Karnataka: ಹತ್ತು ಸಾವಿರ ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕ
Team Udayavani, Aug 18, 2023, 11:03 PM IST
ಬೆಂಗಳೂರು: ರಾಜ್ಯ ಸರಕಾರ ಹೆಚ್ಚುವರಿಯಾಗಿ ಒಟ್ಟು ಹತ್ತು ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅವಕಾಶ ನೀಡಿದೆ.
13,352 ಖಾಯಂ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಳಂಬ ವಾಗುತ್ತಿರುವ ಹಿನ್ನೆಲೆ ಯಲ್ಲಿ ಹಾಗೂ ವರ್ಗಾವಣೆ ಪ್ರಕ್ರಿಯೆ ಯಿಂದ ಹಲವು ಶಾಲೆಗಳಲ್ಲಿ ಶಿಕ್ಷಕರ ತೀವ್ರ ಕೊರತೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಅತಿಥಿ ಶಿಕ್ಷಕರ ನೇಮಕದ ಮೂಲಕ ಕೊರತೆ ತುಂಬಿಕೊಳ್ಳಲು ಸರಕಾರ ಮುಂದಾಗಿದೆ.
ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಎಂಟು ಸಾವಿರ ಶಿಕ್ಷಕರು ಮತ್ತು ಪ್ರೌಢ ಶಾಲೆಗಳಿಗೆ ಎರಡು ಸಾವಿರ ಶಿಕ್ಷಕರನ್ನು ನೇಮಿಸಲು ಸರಕಾರ ಮಂಜೂರಾತಿ ನೀಡಿದೆ.
ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ಕೌನ್ಸೆಲಿಂಗ್ ಮೂಲಕ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡಿದ್ದು, ಕೌನ್ಸೆಲಿಂಗ್ ಮೂಲಕ ಖಾಲಿಯಾಗಿರುವ ಹುದ್ದೆಗಳನ್ನು ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಖಾಲಿ ಯಾಗಿರುವ ಹುದ್ದೆಗಳನ್ನು ಆದ್ಯತೆ ಮೇರೆಗೆ ಪೂರ್ಣ ಪ್ರಮಾಣದಲ್ಲಿ ಅತಿಥಿ ಶಿಕ್ಷಕರಿಂದ ಭರ್ತಿ ಮಾಡಲು ಕ್ರಮ ತೆಗೆದುಕೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚನೆ ನೀಡಿದೆ.
ಮೇ ತಿಂಗಳ ಅಂತ್ಯದಲ್ಲಿ ಸರಕಾರ ಪ್ರಾಥಮಿಕ ಶಾಲೆಗಳಿಗೆ 27 ಸಾವಿರ ಮತ್ತು ಪ್ರೌಢ ಶಾಲೆಗಳಿಗೆ ಆರು ಸಾವಿರ ಅತಿಥಿ ಶಿಕ್ಷಕರನ್ನು ಮಂಜೂರು ಮಾಡಿತ್ತು. ಈಗ ಮತ್ತೆ ಹತ್ತು ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಅವಕಾಶ ನೀಡಿದ್ದು ತನ್ಮೂಲಕ ಒಟ್ಟು ಅತಿಥಿ ಶಿಕ್ಷಕರ ಸಂಖ್ಯೆ 43 ಸಾವಿರಕ್ಕೆ ಏರಲಿದೆ. 2022-23ರ ಸಾಲಿನಲ್ಲಿ ಒಟ್ಟು 32,078 ಅತಿಥಿ ಶಿಕ್ಷಕರನ್ನು ನೇಮಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.