Karnataka: ಅನುದಾನಕ್ಕಾಗಿ ಡಿಸಿಎಂಗೂ ಮೊರೆ ಇಟ್ಟ ಶಾಸಕರು
Team Udayavani, Dec 14, 2023, 11:34 PM IST
ಬೆಳಗಾವಿ: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಅನುದಾನದ ಜಪ ಮುಂದುವರಿದಿದ್ದು, ಮುಖ್ಯಮಂತ್ರಿ ಮಾತ್ರವಲ್ಲ; ಉಪಮುಖ್ಯಮಂತ್ರಿ ಖಾತೆಗಳಿಂದಲೂ ಕ್ಷೇತ್ರಗಳಿಗೆ ಅನುದಾನ ನೀಡುವಂತೆ ಅಲವತ್ತುಕೊಂಡಿದ್ದಾರೆ.
ಮುಖ್ಯಮಂತ್ರಿಗಳು ಪ್ರತಿ ಕ್ಷೇತ್ರಕ್ಕೆ ತಲಾ 25 ಕೋಟಿ ರೂ. ಕೊಡುವುದಾಗಿ ಹೇಳಿರುವುದು ಸ್ವಾಗತಾರ್ಹ. ನಮ್ಮ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಂತಾಗಿದೆ. ಆದರೆ ನಾವು ಚುನಾವಣೆ ಹೊಸ್ತಿಲಲ್ಲಿದ್ದು, ತ್ವರಿತವಾಗಿ ಮತ್ತು ಎದ್ದುಕಾಣುವ ಅಭಿವೃದ್ಧಿ ಕಾಮಗಾರಿಗಳು ಕ್ಷೇತ್ರ ಗಳಲ್ಲಿ ನಡೆಯಬೇಕಿದೆ. ಇದಕ್ಕಾಗಿ ಹೆಚ್ಚು ಹಣದ ಅಗತ್ಯ ಇದೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿಗಳ ಬಳಿ ಇರುವ ಜಲಸಂಪನ್ಮೂಲ ಖಾತೆಯಿಂದಲೂ ಹಲವು ಯೋಜನೆಗಳಿಗೆ ಅನುದಾನ ಒದಗಿಸಬೇಕು ಎಂದು ಕೆಲವು ಶಾಸಕರು ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅದರಲ್ಲೂ ಪ್ರಮುಖವಾಗಿ ಕರ್ನಾಟಕ ನೀರಾವರಿ ನಿಗಮ, ಕಾವೇರಿ ನೀರಾವರಿ ನಿಗಮ ಸೇರಿ ಹಲವು ನಿಗಮಗಳಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನವನ್ನು ಆಯಾ ನಿಗಮಗಳ ವ್ಯಾಪ್ತಿಗೆ ಬರುವ ಶಾಸಕರಿಗೆ ಅನುದಾನ ಒದಗಿಸಬೇಕು ಎಂದು ಕೋರಿದರು. ಇದಕ್ಕೆ ಸ್ಪಂದಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಸಕರಿಗೆ ಅನುದಾನ ದೊರೆಯದಿದ್ದರೆ ಕ್ಷೇತ್ರಗಳಲ್ಲಿ ಕಷ್ಟವಾಗುತ್ತದೆ ಎಂಬ ಅರಿವು ಇದೆ. ಸಾಧ್ಯವಾದಷ್ಟು ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ಮನವೊಲಿಸಿದರು ಎನ್ನಲಾಗಿದೆ.
ನಿರಾಳತೆ ಮೂಡ್‌ನಲ್ಲಿ ಶಾಸಕರು; ನಾಯಕರ ಬೇಸರ
ಪಕ್ಷ ಸಂಘಟನೆ ಕೆಲಸ ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ. ಈ ಬಗ್ಗೆ ಹೈಕಮಾಂಡ್ ತೀವ್ರ ಬೇಸರ ವ್ಯಕ್ತಪಡಿಸಿದೆ ಎಂದು ಇದೇ ವೇಳೆ ಶಾಸಕರ ಗಮನಕ್ಕೆ ತಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪಕ್ಷ ಅಧಿಕಾರಕ್ಕೆ ಬಂದು ಆರು ತಿಂಗಳಾಗಿವೆ. ಮುಂದೆ ಲೋಕಸಭಾ ಚುನಾವಣೆ ಇದೆ. ಶಾಸಕರು ಈಗ ಹನಿಮೂನ್ ಮನಸ್ಥಿತಿಯಿಂದ ಹೊರಬಂದು ಸ್ಥಳೀಯವಾಗಿ ಪಕ್ಷ ಸಂಘಟನೆ ಕಡೆಗೆ ಗಮನ ಹರಿಸಬೇಕು. ಬೆಳಗಾವಿ ಅಧಿವೇಶನ ಮುಗಿಯುತ್ತಿದ್ದಂತೆ ಕ್ಷೇತ್ರಗಳಲ್ಲೇ ಬೀಡುಬಿಟ್ಟು, ಈ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಸೂಚನೆ ನೀಡಿದರು.
ಐದು ಗ್ಯಾರಂಟಿಗಳಿವೆ. ಅವುಗಳ ಪೈಕಿ ಬಹುತೇಕ ಎಲ್ಲವನ್ನೂ ಜಾರಿಗೊಳಿಸಲಾಗಿದೆ. ಎಷ್ಟು ಜನರಿಗೆ ಅವು ತಲುಪಿವೆ? ಕೆಲವರು ಹೊರಗುಳಿದಿದ್ದರೆ, ಯಾಕೆ? ಈ ನಿಟ್ಟಿನಲ್ಲಿರುವ ಅಡತಡೆಗಳು ಏನು? ಇಂತಹ ಅಂಶಗಳ ಬಗ್ಗೆ ಗಮನಹರಿಸಬೇಕು. ಇದಕ್ಕಾಗಿ ತಾಲ್ಲೂಕು, ಹೋಬಳಿ ಮಟ್ಟದಲ್ಲಿ ಸಭೆಗಳನ್ನು ಮಾಡಬೇಕು ಎಂದು ಕಿವಿಮಾತು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಸುಮಾರು 14 ಬಜೆಟ್ ಮಂಡಿಸಿದ್ದೇನೆ. ಇಷ್ಟೊಂದು ಕೆಟ್ಟ ಪರಿಸ್ಥಿತಿ ಎಂದೂ ಬಂದಿರಲಿಲ್ಲ. ಅಷ್ಟರಮಟ್ಟಿಗೆ ಈ ಹಿಂದಿನ ಸರಕಾರ ಆರ್ಥಿಕ ಸ್ಥಿತಿಯನ್ನು ಹಾಳುಗೆಡವಿ ಹೋಗಿದೆ. ಇದರ ಅಂಕಿ-ಅಂಶಗಳು ಸಹಿತ ದಾಖಲೆಗಳನ್ನು ನಾನು ಕೊಡುತ್ತೇನೆ. ಸ್ಥಳೀಯ ನಾಯಕರು ಮತ್ತು ಜನರಿಗೆ ಇದನ್ನು ಮನದಟ್ಟು ಮಾಡುವ ಕೆಲಸ ಆಗಬೇಕು ಎಂದು ಸಲಹೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.
ಇದೆಲ್ಲದರ ನಡುವೆ ಎಂದಿನಂತೆ ಬಿ.ಆರ್. ಪಾಟೀಲ್ ಸಹಿತ ಕೆಲವು ಶಾಸಕರಿಂದ ಸಚಿವರು ಮತ್ತು ಅಧಿಕಾರಿಗಳು ತಮ್ಮನ್ನು ಪರಿಗಣಿಸುತ್ತಿಲ್ಲ. ಕಿಮ್ಮತ್ತು ಕೊಡುತ್ತಿಲ್ಲ ಎಂಬ ಮುನಿಸು ಮುಂದುವರಿದಿದೆ. ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕದ ಬಗ್ಗೆ ಪ್ರಸ್ತಾವವಾಗಿದ್ದು, ಹೈಕಮಾಂಡ್ ಈ ಸಂಬಂಧ ಆದಷ್ಟು ಬೇಗ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.