ಕಲಬುರಗಿ: ಎಂಆರ್ ಎಂಸಿ ವಜ್ರಮಹೋತ್ಸವಕ್ಕೆ ರಾಷ್ಟ್ರಪತಿಗಳನ್ನು ಆಹ್ವಾನಿಸಲು ನಿರ್ಧಾರ
Team Udayavani, Feb 22, 2023, 3:48 PM IST
ಕಲಬುರಗಿ: ಪ್ರತಿಷ್ಠಿತ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯ (ಎಂಆರ್ ಎಂಸಿ)ನ ವಜ್ರಮಹೋತ್ಸವ ಹಾಗೂ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಮಾವೇಶ ಬರುವ ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಹೈದ್ರಾಬಾದ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಭೀಮಾಶಂಕರ ಬಿಲಗುಂದಿ ತಿಳಿಸಿದರು.
ಮಹಾವಿದ್ಯಾಲಯದಲ್ಲಿಂದು ನಡೆದ ಮಹಾವಿದ್ಯಾಲಯದ ಸಿ ಮತ್ತು ಡಿ ಬ್ಲಾಕ್ ಹೊಸ ಕಟ್ಟಡಗಳ ಅಡಿಗಲ್ಲು ಸಮಾರಂಭ ಉದ್ದೇಶಿಸಿ ಮಾತನಾಡಿದರು. ಮೂರು ದಿನಗಳ ಕಾಲ ಮಹೋತ್ಸವ ಆಚರಿಸಲು ಉದ್ದೇಶಿಸಲಾಗಿದೆ. ಸಮಾರಂಭ ಉದ್ಘಾಟನೆಗೆ ರಾಷ್ಟ್ರ ಪತಿಗಳಾದ ದ್ರೌಪದಿ ಮುರ್ಮು ಅವರನ್ನು ಆವ್ಹಾನಿಸಲಾಗುವುದು. ಮುಂಬರುವ ದಿನಗಳಲ್ಲಿ ಸಂಸ್ಥೆಯಿಂದ ಆಹ್ವಾನ ಸಲ್ಲಿಸಲಾಗುವುದು ಎಂದು ಡಾ. ಬಿಲಗುಂದಿ ವಿವರಣೆ ನೀಡಿದರು.
ಮಹಾವಿದ್ಯಾಲಯದ ಈಗಿನ ಕಟ್ಟಡ 60 ವರ್ಷಗಳಷ್ಟು ಹಳೇಯದಾಗಿದ್ದು, ನವೀಕರಣ ಬದಲು ಹೊಸದಾಗಿ ನಿರ್ಮಾಣ ಸೂಕ್ತ ಎಂಬುದನ್ನು ಮನಗಂಡು ಈಗ ಸಿ ಮತ್ತು ಡಿ ಬ್ಲಾಕ್ ಹೊಸ ಕಟ್ಟಡಗಳನ್ನು ಸುಮಾರು 6 ಕೋ.ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ವಜ್ರ ಮಹೋತ್ಸವ ಹೊತ್ತಿಗೆ ಈ ಹೊಸ ಕಟ್ಟಡ ಗಳನ್ನು ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಪೂಜ್ಯರಿಂದು ಹೊಸ ಕಟ್ಟಡಗಳ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದು, ಕಾಮಗಾರಿ ಬೇಗ ಮುಗಿಯುವ ದೃಢ ವಿಶ್ವಾಸ ಹೊಂದಲಾಗಿದೆ ಎಂದರು.
ತಾವು ಸಂಸ್ಥೆ ಅಧ್ಯಕ್ಷರಾದ ಮೇಲೆ ಆಡಳಿತದಲ್ಲಿ ಪಾರದರ್ಶಕತೆ ತಂದ ಪರಿಣಾಮ ಇಷ್ಟೆಲ್ಲ ಸಾಧನೆಗಳನ್ನು ಮಾಡಲು ಸಾಧ್ಯವಾಗುತ್ತಿದೆ ಎಂದು ಡಾ.ಬಿಲಗುಂದಿ ಹೇಳಿದರು.
ಮೌನಯೋಗಿ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳವರು ಹಾಗೂ ಹಾರಕೂಡದ ಡಾ. ಚೆನ್ನವೀರ ಶಿವಾಚಾರ್ಯರು ಮಹಾವಿದ್ಯಾಲಯದ ಹೊಸ ಸಿ ಮತ್ತು ಡಿ ಬ್ಲಾಕ್ ಗಳ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಿದರು.
ಸಂಸ್ಥೆಯ ಕಾರ್ಯದರ್ಶಿ ಡಾ.ಜಗನ್ನಾಥ ವಿಜಾಪುರ, ಜಂಟಿ ಕಾರ್ಯದರ್ಶಿ ಮಹಾದೇವಪ್ಪ ರಾಂಪೂರೆ, ಆಡಳಿತ ಮಂಡಳಿ ಸದಸ್ಯ ರಾದ ಡಾ.ಶರಣಬಸಪ್ಪ ಕಾಮರೆಡ್ಡಿ, ಡಾ. ಅನೀಲ ಪಟ್ಟಣ, ಬಸವರಾಜ ಖಂಡೇರಾವ್, ಸೋಮನಾಥ ನಿಗ್ಗುಡಗಿ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.