6 ಕೋಟಿ ಮೌಲ್ಯದ ಹ್ಯಾಶಿಷ್ ಆಯಿಲ್ ವಶ
ಸಿಸಿಬಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: ನಾಲ್ವರು ಅಂತಾರಾಜ್ಯ ಡ್ರಗ್ಸ್ ಪೆಡ್ಲರ್‌ಗಳ ಸೆರೆ
Team Udayavani, Aug 7, 2021, 2:06 PM IST
ಬೆಂಗಳೂರು: ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರ ಕಾರ್ಯಾಚರಣೆಯಲ್ಲಿ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಏಕಕಾಲದಲ್ಲಿ ದಾಳಿ ನಡೆಸಿ ಆರು ಕೋಟಿ ರೂ. ಮೌಲ್ಯದ ಹ್ಯಾಶಿಷ್ ಆಯಿಲ್, ಹೈಡ್ರೋ ಗಾಂಜಾ ಸಸಿಗಳು ಸೇರಿ ವಿವಿಧ ಮಾದರಿಯ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದು, ನಾಲ್ವರು ಅಂತಾರಾಜ್ಯ ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ.
ಅಸ್ಸಾಂ ಮೂಲದ ನಬರನ್ ಚಕ್ಮಾ(30), ಆತನ ಸಹಚರರಾದ ಆಂಧ್ರಪ್ರದೇಶದ ಮೊಬಿನ್ ಬಾಬು(32), ಬೆಂಗಳೂರಿನ ರೋಲ್ಯಾಂಡ್ ರೋಡ್ನಿ ರೋಜರ್ (26) ಮತ್ತು ತಮಿಳುನಾಡು ಚೆನ್ನೈ ಮೂಲದ ತರುಣ್ ಕುಮಾರ್ ಲಾಲ್‌ಚಂದ್(40) ಬಂಧಿತರು. ಅವರಿಂದ ಆರು ಕೋಟಿ ರೂ. ಮೌಲ್ಯದ 15 ಕೆ.ಜಿ. ಹ್ಯಾಶಿಷ್ ಆಯಿಲ್, 11 ಕೆ.ಜಿ. ಗಾಂಜಾ, 530 ಗ್ರಾಂಚರಸ್ ಉಂಡೆ, ನಾಲ್ಕು ಹೈಡ್ರೋ ಗಾಂಜಾ ಸಸಿಗಳು ಹಾಗೂ ಮೊಬೈಲ್‌ಗಳು, ಕಾರು, ಬೈಕ್, ತೂಕದ ಯಂತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ಮೂರು ವರ್ಷಗಳಿಂದ ಹೆಣ್ಣೂರು ಠಾಣಾ ವ್ಯಾಪ್ತಿಯ ಬೇರೆ ಬೇರೆ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದುಕೊಂಡು ಮಾದಕ ವಸ್ತುಗಳನ್ನು ಗ್ರಾಹಕರಿಗೆ ಪೂರೈಕೆ ಮಾಡುತ್ತಿದ್ದರು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದರು.
ಆರೋಪಿಗಳ ಪೈಕಿ ನಬರನ್ ಚಕ್ಮಾ ಮಾದಕ ವಸ್ತುಗಳ ಮಾರಾಟ ಮಾಡಿ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದಲೇ ನಗರದ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸವಾಗಿದ್ದ. ಕಳೆದ ಮೂರು ವರ್ಷಗಳಿಂದ ತನ್ನ ಸಹಚರರೊಂದಿಗೆ ಸೇರಿಕೊಂಡು ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳು ಹಾಗೂ ಐಟಿ ಕಂಪನಿಗಳಉದ್ಯೋಗಿಗಳು,ಉದ್ಯಮಿಗಳನ್ನುಪರಿಚಯಿಸಿಕೊಂಡು ಅವರುಗಳಿಗೆ ಮಾದಕ ವಸ್ತು ಗಾಂಜಾ ಮತ್ತು ಹ್ಯಾಶಿಶ್ ಆಯಿಲ್ ಮಾರಾಟ ಮಾಡಿರುವುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಹೇಳಿದರು.
ಇದನ್ನೂ ಓದಿ: ಬಿಎಸ್‌ವೈ ಮಾಜಿ ಸಿಎಂ ಎನ್ನಲು ಮನಸ್ಸು ಒಪ್ಪುತ್ತಿಲ್ಲ : ಸಚಿವ ಆನಂದ ಸಿಂಗ್
ಡ್ರಗ್ಸ್ ಪ್ರಕರಣವೊಂದರಲ್ಲಿ ಕಳೆದ ವರ್ಷ ಸಿಸಿಬಿ ಪೊಲೀಸರು ರಾಮ ಮೂರ್ತಿನಗರ ಠಾಣೆ ವ್ಯಾಪ್ತಿಯಲ್ಲಿ ದಾಳಿ ಮಾಡಿ ಈತನ ಪ್ರಮುಖ ಸಹಚರ ಸಿಂಟೋ ಥಾಮಸ್‌ನನ್ನು ಬಂಧಿಸಲಾಗಿತ್ತು. ಈ ವೇಳೆ ನಬರನ್ ಚಕ್ಮಾನಾಪತ್ತೆಯಾಗಿದ್ದ. ನಂತರ ನೆರೆ ರಾಜ್ಯದಲ್ಲಿ ತಲೆಮರೆಸಿಕೆದ್ದ ಬಹಳಷ್ಟು ಮಂದಿ ಸಹಚರರನ್ನು ಬಳಸಿಕೊಂಡು ನಗರದಲ್ಲಿ ಮಾದಕ ವಸ್ತುಗಳ ಮಾರಾಟ ಮಾಡಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ. ನಾಲ್ವರ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತರು ಹೇಳಿದರು.
ಒಂದು ಲಕ್ಷ ಬಹುಮಾನ
ಈ ಎರಡು ಪ್ರಕರಣಗಳ ಕಾರ್ಯಾಚರಣೆ ನಡೆಸಿದ ಸಿಸಿಬಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯವನ್ನು ನಗರ ಪೊಲೀಸ್ ಆಯುಕ್ತರಾದಕಮಲ್ ಪಂತ್ ಶ್ಲಾಘಿಸಿ ಒಂದು ಲಕ್ಷ ಬಹುಮಾನ ಘೋಷಿಸಿದ್ದಾರೆ.
ಲಾರಿ ಚಾಲಕನ ಬಂಧನ
ಆಂಧ್ರಪ್ರದೇಶದಿಂದ ಗಾಂಜಾವನ್ನು ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಲಾರಿ ಚಾಲಕ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆಂಧ್ರಪ್ರದೇಶ ಮೂಲದ ತಮಿನ್ (43) ಬಂಧಿತ. ಆತನಿಂದ ಎರಡು ಲಕ್ಷ ರೂ. ಮೌಲ್ಯದ 8 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರೋಪಿ ಆಂಧ್ರಪ್ರದೇಶದಿಂದ ತನ್ನ ಲಾರಿಯಲ್ಲಿ ಗಾಂಜಾವನ್ನು ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ. ಇತ್ತೀಚೆಗೆ ಶಿವಾಜಿನಗರ, ತೊಪ್ಪ ಮೊದಲಿಯಾರ್ ಸ್ಟ್ರೀಟ್, ನಾಲಾ ಹತ್ತಿರ ವ್ಯಕ್ತಿಯೊಬ್ಬ ಗಾಂಜಾ ಮಾದಕ ವಸ್ತುವನ್ನು ಮಾರಾಟಕ್ಕೆ ಮುಂದಾಗಿದ್ದ. ಈ ಮಾಹಿತಿ ಮೇರೆಗೆ ದಾಳಿ ನಡೆಸಿ ಮಾಲು ಸಮೇತ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ನೈಜೀರಿಯಾ ಪ್ರಜೆ ಸೆರೆ
ಮತ್ತೊಂದು ಪಕ್ರರಣದಲ್ಲಿ ಅಕ್ರಮವಾಗಿ ನೆಲೆಸಿದಲ್ಲದೆ, ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜಿರಿಯಾ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಒನ್ಯಾಕ ಇಮ್ಯಾನುಲ್ ಜೇಮ್ಸ್ (31) ಬಂಧಿತ. ಈತನಿಂದ ಐದು ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾತ್ರಗೆಳು ಮತ್ತು ಎಲ್‌ಎಸ್‌ಡಿ ಸ್ಟ್ರೀಪ್ಸ್‌ಗಳು, ಬೈಕ್, ಮೊಬೈಲ್ ವಶಕ್ಕೆ ಪಡೆಯಲಾಗಿದೆ.
ಆರೋಪಿ ಬೈಯಪ್ಪನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಹಳೇ ಮದ್ರಾಸ್ ರಸ್ತೆಯ ಸ್ವಾಮಿ ವಿವೇಕಾನಂದ ರಸ್ತೆಯ ಬಳಿ ಡ್ರಗ್ಸ್ ಮಾರಾಟಕ್ಕೆ ಮುಂದಾಗಿದ್ದ. ಈ ಮಾಹಿತಿ ಮೇರೆಗೆ ದಾಳಿ ನಡೆಸಿ ಮಾಲು ಸಮೇತ ಬಂಧಿಸಲಾಗಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿಯ ವೀಸಾ, ಪಾಸ್ ಪೋರ್ಟ್ ಅವಧಿ ಮುಕ್ತಾಯಗೊಂಡಿದ್ದು, ಅಕ್ರಮವಾಗಿ ವಾಸವಾಗಿರುವುದು ಪತ್ತೆಯಾಗಿದೆ. ಅಲ್ಲದೆ, ಮಾದಕ ವಸ್ತು ಮಾರಾಟ ಜಾಲದಲ್ಲಿ
ತೊಡಗಿ ದಂಧೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.ಈ ಹಿಂದೆಯೂ ಈತನ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನಿನ ಮೇಲೆ ಹೊರ ಬಂದು ಪುನಃ ಅದೇ ದಂಧೆಯಲ್ಲಿ ತೊಡಗಿದ್ದಾನೆ
ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.