Kumbla: ಕಣಿಪುರ ಶ್ರೀ ಗೋಪಾಲಕೃಷ್ಣ ಕ್ಷೇತ್ರ ಇಂದಿನಿಂದ ಅಷ್ಟಬಂಧ ಬ್ರಹ್ಮಕಲಶೋತ್ಸವ
Team Udayavani, Feb 15, 2024, 11:45 PM IST
ಕುಂಬಳೆ: ಸೀಮೆಯ ಪ್ರಸಿದ್ಧ ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಾಲಯದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಶ್ರೀ ನಾಗದೇವರು, ಶ್ರೀ ವ್ಯಾಘ್ರ ಚಾಮುಂಡಿ, ಗುಳಿಗ ದೈವಗಳ ಪುನಃಪ್ರತಿಷ್ಠೆಯು ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿ ಅವರ ನೇತೃತ್ವದಲ್ಲಿ ಫೆ. 16ರಿಂದ 24ರ ತನಕ ಮತ್ತು ವಾರ್ಷಿಕ ಜಾತ್ರೆಯು ಫೆ. 25ರಿಂದ 29ರ ಜರಗಲಿದೆ.
ಕ್ಷೇತ್ರದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ದಾನಿಗಳ ನೆರವಿನಿಂದ 10 ಕೋಟಿ ರೂ. ವೆಚ್ಚದಲ್ಲಿ ಈಗಾಗಲೇ ಹಲವಾರು ಕಾಮಗಾರಿಗಳು ಪೂರ್ಣಗೊಂಡಿವೆ. ಕ್ಷೇತ್ರವನ್ನು ಸಂಪೂರ್ಣವಾಗಿ ಹೂಗಳಿಂದ ಅಲಂಕರಿಸಲಾಗಿದೆ.
ಫೆ. 16ರಂದು ಬೆಳಗ್ಗೆ 10ಕ್ಕೆ ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತ, ಸಂಜೆ 6ರಿಂದ ತಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ, ಹೊರೆಕಾಣಿಕೆ ಶೋಭಾಯಾತ್ರೆ, ರಾತ್ರಿ 7ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ, ಬಿ. ವಸಂತ ಪೈ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿಯವರಿಂದ ದೀಪ ಪ್ರಜ್ವಲನ, ಸಾಮೂಹಿಕ ಭಜನೆ ಜರಲಿದೆ. ಪ್ರತೀದಿನ ಬೆಳಗಿನಿಂದ ಸಂಜೆ ತನಕ ವಿವಿಧ ತಂಡಗಳಿಂದ ಭಜನೆ, ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮ, ಮಧ್ಯಾಹ್ನ ಅನ್ನಸಂತರ್ಪಣೆ ಜರಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.