ಕಟಪಾಡಿ ಪೇಟೆ: ಮುಗಿಯದ ಪಾರ್ಕಿಂಗ್‌ ಸಮಸ್ಯೆ

ನಿಲ್ದಾಣದೊಳಗೆ ಪಾರ್ಕಿಂಗ್‌ ಮಾಡುತ್ತಿದ್ದಾರೆ ; ಬಸ್‌ ನಿಲ್ದಾಣಕ್ಕೆ ಬಸ್‌ ಬರುವುದೇ ಇಲ್ಲ

Team Udayavani, Aug 21, 2021, 6:34 AM IST

ಕಟಪಾಡಿ ಪೇಟೆ: ಮುಗಿಯದ ಪಾರ್ಕಿಂಗ್‌ ಸಮಸ್ಯೆ

ಕಟಪಾಡಿ ಪೇಟೆಯಲ್ಲಿ ಜನರು ವಾಹನಗಳನ್ನು ಪಾರ್ಕಿಂಗ್‌ ಮಾಡಲು ಸ್ಥಳವಿಲ್ಲದೆ ಬಸ್‌ಸ್ಟಾಂಡ್‌ ಒಳಗಡೆಯೇ ಪಾರ್ಕಿಂಗ್‌ ಮಾಡುವುದರಿಂದ ಬಸ್‌ಗಳು ನಿಲ್ದಾಣಕ್ಕೆ ಬರುವುದೇ ಇಲ್ಲ .

ಕಟಪಾಡಿ: ಕಟಪಾಡಿ ಪೇಟೆಯಾದ್ಯಂತ ಎಲ್ಲೆಡೆ ಪಾರ್ಕಿಂಗ್‌ ಸಮಸ್ಯೆಯು ತಲೆದೋರಿದ್ದು, ಕಟಪಾಡಿ ಬಸ್‌ ನಿಲ್ದಾಣಕ್ಕೆ ಬಸ್‌ಬರು ತ್ತಿ ಲ್ಲ. ನಿತ್ಯ ಪ್ರಯಾಣಿಕರು ರಾಷ್ಟ್ರೀಯ ಹೆದ್ದಾರಿ ದಾಟುವ ಮತ್ತು ಗ್ರಾಹಕರು ಪಾರ್ಕಿಂಗ್‌ ವಾಹನಗಳ ಎಡೆಯಲ್ಲಿ ನುಸುಳಿಕೊಂಡು ಹೋಗಿ ಖರೀದಿಸುವ ಸಮಸ್ಯೆಯನ್ನು ಅನುಭವಿಸುವಂತಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರ ಜಂಕ್ಷನ್‌ ಪ್ರದೇಶವಾಗಿ ಗುರುತಿಸಿಕೊಂಡಿರುವ ಕಟಪಾಡಿ ಪೇಟೆಯು ಸಾಕಷ್ಟು ವ್ಯಾಪಾರ ಮಳಿಗೆಗಳು, ವಾಣಿಜ್ಯ ಮಳಿಗೆಗಳು, ವಸತಿ ಸಮುತ್ಛಯಗಳು, ಹಲವು ದೇಗುಲಗಳು, ಆರಾಧನ ಕೇಂದ್ರಗಳು, ಹೊಟೇಲ್‌ಗ‌ಳು, ಹೆಸರುವಾಸಿ ವೈದ್ಯರು, ಕ್ಲಿನಿಕಲ್‌ ಲ್ಯಾಬೋರೇಟರಿಗಳನ್ನು ಹೊಂದಿದೆ. ಅಲ್ಲದೆ ಮಟ್ಟು, ಕೋಟೆ, ಶಿರ್ವ, ಶಂಕರಪುರ, ಮಣಿಪುರ ಸಹಿತ ಇತರ ಗ್ರಾಮಗಳಿಗೂ ಕೇಂದ್ರ ಸ್ಥಳವಾಗಿ ಬೆಳೆದು ನಿಂತಿದೆ. ಆ ನಿಟ್ಟಿನಲ್ಲಿ ಸದಾ ಜನಜಂಗುಳಿ, ಗ್ರಾಹಕರಿಂದ ಕಟಪಾಡಿ ಪೇಟೆಯು ಗಿಜಿಗುಡುತ್ತಿರುತ್ತದೆ.

ಈಗಾಗಲೇ ಸಮಸ್ಯೆಯ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ ಪ್ರತಿಫಲ ಶೂನ್ಯವಾಗಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಸಂದರ್ಭ ಸ್ವಾಧೀನಪಡಿಸಿಕೊಳ್ಳಲಾದ ಪ್ರದೇಶ ಮತ್ತು ಅಳಿದುಳಿದ ಕಟ್ಟಡಗಳನ್ನು ತೆರವುಗೊಳಿಸಿದಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಕಟಪಾಡಿ ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷ ಪ್ರೇಮ್‌ ಕುಮಾರ್‌ ಹೇಳುತ್ತಾರೆ.

ಇದನ್ನೂ ಓದಿ:“ಅವರು ಬದಲಾಗಿಲ್ಲ, ನಮಗೆ ಸಾವೇ ಗತಿ’ : ತಾಲಿಬಾನ್‌ ಆಡಳಿತದ ಕುರಿತು ಹೆಂಗಳೆಯರ ನೋವಿನ ಮಾತು

ಕಟಪಾಡಿ ಪೇಟೆಯೊಳಗಿನ ಬಸ್‌ ತಂಗುದಾಣಕ್ಕೆ ಬಸ್‌ ಬರಬೇಕು. ಕಾರು ಪಾರ್ಕಿಂಗ್‌ಗೂ ಸೂಕ್ತ ಸ್ಥಳಾವಕಾಶ ಕಲ್ಪಿಸಬೇಕಿದೆ. ಇಲಾಖಾ ಧಿಕಾರಿಗಳು ತಕ್ಕ ಕ್ರಮ ಕೈಗೊಳ್ಳಬೇಕಿದ್ದು, ಕಟಪಾಡಿಯಲ್ಲಿ ಘೋಷಣೆಯಾಗಿರುವ ಮೇಲ್ಸೇತುವೆ ಶೀಘ್ರವಾಗಿ ನಿರ್ಮಾಣಗೊಂಡಲ್ಲಿ ಸೂಕ್ತ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂಬುದು ಕಟಪಾಡಿ ಕಾರು ಚಾಲಕ- ಮಾಲಕರ ಸಂಘದ ಅಧ್ಯಕ್ಷ ರಮೇಶ್‌ ಕೋಟ್ಯಾನ್‌ ಅವರ ಅಭಿ ಪ್ರಾಯವಾಗಿದೆ.

ಸ್ಥಳೀಯ ಕಟಪಾಡಿ ಗ್ರಾ.ಪಂ. ಮತ್ತು ಕಾಪು ಪೊಲೀಸರು ಹಾಗೂ ಸಂಬಂಧಪಟ್ಟ ಇಲಾಖಾಧಿಕಾರಿಗಳು ಈ ಸಮಸ್ಯೆಗಳನ್ನು ಸೌಹಾರ್ದ ಯುತವಾಗಿ ಬಗೆಹರಿಸಬೇಕಾದ ಅಗತ್ಯವಿದೆ.

ವಾಹನಗಳ ಪಾರ್ಕಿಂಗ್‌ ಸಮಸ್ಯೆ
ಕಟಪಾಡಿ ಪೇಟೆಯಲ್ಲಿನ ಬಸ್‌ ನಿಲ್ದಾಣದ ಸ್ಥಳದಲ್ಲಿ ವಾಹನ ಪಾರ್ಕಿಂಗ್‌ ಮಾಡಿ ತೆರಳುವುದರಿಂದ ಪಾರ್ಕಿಂಗ್‌ ಸಮಸ್ಯೆ ಮತ್ತು ಬಸ್‌ ನಿಲ್ದಾಣಕ್ಕೆ ಬಸ್ಸೇ ಬಾರದಂತಹ ಬಿಕ್ಕಟ್ಟಿನ ಪರಿಸ್ಥಿತಿ ನಿರ್ಮಾಣಗೊಂಡಂತಾಗಿದೆ. ವ್ಯಾಪಾರ ಸಂಕೀರ್ಣದ ಮುಂಭಾಗದಲ್ಲಿ ಎಲ್ಲೆಂದರಲ್ಲಿ ಎರ್ರಾಬಿರ್ರಿಯಾಗಿ ವಾಹನಗಳನ್ನು ನಿಲ್ಲಿಸುವುದರಿಂದ ಗ್ರಾಹಕರು ಸಮಸ್ಯೆಯನ್ನು ಎದುರಿಸುವಂತಾಗಿದೆ. ಮುಂಬರುವ ದಿನಗಳಲ್ಲಿ ಹಬ್ಬಗಳು, ಶುಭ ಸಮಾರಂಭಗಳು ನಡೆಯಲಿರುವ ಕಾರಣ ಸಮಸ್ಯೆಯು ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಹೆಚ್ಚಿದೆ.

ಇತರ ಸಮಸ್ಯೆಗಳೇನು?
– ವಯೋವೃದ್ಧರು, ಮಕ್ಕಳು, ಮಹಿಳೆಯರು, ಅಂಗವಿಕಲರು, ಬಸ್‌ಗಾಗಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯನ್ನು ಹೆದ್ದಾರಿಯನ್ನು ದಾಟುವಂತಹ ಅನಿವಾರ್ಯ ಪರಿಸ್ಥಿತಿ ಇದ್ದು ಅಪ ಘಾತ ಸಂಭವಿಸುವ ಸಾಧ್ಯತೆ ಇರುತ್ತದೆ.
– ಬಸ್‌ ಪೇಟೆಯೊಳಕ್ಕೆ ಬಾರದೇ ಕೆಲವು ವ್ಯಾಪಾರಸ್ಥರು ಗ್ರಾಹಕರನ್ನು ಕಳೆದುಕೊಂಡಂತಾಗಿದೆ.

ಬಸ್‌ಸ್ಟ್ಯಾಂಡ್ ಉಳಿಯಲಿ
ಉದ್ಯೋಗಕ್ಕಾಗಿ ಮತ್ತು ಬೇರೆ ಊರುಗಳಿಗೆ ತೆರಳುವ ಮಂದಿ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿ ಲಾಕ್‌ ಹಾಕಿ ತೆರಳುತ್ತಾರೆ. ಕಟಪಾಡಿ ಬಸ್‌ಸ್ಟ್ಯಾಂಡ್ ಹಾಗೆಯೇ ಉಳಿಯಲಿ. ಖಾಸಗಿ ವಾಹನಗಳ ಪಾರ್ಕಿಂಗ್‌ ಸ್ಥಳವಾಗದಿರಲಿ .
-ವೈ. ರಂಜನ್‌ ಹೆಗ್ಡೆ, ಅಧ್ಯಕ್ಷರು, ವರ್ತಕರ ಸಂಘ ಕಟಪಾಡಿ

ಸೂಕ್ತ ಕಾನೂನು ಕ್ರಮ
ಕಟಪಾಡಿ ಪೇಟೆಯೊಳಗೆ ಬಸ್‌ಬರುವಲ್ಲಿ ಅನುಕೂಲತೆ ಕಲ್ಪಿಸಲು ಅನಧಿಕೃತ ಪಾರ್ಕಿಂಗ್‌ಗೆ ಕಡಿವಾಣ ಹಾಕಲಾಗುತ್ತದೆ. ಪಾರ್ಕಿಂಗ್‌ ಸಮಸ್ಯೆ ಮತ್ತೂ ಮುಂದುವರಿದಲ್ಲಿ ಪೊಲೀಸ್‌ ಇಲಾಖೆಯಿಂದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
-ರಾಘವೇಂದ್ರ, ಪಿ.ಎಸ್‌.ಐ. ಕಾಪು ಪೊಲೀಸ್‌ ಠಾಣೆ

ಸಮಾಲೋಚನ ಸಭೆ
ಸಮಸ್ಯೆಯ ಪರಿಹಾರಕ್ಕೆ ಕೂಡಲೇ ಮತ್ತೊಮ್ಮೆ ಸಾರ್ವಜನಿಕರು, ಇಲಾಖಾಧಿಕಾರಿಗಳೊಂದಿಗೆ ಸಮಾಲೋಚನ ಸಭೆ ನಡೆಸಲಾಗುತ್ತದೆ. ಲಾಕ್‌ಡೌನ್‌ ಮುಂಚಿತವಾಗಿ ಕೈಗೊಂಡಂತೆ ಸೂಕ್ತ ಸುರಕ್ಷಾ ಕ್ರಮಗಳೊಂದಿಗೆ ಬಸ್‌ಕಟಪಾಡಿ ಬಸ್‌ನಿಲ್ದಾಣಕ್ಕೆ ಬರುವಲ್ಲಿ ಮತ್ತು ಪಾರ್ಕಿಂಗ್‌ ಸಮಸ್ಯೆ ನೀಗಿಸುವಲ್ಲಿ ಪ್ರಯತ್ನಿಸಲಾಗುತ್ತದೆ .
– ಮಮತಾ ವೈ. ಶೆಟ್ಟಿ, ಪಿ.ಡಿ.ಒ., ಕಟಪಾಡಿ ಗ್ರಾ.ಪಂ.

-ವಿಜಯ ಆಚಾರ್ಯ ಉಚ್ಚಿಲ

ಟಾಪ್ ನ್ಯೂಸ್

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.