ಕಟಪಾಡಿ ಗ್ರಾಮ ಪಂಚಾಯತ್ ಆಡಳಿತದ ಗದ್ದುಗೆ ಏರಿದ ಕಾಂಗ್ರೆಸ್
Team Udayavani, Feb 16, 2021, 8:53 PM IST
ಕಟಪಾಡಿ : ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ಇಂದಿರಾ ಆಚಾರ್ಯ, ಉಪಾಧ್ಯಕ್ಷರಾಗಿ ಅಬೂಬಕ್ಕರ್ ಎ ಆರ್ ಆಯ್ಕೆಗೊಂಡಿರುತ್ತಾರೆ.
ಒಟ್ಟು 26 ಸದಸ್ಯ ಬಲದ ಕಟಪಾಡಿ ಗ್ರಾಮ ಪಂಚಾಯತ್ ನಲ್ಲಿ ಕವಿತಾ ಸುವರ್ಣ ಅವರು ಬಿಜೆಪಿ ಬೆಂಬಲಿತರಾಗಿ ಅಧ್ಯಕ್ಷ ಸ್ಥಾನಕ್ಕೆ ಇಂದಿರಾ ಎಸ್ ಆಚಾರ್ಯ ವಿರುದ್ಧ ಸ್ಪರ್ಧೆಗಿಳಿದಿದ್ದರು.
ಬಿಜೆಪಿ ಬೆಂಬಲಿತ ಸುಭಾಸ್ ಬಿಲ್ಲವ ಇವರು ಅಬೂಬಕ್ಕರ್ ವಿರುದ್ಧ ಸ್ಪರ್ಧೆಗೆ ಕಣದಲ್ಲಿದ್ದರು ಅಂತಿಮವಾಗಿ 16 :10 ಮತಗಳ ಅಂತರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ಮೂಲಕ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತರು ಆಡಳಿತದ ಗದ್ದುಗೆ ಹಿಡಿದಿರುತ್ತಾರೆ.
ಕೋಟೆ :ಕಾಂಗ್ರೆಸ್ ತೆಕ್ಕೆಗೆ
ಕಟಪಾಡಿ: ಒಟ್ಟು 15 ಸದಸ್ಯ ಬಲದ ಕೋಟೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾಂ.ಬೆಂಬಲಿತರಾದ ಕಿಶೋರ್ ಕುಮಾರ್ ಅಂಬಾಡಿ ಅವರು ಪ್ರತಿಸ್ಪರ್„ ಬಿ.ಬೆಂ. ಯೋಗೀಶ್ ವಿರುದ್ಧ 8:7 ಮತಗಳ ಅಂತರದಲ್ಲಿ ಗೆಲುವನ್ನು ಸಾ„ಸಿರುತ್ತಾರೆ. ಉಪಾಧ್ಯಕ್ಷರಾಗಿ ಕಾಂ.ಬೆಂ. ಪ್ರಮೀಳಾ ಪಿ. ಜತ್ತನ್ನ ನಾಮಪತ್ರ ಸಲ್ಲಿಸಿದ ಏಕೈಕ ಅಭ್ಯರ್ಥಿಯಾಗಿದ್ದು ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ.
ಕುರ್ಕಾಲು : ಗೆದ್ದ ಪ್ರಥಮದಲ್ಲಿಯೇ ಅಧ್ಯಕ್ಷ, ಉಪಾಧ್ಯಕ್ಷ ಗಾದಿಗೇರಿದ ಮಹೇಶ್ ಶೆಟ್ಟಿ ಬಿಳಿಯಾರು, ಸೀಮಾ ಡಿಸೋಜ
ಕಟಪಾಡಿ : ಕುರ್ಕಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ಮಹೇಶ್ ಶೆಟ್ಟಿ ಬಿಳಿಯಾರು, ಉಪಾಧ್ಯಕ್ಷರಾಗಿ ಮಾರ್ಗರೇಟ್ ಸೀಮಾ ಡಿಸೋಜ ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಒಟ್ಟು 16 ಸದಸ್ಯ ಬಲದ ಕುರ್ಕಾಲು ಗ್ರಾ.ಪಂ.ನಲ್ಲಿ ಇವರಿಬ್ಬರೂ ಪ್ರಥಮವಾಗಿ ಗೆದ್ದು ಬಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.