“ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್‌”- ಮಾಲತೇಶ ಸ್ವಾಮಿ ಕಾರ್ಣಿಕ

ಈ ವರ್ಷ ಮತ್ತೆ ಬರಗಾಲ, ಕೇಂದ್ರದಲ್ಲಿ ಬಿಜೆಪಿ ಸರಕಾರ ರಚನೆ

Team Udayavani, Oct 24, 2023, 11:56 PM IST

paraak

ರಾಣಿಬೆನ್ನೂರ: ತಾಲೂಕಿನ ಸುಕ್ಷೇತ್ರ ದೇವರಗುಡ್ಡದಲ್ಲಿ ಪ್ರತೀವರ್ಷ ದಸರಾ ಹಬ್ಬದ ಪ್ರಯುಕ್ತ ನಡೆಯುವ ಶ್ರೀ ಮಾಲತೇಶ ಸ್ವಾಮಿ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ನಾಗಪ್ಪ ಉರ್ಮಿ ಅವರು 21 ಅಡಿ ಬಿಲ್ಲನ್ನೇರಿ ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್‌ ಎಂಬ ದೈವ ವಾಣಿಯನ್ನು ಸೋಮವಾರ ಸಂಜೆ ನುಡಿದರು.

30 ಸಾವಿರಕ್ಕೂ ಹೆಚ್ಚಿನ ಭಕ್ತರು ದೇವರಗುಡ್ಡ ಮಾಲತೇಶ ಸ್ವಾಮಿ ಕಾರ್ಣಿಕ ಭವಿಷ್ಯ ಕೇಳಲು ದೇವರಗುಡ್ಡ ಕ್ಷೇತ್ರಕ್ಕೆ ಆಗಮಿಸಿದ್ದರು. ಗೊರವಯ್ಯ ನಾಗಪ್ಪಜ್ಜ ಆಯುಧ ಪೂಜೆ ದಿನ ಈ ವರ್ಷದ ಭವಿಷ್ಯವಾಣಿ ನುಡಿದಿದ್ದಾರೆ.

ಡೆಂಕಣಮರಡಿಯಲ್ಲಿ ಕಾರ್ಣಿಕ ವಾಣಿ ಆಲಿಸಲು ಸುಮಾರು 30 ಸಾವಿರಕ್ಕೂ ಹೆಚ್ಚು ಭಕ್ತರು ನೆರೆದಿದ್ದರು. ಬಿಲ್ಲನ್ನೇರಿದ ಮಾಲತೇಶ ಸ್ವಾಮಿ ಗೊರವಯ್ಯನವರು “ಮುಕ್ಕೋಟಿ ಚೆಲ್ಲಿತಲೆ ಕಲ್ಯಾಣ ಕಟ್ಟಿತಲೆ ಪರಾಕ್‌’ ಎಂದು ಭವಿಷ್ಯ ನುಡಿದರು. ಉತ್ತರ ಕರ್ನಾಟಕದ ಬಹುತೇಕ ಭಕ್ತರು ಈ ಭವಿಷ್ಯ ನಂಬುತ್ತಾರೆ.

ಗೊರವಯ್ಯ ನಾಗಪ್ಪಜ್ಜ ಅವರು ನುಡಿದ ಭವಿಷ್ಯವಾಣಿಯ ವಿಶ್ಲೇಷಣೆ ಮಾಡಿದ ಪ್ರಧಾನ ಅರ್ಚಕ ಅರ್ಚಕ ಸಂತೋಷ ಭಟ್ಟ ಗುರೂಜಿ, ಈ ವರ್ಷ ರಾಜ್ಯಕ್ಕೆ ಮಳೆಯ ಅವಕೃಪೆ ಕಾಡಲಿದೆ. ಮುಕ್ಕೋಟಿ ಚೆಲ್ಲಿತಲೆ ಕಲ್ಯಾಣ ಕಟ್ಟಿತಲೆ ಅಂದರೆ, ಮುಕ್ಕೋಟಿ ರೈತರು ನೀರಿಗಾಗಿ ಹಣ ಚೆಲ್ಲಿದ್ದಾರೆ. ಮಳೆ, ಬೆಳೆಯಲ್ಲಿದೆ ನಷ್ಟವಾಗುವ ಸಾಧ್ಯತೆ ಇದೆ. ರಾಜ್ಯಕ್ಕೆ ವರುಣನ ಅವಕೃಪೆಯಿಂದಾಗಿ ಭೀಕರ ಬರಗಾಲ ಎದುರಾಗಬಹುದು ಎಂದು ತಿಳಿಸಿದ್ದಾರೆ.

ರಾಜಕೀಯವಾಗಿ ವಿಶ್ಲೇಷಣೆ ಮಾಡಿದ ಗುರೂಜಿ, ಮುಕ್ಕೋಟಿ ಮತದಾರರ ಮತದ ಆಶೀರ್ವಾದದಿಂದ ರಾಜ್ಯದಲ್ಲಿ ಒಮ್ಮತದ ಸರಕಾರ ರಚನೆಯಾಗಿದೆ. ಆದರೆ, ಒಂದು ಹೆಣ್ಣಿನ ಹಸ್ತಕ್ಷೇಪದಿಂದ ಸರಕಾರ ಏರುಪೇರಾಗುವ ಸಂಭವವಿದೆ. ರಾಜ್ಯದಲ್ಲಿ ಸರಕಾರ ಅದಲು ಬದಲಾಗಬಹುದು. ಕಲ್ಯಾಣಿ ಅಂದರೆ ಕಮಲ ಎಂದರ್ಥ. ಹಾಗಾಗಿ, ಕೇಂದ್ರದಲ್ಲಿ ಮತ್ತೆ ಕಮಲ ಅರಳಬಹುದು ಎಂತಲೂ ಹೇಳಬಹುದು ಎಂದು ಸಂತೋಷ ಭಟ್ಟ ಗೂರೂಜಿ ಕಾರ್ಣಿಕ ಭವಿಷ್ಯವನ್ನು ವಿಶ್ಲೇಷಣೆ ಮಾಡಿದ್ದಾರೆ.

ಟಾಪ್ ನ್ಯೂಸ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.