ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ ಕಾಸರಗೋಡು, ದ.ಕ. ಜಿಲ್ಲೆ ಯುವಕರು

ಕೇರಳ - ಕರ್ನಾಟಕ ಗಡಿ ಬಂದ್‌ ಸಮಸ್ಯೆ

Team Udayavani, May 12, 2020, 10:35 AM IST

ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ ಕಾಸರಗೋಡು, ದ.ಕ. ಜಿಲ್ಲೆ ಯುವಕರು

ಮಂಗಳೂರು: ಕೋವಿಡ್ ಹರಡಬಾರದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ-ಕೇರಳ ಗಡಿ ಬಂದ್‌ ಮಾಡಿರುವುದು ಇದೀಗ ಉಭಯ ರಾಜ್ಯಗಳ ಉದ್ಯೋಗಿಗಳ ಮೇಲೆ ಪರಿಣಾಮ ಬೀರಿದೆ. ಗಡಿ ದಾಟಿ ಬರಲಾರದೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಿದೆ.

ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಕ್ಕೆ, ಅದರಲ್ಲೂ ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಕೇರಳದಿಂದ ಬರುವ ಸುಮಾರು 10 ಗಡಿಗಳನ್ನು ಬಂದ್‌ ಮಾಡಲಾಗಿತ್ತು. ದ.ಕ.ದಲ್ಲಿ ಪ್ರಕರಣ ವೃದ್ಧಿಸಿ ಕಾಸರಗೋಡಿನಲ್ಲಿ ಇಳಿಕೆಯಾಗುತ್ತಿದ್ದಂತೆ ಕೇರಳ ಸರಕಾರವೂ ಇದೇ ನಿರ್ಧಾರವನ್ನು ತೆಗೆದುಕೊಂಡಿತ್ತು. ಈ ನಿರ್ಧಾರ ಇದೀಗ ಮಂಗಳೂರಿನಲ್ಲಿ ಕೆಲಸ ಮಾಡುವ ಕೇರಳದ ಮತ್ತು ಕೇರಳದಲ್ಲಿ ಕೆಲಸ ಮಾಡುವ ದಕ್ಷಿಣ ಕನ್ನಡದ ಉದ್ಯೋಗಿಗಳ ಮೇಲೆ ಪರಿಣಾಮ ಬೀರಿದೆ. ನಿರಂತರ ಗೈರುಹಾಜರಿಯಿಂದ ಕೆಲವರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಲಾಕ್‌ಡೌನ್‌ ಪರಿಣಾಮ ಒಂದೂವರೆ ತಿಂಗಳಿನಿಂದ ಬಾಗಿಲು ಹಾಕಿದ್ದ ಕೆಲವು ಕಂಪೆನಿಗಳು ಲಾಕ್‌ಡೌನ್‌ ಸಡಿಲಿಕೆಯಾಗುತ್ತಿದ್ದಂತೆ ಬಾಗಿಲು ತೆರೆದು ಕನಿಷ್ಠ ಸಿಬಂದಿ ಮೂಲಕ ಕಾರ್ಯಾರಂಭಿಸಿವೆ. ಮಂಗಳೂರಿನಲ್ಲಿ ಕೆಲಸ ಮಾಡುವ ಕೇರಳದ ಕಾಸರಗೋಡಿನವರನ್ನು ಆಯಾ ಕಂಪೆನಿಗಳು ಕೆಲಸಕ್ಕೆ ಹಾಜರಾಗಬೇಕೆಂದು ತಿಳಿಸಿವೆ. ಅತ್ತ ಕೇರಳದ ಕಂಪೆನಿಗಳೂ ಕೆಲಸಕ್ಕೆ ಬರುವಂತೆ ಸೂಚಿಸಿವೆ. ಆದರೆ ಇನ್ನೂ ಕೂಡ ಗಡಿ ಸಂಚಾರಕ್ಕೆ ಮುಕ್ತವಾಗದ ಕಾರಣ ಉದ್ಯೋಗಿಗಳು ದಾರಿ ಕಾಣದಾಗಿದ್ದಾರೆ.

ಸರಕಾರಕ್ಕೆ ಮನವಿ
ಸಮಸ್ಯೆಯ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಸಂದೇಶ ಕಳುಹಿಸಿ ಉಭಯ ರಾಜ್ಯಗಳ ಸರಕಾರ, ಜನಪ್ರತಿನಿಧಿಗಳ ಗಮನಕ್ಕೆ ತರುವ ಕೆಲಸ ಮಾಡಲಾಗುತ್ತಿದೆ.ಜೀವನೋಪಾಯಕ್ಕಾಗಿ ನಿತ್ಯ ಓಡಾಟ ನಡೆಸುವ ಅನಿವಾರ್ಯ ಇರುವವರಿಗೆ ಸ್ವಂತ ವಾಹನದಲ್ಲಿ ದಿನಕ್ಕೆರಡು ಬಾರಿ ಸಂಚರಿಸಲು ಪಾಸ್‌ ವ್ಯವಸ್ಥೆ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಕ್ವಾರಂಟೈನ್‌ ಗೊಂದಲ
ನೆರೆಯ ಕೇರಳ ಮಾತ್ರವಲ್ಲದೆ, ಇತರ ಹೊರ ರಾಜ್ಯಗಳಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮಂದಿಯೂ ಇದೇ ಸಮಸ್ಯೆ ಅನುಭವಿಸುತ್ತಿದ್ದಾರೆ. ಕೆಲಸಕ್ಕೆ ಹಾಜರಾಗುವಂತೆ ಕಂಪೆನಿಗಳಿಂದ ಕರೆ ಬಂದಿದ್ದು, ಕೋವಿಡ್ ತಪಾಸಣೆ ನಡೆಸಬೇಕೊ, ಕೋವಿಡ್ ಇಲ್ಲವೆಂಬ ಪ್ರಮಾಣಪತ್ರ ಕೊಂಡೊಯ್ಯಬೇಕೊ, ಹಾಗೆ ಪ್ರಮಾಣಪತ್ರ ಕೊಂಡೊಯ್ದರೆ ಹೋಂ ಕ್ವಾರಂಟೈನ್‌ನಲ್ಲಿರಬೇಕೋ ಎಂಬ ಗೊಂದಲದಲ್ಲಿದ್ದಾರೆ. ಇಂತಹ ಉದ್ಯೋಗಿಗಳೂ ಲಾಕ್‌ಡೌನ್‌ ಮುಗಿಯುವವರೆಗೆ ಕಾದರೆ ಉದ್ಯೋಗ ಕಳೆದುಕೊಳ್ಳುವ ಭೀತಿಯೂ ಇದೆ.

ಲಾಕ್‌ಡೌನ್‌ ಸಂಪೂರ್ಣ ತೆರವಾಗುವವರೆಗೆ ರಾಜ್ಯದ ಹೊರಗಿನವರು ಬರುವುದಕ್ಕೆ ಅವಕಾಶ ಇರುವುದಿಲ್ಲ. ಉದ್ಯೋಗದಾತ ಸಂಸ್ಥೆಗಳೂ ಕೂಡ ಈ ಸಂಬಂಧ ಗಡಿಬಿಡಿ ಮಾಡಬಾರದು. ಕೋವಿಡ್ ಭೀತಿ ಇರುವಾಗ ನಿಯಮ, ಸಮಯಾವಕಾಶದ ಹೆಸರಿನಲ್ಲಿ ಅಮಾನತು, ಕೆಲಸದಿಂದ ತೆಗೆಯುವ ಸೂಚನೆ ನೀಡಬಾರದು.
– ಕೋಟ ಶ್ರೀನಿವಾಸ ಪೂಜಾರಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರು

ಟಾಪ್ ನ್ಯೂಸ್

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.