ಪರಿಶಿಷ್ಟರು, ಹಿಂದುಳಿದ, ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಇನ್ನಷ್ಟು ಒತ್ತು ನೀಡಬೇಕಿತ್ತು
Team Udayavani, Feb 18, 2023, 6:35 AM IST
ಪ್ರೊ. ಎಂ. ನಾರಾಯಣ ಸ್ವಾಮಿ, ಅಂಬೇಡ್ಕರ್‌ವಾದಿ ಚಿಂತಕರು
ರಾಜ್ಯ ಮುಂಗಡ ಪತ್ರದಲ್ಲಿ ಪರಿಶಿಷ್ಟರ ಏಳಿಗೆಗೆ ಹಲವು ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ. ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಕಾಯ್ದೆಯ ಸೆಕ್ಷನ್ 7 (ಡಿ) ಪರಿಷ್ಕರಣೆ ಮಾಡಲಾಗುವುದೆಂದು ತಿಳಿಸಿರುವುದು ಸ್ವಾಗತಾರ್ಹ.
ಈ ಯೋಜನೆಗೆ ಒದಗಿಸಿರುವ ಅನುಪಾತದ ಅನುದಾನದ ಹೆಚ್ಚಳ ಗಮನಾರ್ಹ. ಗಂಗಾಕಲ್ಯಾಣ ಯೋಜನೆಗೆ ಅಗತ್ಯ ಸಹಾಯಧನ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ವಸತಿಯೋಜನೆಗಳ ಘಟಕ ವೆಚ್ಚದ ಹೆಚ್ಚಳ, ಪರಿಶಿಷ್ಟ ಗುತ್ತಿಗೆದಾರರ ಕಾಮಗಾರಿಯ ಮೊತ್ತದ ಏರಿಕೆ, ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನದ ಹೆಚ್ಚಳ, ಪರಿಶಿಷ್ಟರ 6 ಅಭಿವೃದ್ಧಿ ನಿಗಮಗಳಿಗೆ ಹೆಚ್ಚಿನ ಅನುದಾನದಂಥ ಘೋಷಣೆಗಳು ಪ್ರಶಂಸನೀಯ.ಆದರೆ, ಪರಿಶಿಷ್ಟ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಇನ್ನಷ್ಟು ಒತ್ತು ನೀಡಬೇಕಿತ್ತು.
ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುವ ಯೋಜನೆಗಳನ್ನು ರೂಪಿಸಬೇಕಿತ್ತು. ಪರಿಶಿಷ್ಟ ವಿದ್ಯಾರ್ಥಿಗಳು ಸರ್ಕಾರದ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಯಾವುದೇ ಆದಾಯ ಮಿತಿಯಿಲ್ಲದೆ ಶುಲ್ಕ ವಿನಾಯಿತಿ ನೀಡಬೇಕಿತ್ತು. ಇಂತಹ ಯೋಜನೆಯು ರಾಜ್ಯ ಸರ್ಕಾರದಲ್ಲಿ 1982ರ ಆದೇಶದಂತೆ ಜಾರಿಯಲ್ಲಿತ್ತು.
ಈ ಮುಂಗಡ ಪತ್ರದಲ್ಲಿ, ಶುಲ್ಕ ಮರುಪಾವತಿ ಕಾರ್ಯಕ್ರಮದಡಿ 400 ಕೋಟಿ ರೂಗಳನ್ನು ಒದಗಿಸಿ, ಅದನ್ನು 8 ಲಕ್ಷ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಿ, ಮತ್ತೆ ಅವರಿಂದ ಕಾಲೇಜುಗಳ ಖಾತೆಗೆ ವರ್ಗಾಯಿಸಬೇಕಾಗಿರುವುದರಿಂದ ಆ 8 ಲಕ್ಷ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಅನುಕೂಲವಾಗುವುದಿಲ್ಲ. ಒಂದು ಕೈಯಿಂದ ಕೊಟ್ಟು ಮತ್ತೂಂದು ಕೈಯಿಂದ ವಾಪಸ್ ಪಡೆಯುವುದು ವಿದ್ಯಾರ್ಥಿಗಳ ಮನಸ್ಸನ್ನು ಘಾಸಿಗೊಳಿಸುತ್ತದೆ. ಇದರ ಬದಲಿಗೆ ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿದ್ದರೆ ಸಂಪೂರ್ಣ ಶುಲ್ಕ ಮನ್ನಾ ಮಾಡಬೇಕಿತ್ತು.
1982ರ ಆದೇಶದಂತೆ ಮತ್ತೆ ಸಂಪೂರ್ಣ ಶುಲ್ಕ ವಿನಾಯಿತಿಯನ್ನು ಮರುಸ್ಥಾಪಿಸುವುದೊಳಿತು. ಆದಾಯ ಮಿತಿಯ ಒಳಗಿದ್ದು, ವಿದ್ಯಾರ್ಥಿವೇತನಕ್ಕೆ ಅರ್ಹರಾದವರಿಗೆ ನೀಡಲಾಗುವ ಶುಲ್ಕವನ್ನು ಮೊದಲಿದ್ದಂತೆ, ಕಾಲೇಜಿಗೆ ನೇರವಾಗಿ ವರ್ಗಾಯಿಸುವ ಪದ್ದತಿ ಮತ್ತೆ ಜಾರಿಗೆ ಬಂದರೆ, ವಿದ್ಯಾರ್ಥಿಗಳ ಮನಸ್ಸಿನ ಮೇಲಾಗುವ ಒತ್ತಡವೂ ತಪ್ಪುತ್ತದೆ. ಸಮಾಜ ಕಲ್ಯಾಣ ಇಲಾಖೆಯು ಈ ಕುರಿತು ಗಮನಹರಿಸಬೇಕು.
ಪ್ರಸಕ್ತ ವರ್ಷ ಒಟ್ಟು 9,500 ಸಂಖ್ಯೆಯ ಪರಿಶಿಷ್ಟ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅವಕಾಶ ನೀಡಿರುವುದು ಕಡಿಮೆಯೆನಿಸುತ್ತದೆ. ಗುಣಮಟ್ಟದ ತರಬೇತಿ ಜೊತೆಗೆ, ಹಿಂದಿನ ವರ್ಷಗಳಲ್ಲಿ ಯಶಸ್ಸು ಕಂಡವರ ಕುರಿತು ಮಾಹಿತಿ ಇರಬೇಕಿತ್ತು. ಸಾಧ್ಯವಾದರೆ ಪರಿಣಾಮಕಾರಿ ಸಮೀಕ್ಷೆಯಿಂದ ಇಂತಹ ತರಬೇತಿಗಳ ಯಶಸ್ಸಿನ ಅಧ್ಯಯನವಾಗಬೇಕು. ಸರ್ಕಾರದ ವಿವಿಧ ಇಲಾಖೆ, ನಿಗಮ, ಮಂಡಳಿ, ವಿಶ್ವವಿದ್ಯಾಲಯಗಳಲ್ಲಿರುವ ಪರಿಶಿಷ್ಟರ ಹಾಗೂ ಹಿಂದುಳಿದ ವರ್ಗಗಳ ಹಿಂಬಾಕಿ ಹುದ್ದೆಗಳ ಭರ್ತಿಗೆ ಆದ್ಯತೆ ನೀಡಬೇಕಿತ್ತು. ಕೋವಿಡ್ ಕಾಲದ ಆರ್ಥಿಕ ಮಿತವ್ಯಯಗಳ ನಂತರ ನೇಮಕಾತಿಯು ಕ್ಷೀಣಿಸಿರುವುದರಿಂದ, ಅದಕ್ಕೊಂದು ವೇಗ ನೀಡಲು ಹಿಂಬಾಕಿ ಹುದ್ದೆಗಳ ಕಾಲಮಿತಿ ಭರ್ತಿಯ ಘೋಷಣೆಯ ಅಗತ್ಯತೆಯಿತ್ತು.
ಮುಂಗಡಪತ್ರದಲ್ಲಿ ಕೆಲವು ಆಶಾದಾಯಕ ಅಂಶಗಳಿವೆ. ಅವು ಕೇವಲ ಕಾಗದದ ಮೇಲೆ ಅಂದಾಜು ಕಾರ್ಯಕ್ರಮಗಳಾಗಿ ಉಳಿಯದೆ ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಇದಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯನ್ನು ಇನ್ನಷ್ಟು ಬಲಪಡಿಸಬೇಕು. ಜೊತೆಗೆ, ಪರಿಶಿಷ್ಟ ಪಂಗಡ ನಿರ್ದೇಶನಾಲಯ, ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳೂ ಹೆಚ್ಚಿನ ಕಾರ್ಯಕ್ಷಮತೆಯಿಂದ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Squash event: ಭಾರತದ ಅನಾಹತ್,ಮಲೇಷ್ಯಾದ ಚಂದರನ್ ಚಾಂಪಿಯನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.