ಸಹಸ್ರ ಕೋಟಿ ವ್ಯಯಿಸುತ್ತಿದ್ದರೂ ರಸ್ತೆ ಸರಿಯಲ್ಲ ಎಂದರೆ ಏನರ್ಥ? BBMPಗೆ ಹೈಕೋರ್ಟ್ ಛಿಮಾರಿ
Team Udayavani, Mar 6, 2022, 1:02 PM IST
ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರದಲ್ಲಿ ಬಿಬಿಎಂಪಿ ಮತ್ತೆ ಹೈಕೋರ್ಟ್‌ನಿಂದ ಛಿಮಾರಿ ಹಾಕಿಸಿಕೊಂಡಿದೆ. ನಗರದಲ್ಲಿ ರಸ್ತೆಗುಂಡಿ ಗಳಿಂದ ಜನ ಸಾಯುತ್ತಿದ್ದರೂ ಬಿಬಿಎಂಪಿ ಇನ್ನೂ ಸಮಸ್ಯೆ ಬಗೆಹರಿಸುತ್ತಿಲ್ಲ. ಪಾಲಿಕೆ ಇಂಜಿನಿಯರ್ ಗಳು ಉದ್ದೇಶಪೂರ್ವಕವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ ಎಂದು ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.
ಬೆಂಗಳೂರಿನ ರಸ್ತೆಗಳ ನಿರ್ವಹಣೆಗೆ ಸಂಬಂಧಿಸಿ ದಂತೆ 2015ರಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್. ಆರ್. ಕೃಷ್ಣ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು. ಕೋರ್ಟ್‌ನಲ್ಲಿ ಖುದ್ದು ಹಾಜರಿದ್ದ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರನ್ನು ಕುರಿತು ನ್ಯಾಯ ಪೀಠ, ರಸ್ತೆಗುಂಡಿಗಳಿಂದ ಜೀವ ಹಾನಿಯಾಗುತ್ತಿದ್ದರೂ, ಸಮಸ್ಯೆ ಮಾತ್ರ ಇನ್ನೂ ಬಗೆಹರಿದಿಲ್ಲ. ನಿಮ್ಮ ಇಂಜಿನಿಯರ್‌ಗಳು ಉದ್ದೇಶಪೂರ್ವಕವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ರಸ್ತೆ ದುರಸ್ತಿ ಹಾಗೂ ಹೊಸ ರಸ್ತೆ ನಿರ್ಮಾಣಕ್ಕೆ ಸರ್ಕಾರ ಪಾಲಿಕೆಗೆ ಸಾವಿರಾರು ಕೋಟಿ ರೂ. ಬಿಡುಗಡೆ ಮಾಡುತ್ತಿದೆ. ಹೀಗಿದ್ದರೂ, ರಸ್ತೆಗಳು ಸರಿಯಾಗುತ್ತಿಲ್ಲ ಎಂದರೆ ಏನರ್ಥ ಎಂದು ಪ್ರಶ್ನಿಸಿತು.
ಅಲ್ಲದೇ ಇಂಜಿನಿಯರ್‌ಗಳ ವಿರುದ್ಧ ನೀವು ಕ್ರಮ ಕೈಗೊಳ್ಳಬೇಕು. ರಸ್ತೆ ಗುಂಡಿ ವಿಚಾರದಲ್ಲಿನ ಬಿಕ್ಕಟ್ಟು ಮುಂದುವರಿಯುವುದು ನಮಗೆ ಇಷ್ಟವಿಲ್ಲ. ನಿಮ್ಮ ಸಮಸ್ಯೆಗಳು ನಮಗೆ ಬೇಡ,
ರಸ್ತೆಗುಂಡಿ ಸಮಸ್ಯೆಗೆ ಪರಿಹಾರವಷ್ಟೇ ಬೇಕು ಎಂದ ನ್ಯಾಯಪೀಠ, ಅಧಿಕಾರಿಗಳು ತಮ್ಮ ಕೆಲಸ ನಿರ್ವಹಿಸಲಾಗದಷ್ಟು ಅಸಮರ್ಥರಾಗಿದ್ದರೆ, ಎಂಜಿನಿಯರ್‌ಗಳನ್ನೇ ಬದಲಿಸಲು ಸರ್ಕಾರಕ್ಕೆ
ಆದೇಶಿಸುತ್ತೇವೆ ಎಂದು ಎಚ್ಚರಿಕೆ ನೀಡಿತು.
ಇದನ್ನೂ ಓದಿ : ಹೈಕೋರ್ಟ್ ಎಂದರೆ ಏನೆಂದು ತೋರಿಸುತ್ತೇವೆ : ಪಾಲಿಕೆ ಅಧಿಕಾರಿಗಳನ್ನು ಜೈಲಿಗಟ್ಟುವ ದಿನ ಸನಿಹ
ಎಲ್ಲ ರಸ್ತೆಗಳಿಗೂ ಪೈಥಾನ್ ಬಳಕೆ ಏಕಿಲ್ಲ?
ರಸ್ತೆ ಗುಂಡಿ ಮುಚ್ಚಲು ಸುಧಾರಿತ ತಂತ್ರಜ್ಞಾನ ಬಳಸದೇ ಇರುವುದರಿಂದಲೇ ಸಮಸ್ಯೆ ನಿರಂತರವಾಗಿದ್ದು, ಜನರು ರಸ್ತೆಯಲ್ಲಿ ಸಾಯುತ್ತಿದ್ದಾರೆ. ನಗರದ 182 ಕಿ.ಮೀ. ಗಳಷ್ಟು ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲು ಮಾತ್ರ ಪೈಥಾನ್ ಬಳಸಲಾಗುತ್ತಿದ್ದು, ಉಳಿದ ಕಡೆ ಹಾಟ್‌ಮಿಕ್ಸ್ ತಂತ್ರಜ್ಞಾನ ಬಳಸುವುದು ಸರಿಯಲ್ಲ. ಎಲ್ಲ ರಸ್ತೆಗಳಲ್ಲೂ ಪೈಥಾನ್ ಬಳಕೆ ಸಾಧ್ಯವಿಲ್ಲವೇ ಎಂದು ನ್ಯಾಯಪೀಠ ಪ್ರಶ್ನಿಸಿತು. ಪಾಲಿಕೆ ಪರ ವಕೀಲರು ಉತ್ತರಿಸಿ, ದೇಶದಲ್ಲಿ ಕೇವಲ ಎರಡು ಪೈಥಾನ್ ಯಂತ್ರಗಳಿದ್ದು, ಒಂದು ಬೆಂಗಳೂರಿನಲ್ಲಿದೆ. ಪ್ರಮುಖ ರಸ್ತೆಗಳು ಹಾಗೂ ಸಂಚಾರ ದಟ್ಟಣೆ ಇರುವ ರಸ್ತೆಗಳಲ್ಲಿನ ಗುಂಡಿ ಮುಚ್ಚಲು ಅದನ್ನು ಬಳಸಲಾಗುತ್ತಿದೆ ಎಂದರು. ಆಗ, ನೀವೇ ಏಕೆ ಪೈಥಾನ್ ಯಂತ್ರ ಖರೀದಿಸಬಾರದು ಎಂದು ನ್ಯಾಯಪೀಠ ಪ್ರಶ್ನಿಸಿತು. ಅದಕ್ಕೆ ಬಿಬಿಎಂಪಿ ಪರ ವಕೀಲರು, ಈ ಬಗ್ಗೆ ಸರ್ಕಾರದ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಿದೆ ಎಂದರು. ನಗರದಲ್ಲಿ ಗುಂಡಿ ಬಿದ್ದಿರುವ ರಸ್ತೆಗಳನ್ನು ಸುಧಾರಿತ ತಂತ್ರಜ್ಞಾನ
ಬಳಸಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ಹೊಸ ಕಾರ್ಯ ವಿಧಾನ ಪ್ರಮಾಣಪತ್ರ ಸಲ್ಲಿಸಲು ಪಾಲಿಕೆಗೆ ಒಂದು ವಾರ ಕಾಲಾವಕಾಶ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ಮಾ.15ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.