Karnataka Budget 2024-25; ಉಡುಪಿ: ಈಡೇರದ ನಿರೀಕ್ಷೆ


Team Udayavani, Feb 16, 2024, 11:44 PM IST

ಉಡುಪಿ: ಜಿಲ್ಲೆಯ ಕೃಷಿ, ಪ್ರವಾಸೋದ್ಯಮ, ಮೀನುಗಾರಿಕೆ ಹಾಗೂ ತೋಟಗಾರಿಕೆ ಸಹಿತ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್‌/ ಅನುದಾನ ನಿರೀಕ್ಷಿಸಲಾಗಿತ್ತು. ಸ್ವರ್ಣಾ ಏತ ನೀರಾವರಿ ಹೊರತುಪಡಿಸಿ ಹೊಸ ಯೋಜನೆ ಘೋಷಣೆಯಾಗಿಲ್ಲ.

ಸ್ವರ್ಣಾ ನದಿಗೆ ಉಪ್ಪು ನೀರು ಬರುವುದನ್ನು ತಡೆಯಲು ಡ್ಯಾಮ್‌ ಕಮ್‌ ಬ್ಯಾರೇಜ್‌ ನಿರ್ಮಾಣ ಮಾಡುವ ಮೂಲಕ ಸಂಗ್ರಹವಾದ ಸಿಹಿ ನೀರನ್ನು ನಾಲೆಗಳ ಮೂಲಕ ಕೃಷಿ ಚಟುವಟಿಕೆಗೆ ಬಳಸಲು ಪೂರಕವಾಗುವ ಸ್ವರ್ಣ ಏತ ಯೋಜನೆ ಘೋಷಿಸಲಾಗಿದೆ. ಸಿದ್ದಾಪುರ ಏತ ನೀರಾವರಿ ಯೋಜನೆಯ ಪುನಶ್ಚೇತನ ಪ್ರಸ್ತಾವಿಸಲಾಗಿದೆ.

ಮೀನುಗಾರಿಕೆಗೆ ಉತ್ತಮ ಅನುದಾನ ಹಂಚಿಕೆಯಾಗಿದ್ದರೂ ಉಡುಪಿ ಜಿಲ್ಲೆಗೆ ವಿಶೇಷವೇನೂ ಸಿಕಿಲ್ಲ. 7 ಕೋ.ರೂ. ವೆಚ್ಚದಲ್ಲಿ ಸೀ ಆ್ಯಂಬುಲೆನ್ಸ್‌ ಖರೀದಿಗೆ ಒಪ್ಪಿಗೆ ನೀಡಿದ್ದರಿಂದ ಮಲ್ಪೆಗೆ ಇದು ಬಂದರೆ ದ.ಕ. ಮತ್ತು ಉ.ಕ. ಜಿಲ್ಲೆಯ ಕೇಂದ್ರ ಸ್ಥಾನವಾಗಿ ಉಡುಪಿಯಿಂದಲೇ ಕಾರ್ಯಾಚರಿಸಲು ಅನುಕೂಲವಾಗಲಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಮಲ್ಪೆ ಬಂದರಿನ ನಾಲ್ಕನೇ ಹಂತದ ಅಭಿವೃದ್ಧಿ ಘೋಷಿಸಲಾಗಿದೆ. ಆದರೆ ಜಿಲ್ಲೆಯ ಬಹುದೊಡ್ಡ ಸಮಸ್ಯೆಯಾದ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಥವಾ ಈಗಾಗಲೇ ಪ್ರಸ್ತಾವನೆ ಹಂತದಲ್ಲಿರುವ ಯೋಜನೆಗೆ ಅನುದಾನದ ಹಂಚಿಕೆಯನ್ನು ಮಾಡಿಲ್ಲ.

ಉಡುಪಿ ಸಹಿತ ಐದು ಜಿಲ್ಲೆಗಳಲ್ಲಿ ಅಂದಾಜು 36 ಕೋ.ರೂ. ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನ ಪರೀಕ್ಷ ಪಥ ನಿರ್ಮಾಣಕ್ಕೆ ಸರಕಾರ ಮುಂದಾಗಿದೆ. ಅಲೆವೂರಿನಲ್ಲಿ ಇದಕ್ಕಾಗಿ ಈಗಾಗಲೇ 5 ಎಕ್ರೆಗೂ ಅಧಿಕ ಜಾಗ ಗುರುತಿಸಿದ್ದರೂ ಡೀಮ್ಡ್ ಫಾರೆಸ್ಟ್‌ ಸಮಸ್ಯೆಯಿಂದ ಚಾಲನ ಪಥ ನಿರ್ಮಾಣವಾಗಿಲ್ಲ.

ಉಡುಪಿಯಲ್ಲೂ ಕ್ರಿಟಿಕಲ್‌ ಬ್ಲಾಕ್‌ ಸ್ಥಾಪನೆಯಾಗಲಿದೆ. ಉಡುಪಿ ಸಮೀಪದ ಅಲೆವೂರಿನಲ್ಲಿ ವಿಜ್ಞಾನ ಕೇಂದ್ರದ ಕಾಮಗಾರಿ ನಡೆಯುತ್ತಿದೆ. ತುಳು, ಬ್ಯಾರಿ, ಕೊಂಕಣಿ ಕರ್ನಾಟಕದ ಪ್ರಾದೇಶಿಕ ಭಾಷೆಗಳಾಗಿದ್ದು ಅವುಗಳ ಅಭಿವೃದ್ಧಿಗೆ ಅಕಾಡೆಮಿಗಳ ಮೂಲಕ ಭಾಷೆ, ಸಂಸ್ಕೃತಿ, ಸಾಹಿತ್ಯವನ್ನು ಪ್ರೋತ್ಸಾಹಿಸುವ ಘೋಷಣೆ ಮಾಡಿದ್ದರಿಂದ ಜಿಲ್ಲೆಯ ಸಾಹಿತ್ಯ ವಲಯಕ್ಕೂ ಇದು ಸಹಕಾರಿ ಯಾಗಲಿದೆ.

ಜಿಲ್ಲೆಯ ಕೃಷಿ, ಮೀನುಗಾರಿಕೆ ಹಾಗೂ ಪ್ರವಾಸೋದ್ಯಮ, ಕೈಗಾರಿಕೆಗಳ ಅಭಿವೃದ್ಧಿ ದೃಷ್ಟಿಯಿಂದ ಹಲವು ನಿರೀಕ್ಷೆಗಳಿದ್ದು, ಅವುಗಳು ಈಡೇರಿಲ್ಲ. ಧಾರ್ಮಿಕ ಕ್ಷೇತ್ರ, ಬೀಚ್‌, ಜಲಪಾತ ಸಹಿತ ಪ್ರವಾಸೋದ್ಯಮ ಸ್ಥಳಗಳನ್ನು ಸಂಪರ್ಕಿಸುವ ಟೂರಿಸಂ ಸರ್ಕ್ಯೂಟ್ ಬಲವರ್ಧನೆಗೆ ಆದ್ಯತೆ ಸಿಕ್ಕಿಲ್ಲ.

ಕೈಗಾರಿಕೆ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಅನುದಾನ ಬಂದಿಲ್ಲ. ಬ್ರಹ್ಮಾವರ ಕೃಷಿ ಕಾಲೇಜು, ಸರಕಾರಿ ವೈದ್ಯಕೀಯ ಕಾಲೇಜು, ಸರಕಾರಿ ಎಂಜಿನಿಯರಿಂಗ್‌ ಕಾಲೇಜು ಬೇಡಿಕೆಯಾಗಿಯೇ ಉಳಿದಿದೆ. ವಾರಾಹಿ ಯೋಜನೆಯನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಲು ಅನುಕೂಲವಾಗುವಂತೆ ಡೀಮ್ಡ್ ಫಾರೆಸ್ಟ್‌ ಸಮಸ್ಯೆಗೆ ಮುಕ್ತಿ ನೀಡುವ ಯಾವುದೇ ಭರವಸೆಯೂ ಸಿಕ್ಕಿಲ್ಲ.

ಉಡುಪಿ ನಗರಕ್ಕೆ ಪೂರಕವಾದ 330 ಕೋ.ರೂ. ಯುಜಿಡಿ ಕಾಮಗಾರಿಯ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿಲ್ಲ. ಮಣಿಪಾಲಕ್ಕೆ ಅಗ್ನಿಶಾಮ ದಳ ಬರಲಿಲ್ಲ.

ಟಾಪ್ ನ್ಯೂಸ್

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.