KEA: ನಿಗಮ- ಮಂಡಳಿಗಳ ಹುದ್ದೆ ಭರ್ತಿಗೆ ಅ.28, 29 ಪರೀಕ್ಷೆ
Team Udayavani, Oct 21, 2023, 12:18 AM IST
ಬೆಂಗಳೂರು: ಕಿಯೋನಿಕ್ಸ್, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಸಹಿತ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಅ.28 ಮತ್ತು 29ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದು, ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಬಿಡುಗಡೆ ಮಾಡಿದೆ.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ ಇಂಟನ್ಯಾಷನಲ್ ಲಿಮಿಟೆಡ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಖಾಲಿ ಹುದ್ದೆಗಳಿಗೆ ಕೆಇಎ ಪರೀಕ್ಷೆ ನಡೆಸುತ್ತಿದೆ.
ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಒಂದಕ್ಕಿಂತ ಹೆಚ್ಚು ಪ್ರವೇಶ ಪತ್ರಗಳು ಡೌನ್ಲೋಡ್ ಆಗಿವೆ. ಕೆಲವರಿಗೆ ಅ.28 ಮತ್ತು 29 ಈ ಎರಡೂ ದಿನಾಂಕಗಳಂದು ಎರಡು ಪ್ರತ್ಯೇಕ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳಿದ್ದು, ಅಂಥವರು ಎರಡೂ ಕಡೆ ಪರೀಕ್ಷೆ ಬರೆಯಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ರಮ್ಯಾ ತಿಳಿಸಿದ್ದಾರೆ.
ಕೆಲವು ಅಭ್ಯರ್ಥಿಗಳಿಗೆ ಒಂದೇ ದಿನ ಒಂದೇ ಅವಧಿಯಲ್ಲಿ ಎರಡು ಪ್ರತ್ಯೇಕ ಜಿಲ್ಲೆಗಳಲ್ಲಿ ಅಥವಾ ಪ್ರತ್ಯೇಕ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಪ್ರವೇಶ ಪತ್ರ ಡೌನ್ಲೋಡ್ ಆಗಿದೆ. ಅಂತಹ ಅಭ್ಯರ್ಥಿಗಳು ಮಾತ್ರ ಯಾವುದಾದರೊಂದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯತಕ್ಕದ್ದು. ಪರೀಕ್ಷಾ ದಿನದಂದು ಎರಡೂ ಪ್ರವೇಶಪತ್ರಗಳನ್ನು ಕೊಠಡಿಯ ಮೇಲ್ವಿಚಾರಕರಿಗೆ ಸಲ್ಲಿಸಬೇಕು ಎಂದು ಅವರು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.