Karnataka: ಇನ್ನು ಮುಂದೆ ಆನ್‌ಲೈನ್‌ನಲ್ಲೇ ವಿವಾಹ ನೋಂದಣಿ
ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು
Team Udayavani, Feb 1, 2024, 11:57 PM IST
ಬೆಂಗಳೂರು: ರಾಜ್ಯಾದ್ಯಂತ ಇನ್ನು ಮುಂದೆ ವಿವಾಹ ನೋಂದಣಿ ಪ್ರಕ್ರಿಯೆ ಸರಳಗೊಳ್ಳಲಿದ್ದು, ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಿ ಪ್ರಮಾಣಪತ್ರ ಪಡೆದುಕೊಳ್ಳಬಹುದು. ಇದಕ್ಕೆ ಅನುಕೂಲವಾಗುವಂತೆ 2023- 24ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರಕಾರ ಘೋಷಿಸಿದ್ದಂತೆ ಹಿಂದೂ ವಿವಾಹಗಳ ನೋಂದಣಿ (ತಿದ್ದುಪಡಿ) ನಿಯಮ-2024ವನ್ನು ಸಂಪುಟ ಸಭೆ ಅನುಮೋದಿಸಿದೆ.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್, ಇನ್ನು ಮುಂದೆ ವಿವಾಹ ನೋಂದಣಿ ಪ್ರಕ್ರಿಯೆಗಾಗಿ ಉಪ ನೋಂದಣಾಧಿಕಾರಿ ಕಚೇರಿ ಮುಂದೆ ನಿಲ್ಲಬೇಕಾಗಿಲ್ಲ. ಕಾವೇರಿ-2.0 ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ. ಅಲ್ಲದೆ ಗ್ರಾ.ಪಂ.ಗಳ ಬಾಪೂಜಿ ಸೇವಾ ಕೇಂದ್ರ, ಗ್ರಾಮಒನ್ ಕೇಂದ್ರಗಳಲ್ಲೂ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.
ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಕಲಿಕಾ ಘಟಕ
2023-24ನೇ ಸಾಲಿಗೆ 93 ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿರುವ 104 ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳಿಗೆ 65 ಕೋಟಿ ರೂ. ವೆಚ್ಚದಲ್ಲಿ ಕಲಿಕಾ ವಾತಾವರಣ ಅಭಿವೃದ್ಧಿಪಡಿಸಲು ಅನುಮೋದಿಸಿದ್ದು, ಅಸ್ತಿತ್ವದಲ್ಲಿರುವ 82 ಕೆಪಿಎಸ್‌ಗಳಿಗೆ ಕಲಿಕಾ ಘಟಕಗಳನ್ನು ಒದಗಿಸುವುದು ಹಾಗೂ 22 ತಾಲೂಕು ಗಳಲ್ಲಿ ಹೊಸ ಕೆಪಿಎಸ್‌ಗಳನ್ನು ಆರಂಭಿಸುವುದೂ ಇದರಲ್ಲಿ ಅಡಕವಾಗಿದೆ. 10 ಮಹಾನಗರ ಪಾಲಿಕೆ ಹಾಗೂ ಆಯ್ದ 24 ನಗರಸಭೆಯಲ್ಲಿ ತಲಾ ಒಂದರಂತೆ ವಿದ್ಯುತ್ ಮತ್ತು ಅನಿಲ ಆಧಾರಿತ ಚಿತಾಗಾರಗಳನ್ನು ನಿರ್ಮಿಸಲು ಒಪ್ಪಿದೆ.
ರಾಜ್ಯಪಾಲರ ಭಾಷಣ ಕರಡು ತಯಾರಿಸಲು ಸಿಎಂಗೆ ಅಧಿಕಾರ.
2023ರ ಡಿ.31 ರೊಳಗೆ ಸಹಕಾರ ಸಂಘಗಳ ಮೂಲಕ ರೈತರು ಪಡೆದ ಮಧ್ಯಮಾವಧಿ, ದೀರ್ಘಾವಧಿ ಸಾಲದ ಅಸಲು ಕಟ್ಟಿದವರ ಬಡ್ಡಿ ಮನ್ನಾ ಮಾಡಲು 440 ಕೋಟಿ ರೂ.
ಸಿ.ಎಂ.ಲಿಂಗಪ್ಪ ಅವರಿಗೆ ಗುತ್ತಿಗೆ ನೀಡಿದ್ದ 15×24 ಅಳತೆಯ ಸಿಎ ನಿವೇಶನವನ್ನು ಅವರಿಗೇ ಮಾರಾಟ ಮಾಡಲು ಒಪ್ಪಿಗೆ.
ಪೊಲೀಸ್ ವಾಹನಗಳಿಗೆ ಮುಂದಿನ ಮೂರು ವರ್ಷದವ ರೆಗೆ 170 ಕೋಟಿ ರೂ. ಮಿತಿ ಯೊಂದಿಗೆ ಪೆಟ್ರೋ ಕಾರ್ಡ್ ಮೂಲಕ ಇಂಧನ ಖರೀದಿ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪರಿಶಿಷ್ಟ ಜಾತಿಯ 18 ಸರಕಾರಿ ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು 126 ಕೋಟಿ ರೂ.ಗಳಿಗೆ ಸಮ್ಮತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.