Karnataka Bank: ಅಯೋಧ್ಯೆಯಲ್ಲಿ ಕರ್ಣಾಟಕ ಬ್ಯಾಂಕ್ ಶಾಖೆ, ಮಿನಿ ಇ-ಲಾಬಿ
Team Udayavani, Jan 12, 2024, 1:30 AM IST
ಮಂಗಳೂರು: ಕರ್ಣಾಟಕ ಬ್ಯಾಂಕ್ ಅಯೋಧ್ಯೆಯಲ್ಲಿ ಮಿನಿ ಇ-ಲಾಬಿಯೊಂದಿಗೆ ತನ್ನ 915ನೇ ಶಾಖೆಯನ್ನು ಗುರುವಾರ ಆರಂಭಿಸಿದೆ.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯ ಡಾ| ಅನಿಲ್ ಮಿಶ್ರಾ ಅವರು ನೂತನ ಶಾಖೆಯನ್ನು ಹಾಗೂ ಗೋಪಾಲ್ ನಾಗರಕಟ್ಟೆ ಅವರು ಮಿನಿ ಇ-ಲಾಬಿಯನ್ನು ಉದ್ಘಾಟಿಸಿದರು.
ಬ್ಯಾಂಕಿನ ಎಂಡಿ ಮತ್ತು ಸಿಇಒ ಶ್ರೀಕೃಷ್ಣನ್ ಎಚ್. ದೀಪ ಬೆಳಗಿಸಿ ಮಾತನಾಡಿ, ಜಾಗತಿಕ ಭೂಪಟದಲ್ಲಿ ವಿರಾಜಮಾನವಾಗಿರುವ ಪವಿತ್ರ ನಗರವಾದ ಅಯೋಧ್ಯೆಗೆ ಕಾಲಿಡಲು ನಾವು ಸಂತೋಷಪಡುತ್ತೇವೆ. ಇದೀಗ ವಿಶ್ವ ದರ್ಜೆಯ ಮೂಲಸೌಕರ್ಯದೊಂದಿಗೆ ಅಯೋಧ್ಯೆಯು ಸಾಂಸ್ಕೃತಿಕ ಸಂರಕ್ಷಣೆಯ ಪರಿಪೂರ್ಣ ತಾಣವಾಗಿ ಹೊರಹೊಮ್ಮಿದೆ ಹಾಗೂ ಪ್ರಪಂಚದೆಲ್ಲೆಡೆಯ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. 100 ವರ್ಷಗಳ ವಿಶ್ವಾಸಾರ್ಹ ಹಾಗೂ ಗ್ರಾಹಕಸ್ನೇಹಿ ಪರಂಪರೆಯನ್ನು ಹೊಂದಿರುವ ಕರ್ಣಾಟಕ ಬ್ಯಾಂಕ್, ಅಯೋಧ್ಯೆಯ ನಾಗರಿಕರಿಗೆ ಹಾಗೂ ಪ್ರವಾಸಿಗರಿಗೆ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಗಳನ್ನು ನೀಡಲಿದೆ ಎಂದರು.
ಕಾರ್ಯಕಾರಿ ನಿರ್ದೇಶಕ ಶೇಖರ ರಾವ್ ಮಾತನಾಡಿ, ಭಗವಾನ್ ಶ್ರೀರಾಮನ ಪವಿತ್ರ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ನಮ್ಮ ಬ್ಯಾಂಕಿನ ಶಾಖೆಯನ್ನು ಉದ್ಘಾಟಿಸಲು ಸಂತೋಷಪಡುತ್ತೇವೆ. ಇದು ಆರ್ಥಿಕ ಸಮೃದ್ಧಿ ಮತ್ತು ಸಮುದಾಯದ ಅಭಿವೃದ್ಧಿಗೆ ನಮ್ಮ ಬದ್ಧತೆಯನ್ನು ಸಂಕೇತಿಸುತ್ತದೆ. ನಮ್ಮ ಅಯೋಧ್ಯೆ ಶಾಖೆಯು ನವೀನ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ನೀಡಲಿದೆ. ಆ ಮೂಲಕ ಗ್ರಾಹಕರಿಗೆ ತಡೆರಹಿತ ಮತ್ತು ಪರಿಣಾಮಕಾರಿ ಹಣಕಾಸು ಸೇವೆಗಳನ್ನು ಒದಗಿಸುತ್ತದೆ ಎಂದರು.
ಬ್ಯಾಂಕಿನ ನಿರ್ದೇಶಕ ಜಸ್ಟಿಸ್ ಎ.ವಿ. ಚಂದ್ರಶೇಖರ್, ದಿಲ್ಲಿ ಪ್ರಾದೇಶಿಕ ಕಚೇರಿಯ ಮುಖ್ಯಸ್ಥ ಬಸವರಾಜ ದೇಸಲ್ಲಿ, ಸಾರ್ವಜನಿಕ ಸಂಪರ್ಕಾಧಿಕಾರಿ ಮಾಧವ ವಿ.ಪಿ. ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.