ಫೈಟರ್ ಸಾವು : ಒಂದು ದಿನ ತಡವಾಗಿ ಟ್ವೀಟ್ ಮಾಡಿದ ಚಿತ್ರದ ನಾಯಕಿ ರಚಿತಾ ರಾಮ್
Team Udayavani, Aug 10, 2021, 2:59 PM IST
ಬೆಂಗಳೂರು: ಲವ್ ಯೂ ರಚ್ಚು ಶೂಟಿಂಗ್ ವೇಳೆ ನಡೆದ ದುರಂತದ ಕುರಿತು ಚಿತ್ರದ ನಾಯಕಿ ರಚಿತಾ ರಾಮ್ ಅವರು ಕೊನೆಗೂ ಮೌನ ಮುರಿದಿದ್ದು, ಘಟನೆಯಲ್ಲಿ ಸಾವನ್ನಪ್ಪಿದ ಫೈಟರ್ ವಿವೇಕ್ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಸೋಮವಾರ (ಆಗಸ್ಟ್ 9) ಬಿಡದಿಯ ಜೋಗನಪಾಳ್ಯ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯ ಜಮೀನಿನಲ್ಲಿ ‘ಲವ್ ಯೂ ರಚ್ಚು’ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಹೈ ಟೆನ್ಷನ್ ಕರೆಂಟ್ ವೈರ್ ತಗುಲಿ ಸಾಹಸ ಕಲಾವಿದ ವಿವೇಕ್ ಸಾವನ್ನಪ್ಪಿದ್ದರು. ರಂಜಿತ್ ಎನ್ನುವ ಸಹಾಯಕ ಕಲಾವಿದನಿಗೆ ಗಂಭೀರ ಗಾಯವಾಗಿದೆ.
ಘಟನೆ ಸಂಬಂಧ ಚಿತ್ರದ ನಿರ್ದೇಶಕ ಶಂಕರ, ಚಿತ್ರದ ನಿರ್ಮಾಪಕ ಗುರುದೇಶಪಾಂಡೆ, ಚಿತ್ರದ ಸಾಹಸ ನಿರ್ದೇಶಕ ವಿನೋದ್ ಕುಮಾರ್, ಚಿತ್ರದ ಉಸ್ತುವಾರಿ ಪರ್ನಾಂಡಿಸ್ ಚಿತ್ರದ ಕ್ರೇನ್ ಅಪರೇಟರ್ ಮಹೇದವ ವಿರುದ್ಧ ದೂರು ದಾಖಲಾಗಿದೆ.
ಈ ಚಿತ್ರದಲ್ಲಿ ಅಜಯ್ ರಾವ್ ಅವರ ನಾಯಕ ನಟರಾಗಿ ನಟಿಸುತ್ತಿದ್ದು, ಇವರಿಗೆ ನಾಯಕಿಯಾಗಿ ರಚಿತಾ ರಾಮ್ ಕಾಣಿಸಿಕೊಂಡಿದ್ದಾರೆ. ಘಟನೆ ನಡೆದು ಒಂದು ದಿನದ ಬಳಿಕ ರಚಿತಾ ರಾಮ್ ಟ್ವೀಟ್ ಮಾಡಿದ್ದು, “ವಿದ್ಯುತ್ ಅವಘಡದಿಂದ ಸಾವನ್ನಪ್ಪಿರುವ ಫೈಟರ್ ವಿವೇಕ್ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ಸಿಗಲಿ” ಎಂದು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.