ಕೋವಿಡ್ ಆತಂಕ : ಈ ಬಾರಿಯೂ ಕರಾವಳಿ ಉತ್ಸವ ಇಲ್ಲ

Team Udayavani, Jan 15, 2022, 12:32 PM IST

ಕೋವಿಡ್ ಆತಂಕ : ಈ ಬಾರಿಯೂ ಕರಾವಳಿ ಉತ್ಸವ ಇಲ್ಲ

ಮಹಾನಗರ : ಕರಾವಳಿಗರು ಸಂಭ್ರಮದಿಂದ ಪಾಲ್ಗೊಳ್ಳುವ ಕರಾವಳಿ ಉತ್ಸವ ಈ ಬಾರಿಯೂ ಆಯೋಜನೆಗೊಳ್ಳುವುದು ಅನುಮಾನ ಎನ್ನಲಾಗಿದೆ. ಜನವರಿ ತಿಂಗಳಿನಲ್ಲಿ ಕರಾವಳಿ ಉತ್ಸವ ನಡೆಸುವ ಕುರಿತಂತೆ ಜಿಲ್ಲಾಡಳಿತ ಚಿಂತನೆ ನಡೆಸಿತ್ತಾದರೂ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸದ್ಯದ ಮಟ್ಟಿಗೆ ಕರಾವಳಿ ಉತ್ಸವವನ್ನು ತಡೆಹಿಡಿಯಲು ನಿರ್ಧರಿಸಲಾಗಿದೆ.

ಕರಾವಳಿ ಉತ್ಸವವನ್ನು ಜನವರಿ ತಿಂಗಳಿನಲ್ಲಿ ಆಯೋಜಿಸಲು ದ.ಕ. ಜಿಲ್ಲಾಡಳಿತ ಈ ಹಿಂದೆ ಸಿದ್ಧತೆ ನಡೆಸಿತ್ತು. ವಿಶೇಷವಾಗಿ ಆಯೋಜಿಸುವ ಕುರಿತು ಚರ್ಚೆಯನ್ನೂ ನಡೆಸಲಾಗಿತ್ತು. ಉತ್ಸವ ಆಯೋಜನೆಗೆ ಹಣಕಾಸಿನ ನೆರವಿಗೆಂದು ರಾಜ್ಯ ಸರಕಾರಕ್ಕೆ ಪತ್ರ ಬರೆಯಲು ನಿರ್ಧರಿಸಲಾಗಿತ್ತು. ಆದರೆ ಸದ್ಯ ದಿನವಹಿ ಕೋವಿಡ್‌ ಪ್ರಕರಣ ಏರುಗತಿಯಲ್ಲಿ ಸಾಗುತ್ತಿದ್ದು, ಜಿಲ್ಲೆಯ ಪಾಸಿಟಿವಿಟಿ ದರ ಕೂಡ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಕರಾವಳಿ ಉತ್ಸವವನ್ನು ನಡೆಸದಿರಲು ನಿರ್ಧರಿಸಲಾಗಿದೆ.

ಸಾಮಾನ್ಯವಾಗಿ ಡಿಸೆಂಬರ್‌ ಅಂತ್ಯ-ಜನವರಿ ವೇಳೆಗೆ ಕರಾವಳಿ ಉತ್ಸವವು ಮಂಗಳೂರು ಕೇಂದ್ರೀಕೃತವಾಗಿ ನಡೆಯುತ್ತದೆ. ಕಡಲ ಕಿನಾರೆಯಲ್ಲಿ ಬೀಚ್‌ ಉತ್ಸವ, ಕದ್ರಿ ಪಾರ್ಕ್‌ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಉತ್ಸವ ಮೈದಾನದಲ್ಲಿ ಸಾಂಸ್ಕೃತಿಕ ಉತ್ಸವ, ವಸ್ತು ಪ್ರದರ್ಶನ ಸೇರಿದಂತೆ ಹತ್ತು ಹಲವು ಕಾರ್ಯ ಕಲಾಪಗಳು ಜನರ ಮನ ಸೆಳೆಯುತ್ತದೆ. ಇದನ್ನು ವೀಕ್ಷಿಸಲು ಹಾಗೂ ಸಂಭ್ರಮಿಸಲು ಲಕ್ಷಾಂತರ ಜನರು ವಿವಿಧ ಕಡೆಗಳಿಂದ ಆಗಮಿಸುತ್ತಿದ್ದರು.

ಕಳೆದ ವರ್ಷವೂ ಉತ್ಸವ ರದ್ದು
ಕೋವಿಡ್‌ ಕಾರಣದಿಂದಾಗಿ ಮಂಗಳೂರು ನಗರದಲ್ಲಿ ಕಳೆದ ವರ್ಷವೂ ಕರಾವಳಿ ಉತ್ಸವ ನಡೆಯಲಿಲ್ಲ. ಕರಾವಳಿ ಉತ್ಸವ ಮೈದಾನದಲ್ಲಿ ಪ್ರತೀ ವರ್ಷ ನಡೆಯುವ ವಸ್ತು ಪ್ರದರ್ಶನದಲ್ಲಿ ವಿವಿಧ ಜಿಲ್ಲೆ/ರಾಜ್ಯಗಳ ಹತ್ತಾರು ಮಳಿಗೆಗಳು ಇರುತ್ತವೆ. ಇದನ್ನು ವೀಕ್ಷಿಸಲು ಮತ್ತು ವಸ್ತುಗಳ ಖರೀದಿಗಾಗಿ ಪ್ರತೀ ದಿನ ಸಾವಿರಾರು ಮಂದಿ ಉತ್ಸವ ಮೈದಾನಕ್ಕೆ ಆಗಮಿಸುತ್ತಿದ್ದರು. ಇದು ಸ್ಥಳೀಯ ಆರ್ಥಿಕತೆಯ ಉತ್ತೇಜನಕ್ಕೂ ಪೂರಕವಾಗುತ್ತಿತ್ತು.

ಫಲಪುಷ್ಪ ಪ್ರದರ್ಶನವೂ ಇಲ್ಲ
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಆಯೋಜಿಸಲಾಗುತ್ತಿದ್ದ ಫಲಪುಷ್ಪ ಪ್ರದರ್ಶನವನ್ನು ಕೂಡ ಈ ಬಾರಿ ಆಯೋಜನೆ ಮಾಡದಿರಲು ನಿರ್ಧರಿ ಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷವೂ ಫಲಪುಷ್ಪ ಪ್ರರ್ದಶನ ರದ್ದುಗೊಂಡಿತ್ತು. ಈ ಹಿಂದೆ ಕದ್ರಿ ಪಾರ್ಕ್‌ ಮೂರು ದಿನಗಳ ಕಾಲ ಕಣ್ಮನ ಸೆಳೆಯುವ ಬಣ್ಣ ಬಣ್ಣದ ಪುಷ್ಪಗಳು, ತರಕಾರಿ, ಹಣ್ಣುಗಳಿಂದ ಕಂಗೊಳಿಸುತ್ತಿತ್ತು.

ತಾತ್ಕಾಲಿಕ ರದ್ದು
ದಕ್ಷಿಣ ಕನ್ನಡ ಸಹಿತ ರಾಜ್ಯದಲ್ಲಿ ಕೊರೊನಾ ದಿನದ ವರದಿ ಏರುಗತಿಯಲ್ಲಿ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಕರಾವಳಿ ಉತ್ಸವವನ್ನು ಸದ್ಯದ ಮಟ್ಟಿಗೆ ನಡೆಸದಿರಲು ತೀರ್ಮಾನಿಸಿದ್ದೇವೆ. ಉತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದೆವು. ಆದರೆ ಕೊರೊನಾ ತೀವ್ರತೆ ಹಿನ್ನೆಲೆಯಲ್ಲಿ ಉತ್ಸವವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಕೊರೊನಾ ತೀವ್ರತೆ ಕಡಿಮೆಯಾದರೆ ಮುಂದಿನ ದಿನಗಳಲ್ಲಿ ಆಯೋಜನೆ ಮಾಡುತ್ತೇವೆ.
– ಡಿ. ವೇದವ್ಯಾಸ ಕಾಮತ್‌, ಶಾಸಕರು

ಟಾಪ್ ನ್ಯೂಸ್

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.