Kasturirangan; ಮಲೆನಾಡು ತಪ್ಪಲಿನ ಜನತೆ ಮತ್ತೆ ಹೋರಾಟಕ್ಕೆ ಸಜ್ಜು
ಕಸ್ತೂರಿ ವರದಿ ಅನುಷ್ಠಾನದ ಗುಮ್ಮ
Team Udayavani, Nov 18, 2023, 12:43 AM IST
ಕಡಬ: ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಯಾವುದೇ ಕ್ಷಣದಲ್ಲಿ ಅನುಮೋದನೆ ಸಿಗಬಹುದು ಎನ್ನುವ ಆತಂಕದಲ್ಲಿರುವ ರಾಜ್ಯದ ಪಶ್ಚಿಮ ಘಟ್ಟದ ಗ್ರಾಮಗಳ ಜನರು ಮತ್ತೆ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ.
ಇತ್ತೀಚೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ವರದಿ ಅನುಷ್ಠಾನದ ಕುರಿತು ನೀಡಿರುವ ಹೇಳಿಕೆಯನ್ನು ವಿರೋಧಿಸಿ ಮಲೆನಾಡು ಜನ ಹಿತರಕ್ಷಣ ವೇದಿಕೆ ಸುಬ್ರಹ್ಮಣ್ಯದಿಂದ ಹೋರಾಟ ಪ್ರಾರಂಭಿಸಿದೆ.
ಕಸ್ತೂರಿ ವರದಿಯನ್ನು ಅನುಷ್ಠಾನ ಮಾಡಬಾರದು, ಪ್ರಸ್ತಾವಿತ ಸ್ಥಳದ ರೈತರನ್ನು ಒಕ್ಕಲೆಬ್ಬಿಸದೆ ಹಕ್ಕುಪತ್ರ ನೀಡಬೇಕು, ಜಂಟಿ ಸರ್ವೇ ನಡೆಸಬೇಕು, ಜನವಸತಿಯಿಲ್ಲದ ಪ್ರದೇಶಗಳಿಗೆ ಆನೆಗಳ ಸ್ಥಳಾಂತರ, ಅಡಿಕೆ ಹಳದಿ ರೋಗ ಹಾಗೂ ಎಲೆಚುಕ್ಕಿ ರೋಗದಿಂದ ಸಂತ್ರಸ್ತರಾದ ಬೆಳೆಗಾರರು ಅಸೌಖ್ಯಕ್ಕೀಡಾದಾಗ ಅವರು ಬಯಸಿದ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ. ವಿವಿಧ ಸಹಕಾರಿ ಸಂಘ, ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ, ಕಾಡು ಪ್ರಾಣಿಗಳಿಂದ ರಕ್ಷಣೆಗಾಗಿ ಕೋವಿ ಪರವಾನಿಗೆ ಇತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ.
ಕಾರವಾರದಿಂದ ಚಾಮರಾಜನಗರ ತನಕ ರಾಜ್ಯದ 7 ಜಿಲ್ಲೆಗಳ ಪಶ್ಚಿಮ ಘಟ್ಟ ಭಾಗದ ಸಾವಿರಾರು ಗ್ರಾಮಗಳ ಲಕ್ಷಾಂತರ ಕುಟುಂಬದವರಿಗೆ ಈ ವರದಿ ಕಂಟಕಪ್ರಾಯವಾಗಿದೆ. ಇದನ್ನು ತಿರಸ್ಕರಿಸಬೇಕೆಂದು ಆಗ್ರಹಿಸಿ 17 ವರ್ಷಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಹಸುರು ಪೀಠವು ಹಿಂದಿನ ಆದೇಶವನ್ನೇ ಜಾರಿಗೊಳಿಸುವಂತೆ ಆದೇಶಿಸಿದ್ದು, ಸಂಬಂಧಪಟ್ಟ ಗ್ರಾಮಸ್ಥರು ಮತ್ತೆ ಭಯಕ್ಕೀಡಾಗುವಂತಾಗಿದೆ.
ವರದಿ ಅನುಷ್ಠಾನಗೊಂಡರೆ?
ವರದಿ ಅನುಷ್ಠಾನಗೊಂಡರೆ ಜನರ ಸಂಪೂರ್ಣ ಕೃಷಿ ಭೂಮಿಯನ್ನು ಅರಣ್ಯ ಇಲಾಖೆ ವಶಪಡಿಸಿಕೊಳ್ಳುತ್ತದೆ. ಅಂತಹ ಭೂಮಿಗೆ ಯಾವುದೇ ಪರಿಹಾರ ಅಥವಾ ಸಂತ್ರಸ್ತ ಕುಟುಂಬಗಳಿಗೆ ಪುನರ್ವಸತಿಯ ಉಲ್ಲೇಖವಾಗಲಿ ವರದಿಯಲ್ಲಿ ಇಲ್ಲ. ವಸತಿ ಇತರ ಕಟ್ಟಡಗಳಿಗೂ ಪರಿಹಾರ ಘೋಷಿಸಿಲ್ಲ. ಈಗಾಗಲೇ ಅರಣ್ಯ ಹಾಗೂ ಸರಕಾರಿ ಜಮೀನಿನಲ್ಲಿ ಮನೆಕಟ್ಟಿ ವಾಸಿಸುತ್ತಿರುವವರನ್ನೂ ಒಕ್ಕಲೆಬ್ಬಿಸಲಾಗುತ್ತದೆ. ಈಗಾಗಲೇ ಪಡೆದ ಭೂಮಿಯ ಹಕ್ಕುಪತ್ರಗಳು, ರೈತರ ಕೋವಿ ಪರವಾನಿಗೆ ರದ್ದುಗೊಳ್ಳಲಿದೆ. ರಾಷ್ಟ್ರೀಯ ಹೆದ್ದಾರಿ 48, ರಾಜ್ಯ ಹೆದ್ದಾರಿಗಳಾದ ಬಿಸಿಲೆ ಹಾಗೂ ಚಾರ್ಮಾಡಿ ಘಾಟಿ ರಸ್ತೆಗಳು ಹಾಗೂ ಮಂಗಳೂರು- ಬೆಂಗಳೂರು ರೈಲು ಮಾರ್ಗಗಳು ಯೋಜನೆಯ ನೀಲ ನಕಾಶೆಯಲ್ಲಿ ಒಳಪಡುವುದರಿಂದ ಭವಿಷ್ಯದಲ್ಲಿ ಇವೆಲ್ಲ ಮಾರ್ಗಗಳು ಮುಚ್ಚಲಿವೆ. ಲಕ್ಷಾಂತರ ಮಂದಿ ನಿರ್ಗತಿಕರಾಗಲಿದ್ದಾರೆ ಎನ್ನಲಾಗುತ್ತಿದೆ.
ಈ ಹಿಂದಿನ ಬಿಜೆಪಿ ಸರಕಾರವು ಸಮಿತಿ ರಚಿಸಿ ಕೇಂದ್ರ ಸರಕಾರಕ್ಕೆ ಕಸ್ತೂರಿ ವರದಿಯನ್ನು ಅನುಷ್ಠಾನ ಮಾಡಬಾರದು; ಮಾಡಿದರೂ ಜನಪರವಾದ ಹಲವು ಮಾರ್ಪಾಟುಗಳನ್ನು ಮಾಡಬೇಕು ಎಂದು ತಿಳಿಸಿತ್ತು. ಈಗ ನಾವು ಅದರ ಪ್ರತಿಯನ್ನು ಮಾಹಿತಿ ಹಕ್ಕಿನಲ್ಲಿ ಕೇಳಿದರೆ ಕೊಡುತ್ತಿಲ್ಲ.ಯಾವುದೇ ಕ್ಷಣದಲ್ಲಿ ರಾಜ್ಯ ಸರಕಾರ ಕಸ್ತೂ¤ರಿ ವರದಿಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬಹುದು ಎನ್ನುವ ಭೀತಿಯಿದ್ದು, ವರದಿಯನ್ನು ಕೈಬಿಡುವ ತನಕ ಹೋರಾಟ ನಿಲ್ಲದು.
– ಕಿಶೋರ್ ಶಿರಾಡಿ,
ಸಂಚಾಲಕರು, ಮಲೆನಾಡು ಜನಹಿತ ರಕ್ಷಣ ವೇದಿಕೆ,
ದ.ಕ. ಜಿಲ್ಲೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.