ ಅವಶ್ಯಕತೆ ಇಲ್ಲ: ಚಾಮರಾಜನಗರದಲ್ಲಿ ಮೊದಲ ಲಸಿಕೆ ಪಡೆದ ಮಂಜುನಾಥ್ ಅವರ ಅಭಿಪ್ರಾಯ
ಲಸಿಕೆ ನೀಡುವ ಕ್ಷಣಕ್ಕೆ ಸಂಸದ.ಡಾ.ಉಮೇಶ್ ಜಾಧವ್, ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, ಜಿಪಂ ಅಧ್ಯಕ್ಷೆ ಸುವರ್ಣಾ ಮಾಲಾಜಿ, ಉಪಾಧ್ಯಕ್ಷೆ ಶೋಭಾ ಸಿರಸಗಿ, ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್ ಸಾಕ್ಷಿಯಾದರು.
ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ, ಜಿಪಂ ಸಿಇಓ ಡಾ.ಪಿ.ರಾಜಾ, ಜಿಮ್ಸ್ ನಿರ್ದೇಶಕಿ ಡಾ.ಕವಿತಾ ಪಾಟೀಲ್, ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಶೇಖರ್ ಮಾಲಿ, ಜಿಲ್ಲಾ ಸರ್ಜನ್ ಡಾ.ಎ.ಎಸ್.ರುದ್ರವಾಡಿ ಸೇರಿ ಹಲವರು ಉಪಸ್ಥಿತರಿದ್ದಾರೆ.
ಇದಕ್ಕೂ ಮುನ್ನ ಲಸಿಕೆ ಕೇಂದ್ರ ಹಾಗೂ ನೋಂದಣಿ ಕೊಠಡಿಯನ್ನು ಅಧಿಕಾರಿಗಳು ವೀಕ್ಷಿಸಿ ಸಿದ್ಧತೆ ಪರಿಶೀಲಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ನೇರಪ್ರಸಾರ ವೀಕ್ಷಿಸಿದರು. ನಂತರ ಲಸಿಕೆ ವಿತರಣೆಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಸದ ಡಾ. ಉಮೇಶ ಜಾಧವ್ ಮಾತನಾಡಿ,
ಕೊರೊನಾ ಲಸಿಕೆ ಬಗ್ಗೆ ದೇಶದ ಜನರಿಗೆ ಸಾಕಷ್ಟು ನಿರೀಕ್ಷೆ ಇತ್ತು. ಇವತ್ತು ಆ ದಿನ ಬಂದಿದ್ದು, ಲಸಿಕೆ ವಿತರಣೆ ಅಭಿಯಾನ ಯಶಸ್ವಿಯಾಗುತ್ತದೆ. ಮೊದಲ ಹಂತದಲ್ಲಿ 3 ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತದೆ. ನಂತರ ಪ್ರತಿಯೊಬ್ಬರಿಗೂ ಲಸಿಕೆ ದೊರೆಯಲಿದೆ. ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮವಾಗುವುದಿಲ್ಲ. ಕೆಲವೊಮ್ಮೆ ಯಾವುದೇ ಸಣ್ಣಪುಟ್ಟ ಸಮಸ್ಯೆ ಉಂಟಾದಲ್ಲಿ ಆತಂಕ ಪಡುವ ಅಗತ್ಯವಿಲ್ಲ ಎಂದರು.
ಜಿಲ್ಲೆಗೆ ಈಗ 12 ಸಾವಿರ ಡೋಸ್ ಲಸಿಕೆ ಪೂರೈಕೆಯಾಗಿದೆ. ಉಳಿಕೆ ಡೋಸ್ ಲಸಿಕೆಯನ್ನು ಶೀಘ್ರದಲ್ಲೇ ಸರ್ಕಾರ ಪೂರೈಸಲಿದೆ ಎಂದು ಸಂಸದರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.