Kasargod: ಪೊಲೀಸ್ ಮತ್ತು ನಕ್ಸಲರ ಮಧ್ಯೆ ಗುಂಡಿನ ಚಕಮಕಿ- ಒಬ್ಬನಿಗೆ ಗಾಯ, ಇಬ್ಬರು ಪರಾರಿ
Team Udayavani, Nov 17, 2023, 12:48 AM IST
ಕಾಸರಗೋಡು: ಕೇರಳ-ಕರ್ನಾಟಕದ ಕಣ್ಣೂರು- ಕೊಡಗು ಗಡಿ ಪ್ರದೇಶದಲ್ಲಿ ಕೇರಳ ನಕ್ಸಲ್ ನಿಗ್ರಹ ಪಡೆ (ತಂಡರ್ ಬೋಲ್ಟ್) ಮತ್ತು ನಕ್ಸಲರ ಮಧ್ಯೆ ನ. 15ರಂದು ರಾತ್ರಿ ಗುಂಡಿನ ಚಕಮಕಿ ನಡೆದಿದ್ದು, ಓರ್ವ ನಕ್ಸಲ್ ಗಾಯಗೊಂಡಿದ್ದಾನೆ. ಆಂಧ್ರಪ್ರದೇಶದ ಲತಾ ಮತ್ತು ತಮಿಳುನಾಡಿನ ವನಜಾಕ್ಷಿ ಪರಾರಿಯಾಗಿದ್ದಾರೆ.
ಅರಣ್ಯದಿಂದ ಪರಾರಿಯಾಗಿರುವ ಈ ಇಬ್ಬರು ಬಸ್‌ನಲ್ಲಿ ರೈಲು ನಿಲ್ದಾಣಕ್ಕೆ ಬಂದು ಅಲ್ಲಿಂದ ರೈಲಿನಲ್ಲಿ ಪ್ರಯಾಣಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕಾಸರಗೋಡು ಸಹಿತ ರಾಜ್ಯದ ಎಲ್ಲ ರೈಲು ನಿಲ್ದಾಣಗಳಲ್ಲಿ ಪೊಲೀಸರು ಬಿಗು ತಪಾಸಣೆ ನಡೆಸುತ್ತಿದ್ದಾರೆ. ಮಾತ್ರವಲ್ಲ ಕಣ್ಣೂರು ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಗುಂಡಿನ ಚಕಮಕಿ ನಡೆದ ಸ್ಥಳದಿಂದ ಮೂರು ರೈಫಲ್‌ಗಳು, ಒಂದು ಲ್ಯಾಪ್‌ಟಾಪ್, ನಾಲ್ಕು ಮೊಬೈಲ್ ಫೋನ್‌ಗಳು ಹಾಗು ಎರಡು ಟೆಂಟ್‌ಗಳನ್ನು ವಶಪಡಿಸಲಾಗಿದೆ. ಈ ಸ್ಥಳದಲ್ಲಿ 9 ಮಂದಿ ನಕ್ಸಲರು ಇದ್ದಿರಬಹುದೆಂದು ಶಂಕಿಸಲಾಗಿದೆ. ಪರಾರಿಯಾಗಿದ್ದವರು ಕಬಿನಿ ದಳದವರಾಗಿದ್ದಾರೆ. ಈ ದಳದ ಮುಖಂಡ ಮೊದೀನ್ ಈ ಪ್ರದೇಶದಲ್ಲಿ ತಂಗಿದ್ದನೆಂದು ಪೊಲೀಸರಿಗೆ ಮಾಹಿತಿ ಲಭಿಸಿದೆ. ಹೆಚ್ಚುವರಿ ಪೊಲೀಸ್ ಪಡೆಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
Kasaragodu: ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.