ಕಣ-ಚಿತ್ರಣ: ವರಕವಿ ಸರ್ವಜ್ಞನ ನಾಡಲ್ಲಿ ಬಿ.ಸಿ.ಪಾಟೀಲ್‌-ಬಣಕಾರ್‌ ಮತ್ತೆ ಫೈಟ್‌

ಹಿರೇಕೆರೂರ ಕ್ಷೇತ್ರ

Team Udayavani, Apr 29, 2023, 8:41 AM IST

BANAKAR BC

ಹಾವೇರಿ: ವರಕವಿ ಸರ್ವಜ್ಞನ ನಾಡು ಹಿರೇಕೆರೂರ ಕ್ಷೇತ್ರದಲ್ಲಿ ಚುನಾವಣ ಪ್ರಚಾರ ಕಾವೇರುತ್ತಿದ್ದು, 2019ರ ಉಪಚುನಾವಣೆಯಲ್ಲಿ “ಜೋಡೆತ್ತು”ಗಳಂತೆ ಕ್ಷೇತ್ರದಾದ್ಯಂತ ಸಂಚರಿಸಿದ್ದ ಬಿ.ಸಿ.ಪಾಟೀಲ್‌ ಮತ್ತು ಯು.ಬಿ.ಬಣಕಾರ್‌ ನಡುವೆಯೇ ಈ ಬಾರಿ ಮತ್ತೆ ಜಿದ್ದಾಜಿದ್ದಿನ ಕಾಳಗ ಏರ್ಪಟ್ಟಿದೆ. ಹಳೆ ಎದುರಾಳಿಗಳೇ ಪಕ್ಷ ಬದಲಿಸಿಕೊಂಡು ಅಖಾಡಕ್ಕೆ ಇಳಿದಿರುವುದು ಚುನಾವಣ ರಣಕಣ ರಂಗೇರುವಂತೆ ಮಾಡಿದೆ.

ಕ್ಷೇತ್ರದಲ್ಲಿ ಕಳೆದ ಚುನಾವಣೆಗಳಂತೆ ಈ ಬಾರಿಯೂ ಬಿಜೆಪಿ, ಕಾಂಗ್ರೆಸ್‌ ನಡುವೆ ಪೈಪೋಟಿ ಏರ್ಪಟ್ಟಿದೆ. ಹಿರೇಕೆರೂರು ಕ್ಷೇತ್ರದಲ್ಲಿ ಒಂದು ಬಾರಿ ಜೆಡಿಎಸ್‌ಗೆ ಗೆಲುವು ಸಿಕ್ಕಿದ್ದರೂ ಅದು ವ್ಯಕ್ತಿ ವರ್ಚಸ್ಸಿನಿಂದ ಎಂಬುದು ಮತದಾರರ ಅಭಿಪ್ರಾಯ. ಹೀಗಾಗಿ ಈ ಬಾರಿ ಬಿಜೆಪಿ, ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ನಡೆಯಲಿದೆ. 2019ರ ಉಪಚುನಾವಣೆಯಲ್ಲಿ ಗೆದ್ದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್‌ ಕೊನೆಯ ಚುನಾವಣೆ ಎಂದು ಹೇಳಿ ಬಿಜೆಪಿಯಿಂದ ಕಣಕ್ಕಿ ಳಿದಿದ್ದಾರೆ. 2019ರ ಉಪಚುನಾವಣೆಯಲ್ಲಿ ಬಿ.ಸಿ.ಪಾಟೀಲ್‌ ಅವರಿಗೆ ಬೆಂಬಲವಾಗಿ ನಿಂತು ಅವರ ಗೆಲುವಿಗೆ ಶ್ರಮಿಸಿದ್ದ ಯು.ಬಿ.ಬಣಕಾರ್‌ ಕಾಂಗ್ರೆಸ್‌ ಸೇರಿ ಮತ್ತೆ ಪೈಪೋಟಿ ನೀಡಲು ಸಜ್ಜಾಗಿದ್ದಾರೆ. ಜೆಡಿಎಸ್‌ನಿಂದ ಜಯಾನಂದ ಜಾವಣ್ಣನವರ ಸ್ಪರ್ಧಿಸಿದ್ದಾರೆ. ಚುನಾವಣ ಕಣದಲ್ಲಿ ಬಿ.ಸಿ.ಪಾಟೀಲ್‌ ಹಾಗೂ ಯು.ಬಿ. ಬಣಕಾರ್‌ ಪರಸ್ಪರ ಎದುರಾಳಿಗಳಾಗುತ್ತಿರುವುದು ಇದೇ ಮೊದಲೇನಲ್ಲ. ಈಗಾಗಲೇ 4 ಬಾರಿ ಸೆಣಸಾಡಿದ್ದು, ಬಿ.ಸಿ.ಪಾಟೀಲ್‌ 3 ಬಾರಿ ಮತ್ತು ಯು.ಬಿ.ಬಣಕಾರ್‌ ಒಮ್ಮೆ ಗೆಲುವಿನ ನಗೆ ಬೀರಿದ್ದಾರೆ. 5ನೇ ಬಾರಿಯ ಸ್ಪರ್ಧೆಗೆ ಅಖಾಡ ಸಿದ್ಧವಾಗಿದೆ. ಹೀಗಾಗಿ ಹಿರೇಕೆರೂರು ಕ್ಷೇತ್ರ ಹೈವೋಲ್ಟೆಜ್‌ ಕ್ಷೇತ್ರವಾಗಿ ಪರಿಣಮಿಸಿದೆ.

ಜಾತಿ ಲೆಕ್ಕಾಚಾರ ಹೇಗಿದೆ?: ಹಾವೇರಿ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲೇ ಹಿರೇಕೆರೂರು ಕ್ಷೇತ್ರ ಅತೀ ಕಡಿಮೆ ಮತದಾರರನ್ನು ಹೊಂದಿದೆ. ಇಲ್ಲಿ ಸಾದರ ಲಿಂಗಾಯತ ಸಮುದಾಯ ಪ್ರಾಬಲ್ಯ ಹೊಂದಿದೆ. ಕುರುಬ, ಮುಸ್ಲಿಂ ಮತ್ತು ದಲಿತ ಸಮುದಾಯದವರು ಗಣನೀಯ ಸಂಖ್ಯೆಯಲ್ಲಿದ್ದು, ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ. ಕ್ಷೇತ್ರದ ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳಿಬ್ಬರೂ ಸಾದರ ಲಿಂಗಾಯತ ಸಮಾಜದವರೇ ಆಗಿದ್ದಾರೆ.

ಪ್ಲಸ್‌-ಮೈನಸ್‌ ಏನು?: ಬಿ.ಸಿ.ಪಾಟೀಲ್‌ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ತಂದಿದ್ದು, ಕೈಗೊಂಡ ಅಭಿವೃದ್ಧಿ ಕಾರ್ಯಗಳು ಹಾಗೂ ಆಡಳಿತಾರೂಢ ಪಕ್ಷದ ಪ್ರಭಾವ ಪ್ಲಸ್‌ ಆದರೆ ಸ್ಥಳೀಯ ಮುಖಂಡರು, ಕಾರ್ಯಕರ್ತರೊಂದಿಗೆ ಹೊಂದಾಣಿಕೆ ಕೊರತೆ ಮೈನಸ್‌ ಆಗಬಹುದು ಎಂಬ ಲೆಕ್ಕಾಚಾರ ನಡೆದಿದೆ. ಯು.ಬಿ.ಬಣಕಾರ್‌ ಅವರಿಗೆ ಹಿಂದಿನ ಸೋಲಿ ಅನುಕಂಪ ಮತ್ತು ಕ್ಷೇತ್ರದ ಜನರ ಜತೆಗಿನ ಒಡನಾಟ ಪ್ಲಸ್‌ ಆಗಬಹುದು, ಆದರೆ ಕಾಂಗ್ರೆಸ್‌ ಕಾರ್ಯಕರ್ತರ ಅಸಮಾಧಾನ ಮೈನಸ್‌ ಆಗಬಹುದು ಎನ್ನಲಾಗಿದೆ.

~ ವೀರೇಶ ಮಡ್ಲೂರ

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.