Karnataka: ಕೌನ್ಸೆಲಿಂಗ್ ಮೂಲಕ 90 ಉಪ ನೋಂದಣಾಧಿಕಾರಿಗಳ ವರ್ಗ
ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ನೂತನ ವ್ಯವಸ್ಥೆ
Team Udayavani, Dec 13, 2024, 6:40 AM IST
ಬೆಂಗಳೂರು: ಉಪ ನೋಂದಣಾಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ಮತ್ತು ಅವ್ಯವಹಾರದ ದೂರುಗಳ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ 31 ಜಿಲ್ಲೆಗಳ ಒಟ್ಟು 90 ಉಪನೋಂದಣಾಧಿಕಾರಿಗಳನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ.
ವರ್ಗಾವಣೆ ದಂಧೆ ಕುರಿತು ಹಲವು ನಾಯಕರು ಈ ಹಿಂದೆ ಸದನದಲ್ಲೇ ಧ್ವನಿ ಎತ್ತಿದ್ದರು. ಅವ್ಯವಹಾರಗಳಿಗೆ ಕಡಿವಾಣ ಹಾಕಿ, ಭ್ರಷ್ಟಾಚಾರ ಕೊನೆಗೊಳಿಸುವ ನಿಟ್ಟಿನಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಭರವಸೆ ನೀಡಿದ್ದರು. ಅದರಂತೆ ರಾಜ್ಯದ 31 ಜಿಲ್ಲೆಗಳ ಕಂದಾಯ ಇಲಾಖೆಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಉಪ ನೋಂದಣಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 90 ಕೇಂದ್ರಸ್ಥಾನ ಸಹಾಯಕರು/ ಹಿರಿಯ ಉಪನೋಂದಣಾಧಿಕಾರಿಗಳು/ ಉಪನೋಂದಣಾಧಿಕಾರಿಗಳನ್ನು ಕೌನ್ಸೆ ಲಿಂಗ್ ಮೂಲಕ ಏಕ ಕಾಲದಲ್ಲಿ ವರ್ಗಾ ವಣೆಗೊಳಿಸಿ ಕಂದಾಯ ಇಲಾಖೆಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಉಪಕಾರ್ಯದರ್ಶಿ ಎಸ್.ಆರ್. ಶಿವಶಂಕರ್ ಆದೇಶದಲ್ಲಿ ತಿಳಿಸಿದ್ದಾರೆ.
ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ರಶ್ಮಿ ವಿ. ಮಹೇಶ್ ನೇತೃತ್ವದಲ್ಲಿ ನ. 4ರಿಂದ ಕೌನ್ಸೆಲಿಂಗ್ ನಡೆಸಲಾಗಿತ್ತು. ಕೌನ್ಸೆಲಿಂಗ್ ನಲ್ಲಿ ಭಾಗವಹಿಸಿದ್ದವರು ಸ್ವ-ಇಚ್ಛೆಯಿಂದ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡಿದ್ದು, ನಿಗದಿಪಡಿಸಿದ ಸ್ಥಳಗಳಿಗೆ ವರ್ಗಾವಣೆಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…
Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ
Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್
Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ
MUST WATCH
ಹೊಸ ಸೇರ್ಪಡೆ
ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ
Fraud Case: 2 ಕೋಟಿ ರೂ.ಗೆ 3.5 ಕೋಟಿ ರೂ. ಕೊಡುವುದಾಗಿ ವಂಚನೆ
Kambala: ದಾಖಲೆ ಜೋಡಿ ಕೋಣಗಳಿಗೆ ಸಾಕ್ಷಿಯಾದ ನರಿಂಗಾನ ಕಂಬಳ: ಇಲ್ಲಿದೆ ಫಲಿತಾಂಶ ಪಟ್ಟಿ
Bengaluru: ಟ್ರಕ್ ಡಿಕ್ಕಿ; ಜನ್ಮದಿನದಂದೇ ಬಾಲಕ ಸಾವು
Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.