ಮಠ, ಮಂದಿರಕೆ ಶಿರಬಾಗಿದ ದೊರೆ: ಶಿವರಾತ್ರಿ ಮುನ್ನಾದಿನ ಮತಜಪ ಎದುರಾಳಿಗಳಿಗೆ ಜಾಗರಣೆ

ಮಠ, ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಸಾವಿರ ಕೋಟಿ

Team Udayavani, Feb 18, 2023, 7:10 AM IST

ಮಠ, ಮಂದಿರಕೆ ಶಿರಬಾಗಿದ ದೊರೆ: ಶಿವರಾತ್ರಿ ಮುನ್ನಾದಿನ ಮತಜಪ ಎದುರಾಳಿಗಳಿಗೆ ಜಾಗರಣೆ

Karnataka Budget 2023,

ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ ಹಾಗೂ ಮಠಗಳ ಜೀರ್ಣೋದ್ಧಾರಕ್ಕಾಗಿ ಬರೋಬ್ಬರಿ 1 ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿ ಕೈಗೆತ್ತಿಕೊಂಡು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ತಮ್ಮ ಮತ ಬ್ಯಾಂಕ್‌ ಗಟ್ಟಿ ಮಾಡಿಕೊಳ್ಳಲು “ಹಿಂದುತ್ವ’ ಅಜೆಂಡಾಗೂ ಒತ್ತು ಕೊಡಲಾಗಿದೆ.

ರಾಜ್ಯದಲ್ಲಿರುವ ದೇಗುಲಗಳು, ಮಠಗಳ ಜೀರ್ಣೋದ್ಧಾರಕ್ಕೆ 2023-24ನೇ ಸಾಲಿನಲ್ಲಿ ಹೆಚ್ಚಿನ ಮಹತ್ವ ನೀಡಲು ರಾಜ್ಯ ಸರಕಾರ ಮುಂದಾಗಿದೆ. ಧಾರ್ಮಿಕ ದತ್ತಿ ಇಲಾಖೆಯಿಂದ 2022-23ನೇ ಸಾಲಿಗೆ ದೇವಸ್ಥಾನಗಳ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ 425 ಕೋಟಿ ರೂ. ಅನುದಾನ ನೀಡಲಾಗಿತ್ತು. ಇದರ ಮುಂದುವರಿದ ಭಾಗವಾಗಿ ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ ಸರಕಾರವು 1 ಸಾವಿರ ಕೋಟಿ ರೂ. ನೀಡಿದೆ.

ಇದರ ಜತೆಗೆ ಧಾರ್ಮಿಕ ದತ್ತಿ ಇಲಾಖೆಯ ದೇಗುಲಗಳ ಇನಾಂ ಜಮೀನುಗಳ ವರ್ಷಾಶನವನ್ನು 48 ಸಾವಿರ ರೂ. ಗಳಿಂದ 60 ಸಾವಿರ ರೂ. ಗಳಿಗೆ ಹೆಚ್ಚಿಸಲು ಮುಂದಾಗಿದೆ. ಈ ಮೂಲಕ ದೇಗುಲಗಳ ಪ್ರಗತಿ ಕಾರ್ಯಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ಈ ಸೌಲಭ್ಯದಿಂದ ಬರೋಬ್ಬರಿ 3,721 ಸಂಸ್ಥೆಗಳಿಗೆ ಅನುಕೂಲವಾಗಲಿದೆ. ಜಗತ್ತಿಗೆ ಸಂಸತ್ತಿನ ಪರಿಕಲ್ಪನೆ ನೀಡಿದ ಬಸವಾದಿ ಶರಣರು ಸ್ಥಾಪಿಸಿದ ಅನುಭವ ಮಂಟಪದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳ್ಳಲಿದೆ.

ಕ್ಲೌಡ್ ತಂತ್ರಜ್ಞಾನದ ದತ್ತಾಂಶ ಕೇಂದ್ರ: ಕರ್ನಾಟಕ ಸರಕಾರದ ವಿವಿಧ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಉದ್ದಿಮೆಗಳ ತಂತ್ರಾಂಶದ ಅಭಿವೃದ್ಧಿಗಾಗಿ ಕ್ಲೌಡ್ ತಂತ್ರಜ್ಞಾನ ಆಧಾರಿತ 3ನೇ ಹಂತದ ದತ್ತಾಂಶ ಕೇಂದ್ರ 590 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಸರಕಾರ ಮುಂದಾಗಿದೆ. ಈ ಮೂಲಕ ಶತಮಾನದ ಡಿಜಿಟಲ್‌ ರೂಪಾಂತರ ಸಕ್ರಿಯಗೊಳಿಸುವ ತಾಂತ್ರಿಕ ಆವಿಷ್ಕಾರಕ್ಕೆ ಹೆಚ್ಚಿನ ಆದ್ಯತೆ ನೀಡಿದಂತಾಗಿದೆ.

1 ಲಕ್ಷ ಹುದ್ದೆ ಭರ್ತಿ: ರಾಜ್ಯದ ಆಡಳಿತ ವ್ಯವಸ್ಥೆ ಬಲಪಡಿಸಿ, ನಾಗರಿಕರಿಗೆ ಅತ್ಯುತ್ತಮ ಸೇವೆ ಒದಗಿಸಲು ಹಾಗೂ ಯುವ ಜನತೆಗೆ ಹೆಚ್ಚಿನ ಉದ್ಯೋಗವಕಾಶ ಒದಗಿಸುವ ನಿಟ್ಟಿನಲ್ಲಿ ಸರಕಾರವು 1 ಲಕ್ಷ ಹುದ್ದೆ ಭರ್ತಿ ಮಾಡುವುದಾಗಿ ಘೋಷಿಸಿದೆ. ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆ ಭರ್ತಿ ಮಾಡಲು ನಿರ್ಧರಿಸಿದೆ.

ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ: ಕಿತ್ತೂರು ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪನೆ ಮೂಲಕ ಉತ್ತರ ಕರ್ನಾಟಕ ಭಾಗಕ್ಕೆ ಸರಕಾರವು ವಿಶೇಷ ಒತ್ತು ನೀಡಿದೆ.

ಕಿತ್ತೂರು ಕರ್ನಾಟಕವನ್ನೊಳಗೊಂಡ ಸಮಗ್ರ ಕರ್ನಾಟಕಕ್ಕೆ ಭರಪೂರ ನೆರವು ಹರಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಹೈದರಾಬಾದ್‌ ಕರ್ನಾಟಕ ಅಭಿವೃದ್ಧಿ ಮಂಡಳಿ (ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ) ಯಂತೆ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ರಚಿಸಬೇಕೆಂಬ ಬೇಡಿಕೆಗೆ ಸ್ಪಂದಿಸಿದೆ.

3 ಸಾವಿರ ಪೋಡಿ ಮುಕ್ತ ಗ್ರಾಮ: ಈ ಸಾಲಿನಲ್ಲಿ 3 ಸಾವಿರ ಗ್ರಾಮ ಗಳನ್ನು ಪೋಡಿ ಮುಕ್ತಗೊಳಿಸಲಾಗುವುದು ಎಂದು ಘೋಷಣೆ ಮಾಡಿದೆ. ಪೋಡಿ ಮುಕ್ತ ಅಭಿಯಾನ ಯೋಜನೆ ಯನ್ನು ಗಣಕೀಕೃತಗೊಳಿಸಿ ಮೋಜಣಿ ಗಣಕ ವ್ಯವಸ್ಥೆಯಲ್ಲಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ರೈತರಿಗೆ ತುರ್ತಾಗಿ ಭೂ ಮಾಪನ ನಕ್ಷೆ ಬೇಕಾಗಿದ್ದಲ್ಲಿ “ಸ್ವಾವಲಂಬಿ’ ಯೋಜನೆಯಡಿ ಸ್ವತಃ ನಕ್ಷೆ ತಯಾರಿಸಲು ಅವಕಾಶ ಕಲ್ಪಿಸಲಾಗಿದ್ದು, 5 ಸಾವಿರಕ್ಕಿಂತ ಹೆಚ್ಚು ಜನ ಈಗಾಗಲೇ ಈ ಸೌಲಭ್ಯ ಪಡೆದುಕೊಂಡಿದ್ದಾರೆ.

ಮಾದರಿ ಉಪನೋಂದಣಿ ಕಚೇರಿ: ರಾಜ್ಯದ ಎಲ್ಲ ಉಪ ನೋಂದಣಿ ಕಚೇರಿಗಳನ್ನು ಮಾದರಿ ಉಪನೋಂದಣಿ ಕಚೇರಿ ಗಳಾಗಿ ಪರಿವರ್ತಿಸಲಾಗುವುದು. ಮೊದಲನೇ ಹಂತದಲ್ಲಿ ಪ್ರಸಕ್ತ ಸಾಲಿನಲ್ಲಿ 8 ಕಚೇರಿಗಳನ್ನು ಅಭಿವೃದ್ಧಿಪಡಿಸಲು ಸರ್ಕಾರವು ಮುಂದಾಗಿದೆ.

ಚಂಡಮಾರುತ ಅಪಾಯ ಉಪಶಮನ ಯೋಜನೆ ಅನುಷ್ಠಾನ: ರಾಷ್ಟ್ರೀಯ ಚಂಡಮಾರುತ ಅಪಾಯ ಉಪಶಮನ ಯೋಜ ನೆಯ ಹಂತ-3ನ್ನು 150 ಕೋಟಿ ರೂ. ಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಇದ ರಿಂದ ಚಂಡಮಾರುತದಂತಹ ಪ್ರಕೃತಿ ವಿಕೋಪಗಳು ಸಂಭವಿಸಿದರೆ ಕೂಡಲೇ ಮುನ್ನೆಚ್ಚರಿಕೆ ವಹಿಸಲು ಸಹಕಾರಿಯಾಗಲಿದೆ.

ರಾಜ್ಯಾದ್ಯಂತ ಕಿರು ಚಿತ್ರ ಮಂದಿರ ನಿರ್ಮಾಣಕ್ಕೆ ಆದ್ಯತೆ
ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಸಿನಿಪ್ರಿಯರಿಗೆ ಸರಕಾರ ಸಿಹಿಸುದ್ದಿ ನೀಡಿದೆ. ಕನ್ನಡ ಚಿತ್ರರಂಗಕ್ಕೆ ಪ್ರೋತ್ಸಾಹ ನೀಡಲು ರಾಜ್ಯದ ಟಯರ್‌-2 ನಗರಗಳಲ್ಲಿ 100ರಿಂದ 200 ಆಸನಗಳ ಸಾಮರ್ಥ್ಯವುಳ್ಳ ಮಿನಿ ಥಿಯೇಟರ್‌ ಸ್ಥಾಪನೆಗೆ ಪ್ರೋತ್ಸಾಹ ನೀಡಲು ಮುಂದಾಗಿದೆ. ಈ ಮಿನಿ ಥಿಯೇಟರ್‌ ಸ್ಥಾಪನೆಯಿಂದ ಥಿಯೇಟರ್‌ ಕೊರತೆಯ ಸಮಸ್ಯೆ ನಿವಾರಣೆಯಾಗಲಿದೆ. ಸದ್ಯ ಸಿನೆಮಾ ಬಿಡುಗಡೆಯಾಗಲು ಸಿದ್ದವಿದ್ದರೂ ಥಿಯೇಟರ್‌ ಸಿಗದೇ ಪ್ರದರ್ಶನಕ್ಕೆ ಅಡ್ಡಿಯಾಗುತ್ತಿರುವ ಆರೋಪಗಳು ಕೇಳಿ ಬರುತ್ತಿದ್ದವು. ಇನ್ನು ಮುಂದೆ ಈ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ.

ಗ್ರಾಮ ಸಹಾಯಕರ
ಗೌರವಧನ 1 ಸಾವಿರ ಹೆಚ್ಚಳ
ಗ್ರಾಮ ಸಹಾಯಕರ ಹುದ್ದೆಯನ್ನು “ಜನಸೇವಕ’ ಎಂದು ಮರು ನಾಮಕರಣ ಮಾಡಿ ಸರಕಾರದಿಂದ ನೀಡುತ್ತಿರುವ ವಿವಿಧ ಸೌಲಭ್ಯಗಳನ್ನು ಸರಿಯಾಗಿ ಜನರಿಗೆ ತಲುಪುತ್ತಿ ದೆಯೇ ಎನ್ನುವುದನ್ನು ಖಾತರಿಪಡಿಸುವ ಜವಾಬ್ದಾರಿ ನೀಡಲು ಸರಕಾರ ನಿರ್ಧರಿಸಿದೆ. ಇವರಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು 13 ಸಾವಿರ ರೂ.ನಿಂದ 14 ಸಾವಿರ ರೂ. ಗಳಿಗೆ ಹೆಚ್ಚಿಸುವುದಾಗಿ ಬಜೆಟ್‌ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಇದರಿಂದ ಗ್ರಾಮ ಸಹಾಯಕರು ಖುಶಿಯಾಗಿದ್ದಾರೆ.

ಚೆನ್ನಭೈರಾದೇವಿ ಸ್ಮಾರಕ ಉದ್ಯಾನ
ರಾಣಿ ಚೆನ್ನಭೈರಾದೇವಿ ಅವರ ಹೆಸರನ್ನು ಶಾಶ್ವತಗೊಳಿಸಲು; ಹೊನ್ನಾವರದಲ್ಲಿ ಚೆನ್ನಭೈರಾದೇವಿ ಸ್ಮಾರಕ ಉದ್ಯಾನ ನಿರ್ಮಾಣ ಮಾಡಲಾಗುವುದು. ರಕ್ಕಸಗಿ, ತಂಗಡಗಿ ಮತ್ತು ತಾಳಿಕೋಟೆ ಸುತ್ತಲಿನ ಐತಿಹಾಸಿಕ ಪ್ರಸಿದ್ಧ ತಾಣಗಳನ್ನು ಅಭಿವೃದ್ಧಿಪಡಿಸಲಾಗುವುದು.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿರುವ ಮಳಖೇಡ ಕೋಟೆ ಸಂರಕ್ಷಣೆ ಕಾಮಗಾರಿಯನ್ನು 20 ಕೋಟಿ ರೂ. ವೆಚ್ಚದಲ್ಲಿ ನಡೆಸಲಾಗುವುದು. ಕಲಬುರಗಿ ಜಿಲ್ಲೆಯ ಸನ್ನತಿ-ಚಂದ್ರಲಾಂಬಾ ದೇವಾಲಯ ಹಾಗೂ ಗಾಣಗಾಪುರ ದತ್ತಾತ್ರೇಯ ದೇವಾಲಯ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಬನವಾಸಿಯ ಮಧುಕೇಶ್ವರ ದೇವಾಲಯ ಸಂಕೀರ್ಣಗಳ ಸಮಗ್ರ ಅಭಿವೃದ್ಧಿಗಾಗಿ ಅನುದಾನ ಒದಗಿಸಲಾಗುವುದು.

ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದ ಬಳಿ ಎರಡೂವರೆ ಎಕರೆ ಜಾಗದಲ್ಲಿ ವಸ್ತುಸಂಗ್ರಹಾಲಯ ಮತ್ತು ಕಲಾ ಗ್ಯಾಲರಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 398 ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳಿಗಿರುವ 2,000 ರೂ. ಪ್ರೋತ್ಸಾಹ ಧನವನ್ನು 5,000 ರೂ.ಗಳಿಗೆ ಹೆಚ್ಚಿಸಲಾಗಿದೆ. ಹೀಗಾಗಿ ವೆಚ್ಚ ಒಟ್ಟು 1.10 ಕೋಟಿ ರೂ.ಗೇರಿದೆ.

ಚಾಮುಂಡಿ ಬೆಟ್ಟದ ಅಭಿವೃದ್ಧಿ
“ರೋರಿಚ್‌ ಮತ್ತು ದೇವಿಕಾ ರಾಣಿ ಎಸ್ಟೇಟ್‌’ನಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಕೈಗೊಳ್ಳಲು ಮತ್ತು ವಿವಿಧ ಮೂಲ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ರಾಮನಗರ ಜಿಲ್ಲೆಯ ಮಂಚನಬೆಲೆ ಜಲಾಶಯದ ಹಿನ್ನೀರಿನಲ್ಲಿ 10 ಎಕರೆ ಪ್ರದೇಶದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಜಂಗಲ್‌ ಲಾಡ್ಜಸ್‌ ಆ್ಯಂಡ್‌ ರೆಸಾರ್ಟ್ಸ್ ಮೂಲಕ ಒಂದು ರೆಸಾರ್ಟ್‌ ನಿರ್ಮಿಸಲಾಗುವುದು. ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದ ” ಪ್ರಸಾದ್‌’ ಯೋಜನೆಯಡಿ ಮೈಸೂರು ನಗರದ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ, ಸ್ವದೇಶ್‌ ದರ್ಶನ್‌ 2.0 ಅಡಿಯಲ್ಲಿ ಹಂಪಿಯ ಸ್ಮಾರಕ ಅಭಿವೃದ್ಧಿ ಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ.

ಬಾದಾಮಿ ಗುಹೆ, ಕಿತ್ತೂರು ಕೋಟೆಗಳ ಅಭಿವೃದ್ಧಿ
ಹಂಪಿಯ ವಿಜಯವಿಟಲ ದೇಗುಲ ಮತ್ತು ಪುರಂದರ ಮಂಟಪ, ವಿಜಯಪುರದ ಗೋಲ್‌ ಗುಂಬಜ್‌, ಚಿಕ್ಕಬಳ್ಳಾಪುರ ಜಿಲ್ಲೆಯ ಭೋಗನಂದೀಶ್ವರ ದೇಗುಲ, ಬಾದಾಮಿ ಗುಹೆಗಳು, ಕಿತ್ತೂರು ಹಾಗೂ ಬೀದರ್‌ ಕೋಟೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಇಲ್ಲಿ ಅತ್ಯಾಧುನಿಕ ಬೆಳಕಿನ ವ್ಯವಸ್ಥೆ, ತ್ರೀಡಿ ಪ್ರೊಜೆಕ್ಷನ್‌ ಮ್ಯಾಪಿಂಗ್‌, ಧ್ವನಿ ಮತ್ತು ಬೆಳಕು ಪ್ರದರ್ಶನಗಳನ್ನು ಅಳವಡಿಸಲಾಗುವುದು. 60 ಕೋಟಿ ರೂ. ಒದಗಿಸಲಾಗುವುದು. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೊದಿಗೆರೆಯಲ್ಲಿರುವ ಷಹಾಜಿ ಮಹಾರಾಜ್‌ ಸಮಾಧಿ ಸ್ಥಳವನ್ನು 5 ಕೋಟಿ ರೂ. ಗಳ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತದೆ. ಸ್ಮಾರಕ ದತ್ತು ಯೋಜನೆಯಡಿ ಕೊಪ್ಪಳ ಜಿಲ್ಲೆಯ ಆನೆಗೊಂದಿಯ ಗಗನ್‌ ಮಹಲ್‌ ಮತ್ತು ವಿಜಯಪುರ ನಗರದ ತಾಜ್‌ ಬಾವಡಿ ಸ್ಮಾರಕಗಳ ಸಂರಕ್ಷಣೆಗೆ ಖಾಸಗಿ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.