![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 19, 2023, 11:24 PM IST
ಬೆಂಗಳೂರು: ಕಾಂತರಾಜ ಆಯೋಗದ ವರದಿ ಜಾರಿ ವಿಚಾರದಲ್ಲಿ ಅಪಸ್ವರ ಎತ್ತಿರುವ ರಾಜ್ಯ ಒಕ್ಕಲಿಗರ ಸಂಘ, ಯಾವುದೇ ಕಾರಣಕ್ಕೂ ವರದಿ ಜಾರಿ ಮಾಡಬಾರದು ಎಂದು ಸರಕಾರದ ಮೇಲೆ ಒತ್ತಡ ಹಾಕುವ ತಂತ್ರರೂಪಿಸಿದೆ. ಒಕ್ಕಲಿಗ ಸಮುದಾಯದ ಸ್ವಾಮೀಜಿಗಳ ಮೂಲಕ ಸರಕಾರಕ್ಕೆ ಸಂದೇಶ ರವಾನಿಸುವ ಆಲೋಚನೆಯಲ್ಲಿದೆ. ಈ ಸಂಬಂಧ ಚರ್ಚಿಸಲು ನ.2ರಂದು ಒಕ್ಕಲಿಗ ಮುಖಂಡರ ಸಭೆ ನಡೆಯಲಿದೆ.
ಈ ವಿಚಾರವಾಗಿಯೇ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸ್ಫಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ| ನಂಜಾವ ಧೂತ ಸ್ವಾಮೀಜಿ ಮತ್ತು ಚಂದ್ರಶೇಖರ ಸ್ವಾಮೀಜಿ ಸಮ್ಮುಖದಲ್ಲಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಸಭೆ ಕರೆದು ಕಾಂತರಾಜ ಆಯೋಗದ ವರದಿ ಬಗ್ಗೆ ಚರ್ಚೆ ಹಮ್ಮಿಕೊಂಡಿದೆ. ಈ ಸಭೆಯಲ್ಲಿ ಕಾಂತರಾಜ ಆಯೋಗದ ವರದಿಯ ಸಾಧಕ-ಬಾಧಕಗಳ ಬಗ್ಗೆ ದೊಡ್ಡಮಟ್ಟದ ಚರ್ಚೆ ನಡೆದು ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ.
ಶ್ರೀಗಳ ಭೇಟಿ
ರಾಜ್ಯ ಒಕ್ಕಲಿಗ ಮೀಸಲಾತಿ ಹೋರಾಟ ಸಮಿತಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಅವರನ್ನು ಗುರುವಾರ ಭೇಟಿ ಮಾಡಿ ಸಮಾಲೋಚಿಸಿತು. ಕಾಂತರಾಜ ಆಯೋಗದ ವಿಚಾರವಾಗಿ ನ.2ರಂದು ಒಕ್ಕಲಿಗ ಸಂಘದಲ್ಲಿ ಹಮ್ಮಿಕೊಂಡಿರುವ ಸಭೆಯ ಸಾನಿಧ್ಯ ವಹಿಸುವಂತೆ ಮನವಿ ಮಾಡಿತು. ಶ್ರೀಗಳು ಸಭೆಯಲ್ಲಿ ಭಾಗವಹಿಸಲು ಸಮ್ಮತಿ ನೀಡಿದ್ದಾರೆ ಎಂದು ಹೋರಾಟ ಸಮಿತಿ ತಿಳಿಸಿದೆ.
ಉಪ ಮುಖ್ಯಮಂತ್ರಿಗಳಿಗೆ ಆಹ್ವಾನ
ಈಗಾಗಲೇ ಒಕ್ಕಲಿಗ ಸಂಘ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂಗಳಾದ ಎಚ್.ಡಿ.ಕುಮಾರಸ್ವಾಮಿ, ಡಿ.ವಿ.ಸದಾನಂದ ಗೌಡ, ಮಾಜಿ ಸಚಿವರಾದ ಆರ್.ಅಶೋಕ್, ಅಶ್ವತ್ಥ ನಾರಾಯಣ, ಗೋಪಾಲಯ್ಯ ಸಹಿತ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಲ್ಲಿರುವ ಒಕ್ಕಲಿಗ ಶಾಸಕರಿಗೆ ಆಹ್ವಾನ ನೀಡಲಾಗಿದೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.