Karkala ಪರಶುರಾಮ ಥೀಮ್ ಪಾರ್ಕ್: ಪ್ರಕರಣಕ್ಕೆ ಮಧ್ಯಾಂತರ ತಡೆ
Team Udayavani, Aug 20, 2024, 11:44 PM IST
ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ರಚನೆಯಲ್ಲಿ ಅಕ್ರಮ ಎಸಗಿದ್ದಾರೆಂದು ಆರೋಪಿಸಿ ಶಿಲ್ಪ ಕಲಾವಿದ ಹಾಗೂ ಕ್ರಿಷ್ ಆರ್ಟ್ ವರ್ಲ್ಡ್ ಮುಖ್ಯಸ್ಥ ಕೃಷ್ಣ ನಾಯಕ್ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ಪ್ರಕರಣದ ಸಂಬಂಧ ಕಾರ್ಕಳ ಟೌನ್ ಪೊಲೀಸರು ದಾಖಲಿಸಿರುವ ಎಫ್ಐಆರ್ ಹಾಗೂ ಕಾರ್ಕಳ ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಕೃಷ್ಣ ನಾಯಕ್ ಸಲ್ಲಿಸಿದ್ದ ಅರ್ಜಿಯು ನ್ಯಾಯ ಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
ಸ್ವಲ್ಪ ಸಮಯ ಅರ್ಜಿದಾರರ ಪರ ವಕೀಲ ಎಂ. ಅರುಣ್ ಶ್ಯಾಮ್ ಅವರ ವಾದವನ್ನು ಆಲಿಸಿದ ನ್ಯಾಯಪೀಠ ಬಳಿಕ ಅರ್ಜಿದಾರರ ವಿರುದ್ಧದ ಪ್ರಕರಣಕ್ಕೆ ಮಧ್ಯಾಂತರ ತಡೆ ನೀಡಿ ವಿಚಾರಣೆಯನ್ನು ಸೆ. 10ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.