![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 24, 2021, 10:02 AM IST
ದಾಂಡೇಲಿ: ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಜಿಲ್ಲಾಧ್ಯಕ್ಷರಾದ ಬಿ.ಎನ್. ವಾಸರೆಯವರ ‘ಹೊಣೆಗಾರಿಕೆ ಸ್ವೀಕಾರ ಸಮಾರಂಭ’ವು ಹಳೆದಾಂಡೇಲಿಯ ಹಾರ್ನಬಿಲ್ ಸಭಾಭವನದಲ್ಲಿ ಗುರುವಾರ ಜರುಗಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಸಾಪದ ಪರವಾಗಿ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮಾದೇವ ವೇಳಿಪ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎನ್.ಜಿ. ನಾಯಕ ಅವರುಗಳನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಮಾಜಿ ಶಾಸಕರಾದ ಸುನೀಲ ಹೆಗಡೆಯವರು ತುಳಸಿ ಗೌಡ, ಮಾದೇವ ವೇಳಿಪ ಅವರುಗಳನ್ನು ಸನ್ಮಾನಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎನ್.ಜಿ. ನಾಯಕ ಅವರು ಕನ್ನಡದ ಧ್ವಜವನ್ನು ಬಿ.ಎನ್.ವಾಸರೆಯವರಿಗೆ ಹಸ್ತಾಂತರಿಸಿ ಮಾತನಾಡಿದರು.
ಅಧ್ಯಕ್ಷತೆಯನ್ನು ವಹಿಸಿದ್ದ, ಡಾ.ಮಹೇಶ ಜೋಶಿಯವರು ಮಾತನಾಡಿ ನಾಡು ನುಡಿ ಸೇವೆಗಾಗಿ ಬದ್ದನಾಗಿ ಕಸಾಪವನ್ನು ಮಾದರಿ ಸಂಸ್ಥೆಯನ್ನಾಗಿಸುವ ಸಂಕಲ್ಪವನ್ನು ತೊಟ್ಟಿದ್ದೇನೆ. ಕಸಾಪವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಕ್ರಿಯಾಶೀಲನಾಗಿ ಕೆಲಸ ಮಾಡುತ್ತೇನೆ. ಪ್ರತಿ ತಾಲೂಕುಗಳಲ್ಲಿಯೂ ಕನ್ನಡ ಭವನವನ್ನು ನಿರ್ಮಿಸಲು ಕಸಾಪದಿಂದ ಅಗತ್ಯ ಸಹಕಾರ ನೀಡುವುದಾಗಿಯೂ ಹಾಗೂ ಜಿಲ್ಲೆಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ನಡೆಸುವ ನಿಟ್ಟಿನಲ್ಲಿ ಸಕರಾತ್ಮಕವಾಗಿ ಸ್ಪಂದಿಸುವುದಾಗಿ ಹೇಳಿದರು.
ಕಸಾಪ ಸದಸ್ಯತ್ವಕ್ಕಾಗಿ ಹೊಸ ಆಪ್ ಬಿಡುಗಡೆ ಮಾಡಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ದುಂದು ವೆಚ್ಚ ತಪ್ಪಿಸಲು ಹಾಗೂ ಪಾರದರ್ಶಕ ಚುನಾವಣೆ ನಡೆಯುವಂತಾಗಲೂ ಆ್ಯಪ್ ಮೂಲಕ ಮತದಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ:ಕಾನೂನು ಬಾಹಿರವಾಗಿ ನಿರ್ಮಾಣವಾಗುತ್ತಿರುವ ಕಟ್ಟಡದ ತೆರವಿಗೆ ಆಗ್ರಹ
ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆಯವರು ಜಿಲ್ಲೆಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಹಾಗೂ ಜಿಲ್ಲೆಯ ಪ್ರತಿ ತಾಲೂಕಿನಲ್ಲಿಯೂ ಕನ್ನಡ ಭವನ ನಿರ್ಮಿಸಲು ಕಸಾಪ ಮಹತ್ವದ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ದಾಂಡೇಲಿಯ ಹಿರಿಯ ಲೇಖಕರಾದ ಡಾ. ಆರ್.ಜಿ. ಹೆಗಡೆಯವರ ‘ಮೊದಲ ಮಳೆಯ ಪರಿಮಳ’ ಹಾಗೂ ‘ಪ್ರಭುತ್ವದ ತಲ್ಲಣಗಳು’ ಎಂಬ ಕೃತಿಗಳು ಹಾಗೂ ಪ್ರವೀಣ ನಾಯಕ ಹಿಚ್ಕಡರವರ ‘ಅವ್ವನೆಂಬ ಹೊಂಗೆಯ ನೆರಳು’ ಎಂಬ ಸಂಪಾದಿತ ಕೃತಿಗಳನ್ನು ಬಿಡುಗಡೆಗೊಳಿಸಲಾಯಿತು. ಬಿ.ಎನ್.ವಾಸರೆ ಸ್ವಾಗತಿಸಿ, ವಂದಿಸಿದರು. ಶಿಕ್ಷಕ ವಿಷ್ಣು ಪಟಗಾರ ಕಾರ್ಯಕ್ರಮ ನಿರೂಪಿಸಿದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.