![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 16, 2020, 4:35 PM IST
ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ ಹೊಸ ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿಲ್ಲ. ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಗುಣಮುಖರಾಗಿದ್ದಾರೆ.
ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಒಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಕೇರಳದಲ್ಲಿ ಬುಧವಾರ 7 ಮಂದಿ ಕೋವಿಡ್ ಸೋಂಕಿನಿಂದ ಮುಕ್ತರಾಗಿದ್ದಾರೆ. ಕಾಸರಗೋಡಿನಲ್ಲಿ ನಾಲ್ವರು, ಕಲ್ಲಿಕೋಟೆಯಲ್ಲಿ ಇಬ್ಬರು ಮತ್ತು ಕೊಲ್ಲಂ ಜಿಲ್ಲೆಯಲ್ಲಿ ಒಬ್ಬರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 387 ಮಂದಿಗೆ ಕೊರೊನಾ ಬಾಧಿಸಿದ್ದು, ಈ ಪೈಕಿ 218 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸಾವಿಗೀಡಾಗಿದ್ದಾರೆ. ಆಸ್ಪತ್ರೆಗಳಲ್ಲಿ ಸದ್ಯ 167 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೇರಳದಲ್ಲಿ ಪ್ರಸ್ತುತ 522 ಮಂದಿ ಆಸ್ಪತ್ರೆಗಳಲ್ಲಿ ನಿಗಾದಲ್ಲಿದ್ದಾರೆ. ಬುಧವಾರ 86 ಮಂದಿಯನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಈವರೆಗೆ 167 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಪೈಕಿ 83 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 84 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಗುಣಮುಖರಾದವರಲ್ಲಿ ಮೂವರು ಕಾಸರಗೋಡಿನ ಜನರಲ್ ಆಸ್ಪತ್ರೆಯಲ್ಲಿ, ಇನ್ನೊಬ್ಬರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
47 ಕೇಸ್ ದಾಖಲು
ಲಾಕ್‌ಡೌನ್ ಉಲ್ಲಂಘನೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ವಿವಿಧ ಠಾಣೆಗಳಲ್ಲಾಗಿ 47 ಕೇಸ್‌ಗಳನ್ನು ದಾಖಲಿಸಲಾಗಿದೆ. 63 ಮಂದಿಯನ್ನು ಬಂಧಿಸಲಾಗಿದೆ. 21 ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.