ಕೆರಾಡಿ : ಮೊದಲ ಮಳೆಗೆ ಸಂಪೂರ್ಣ ಹದಗೆಟ್ಟ ಮುಖ್ಯ ರಸ್ತೆ
ಹಾಡಿಬಿರ್ಗಿ ಕ್ರಾಸ್ - ಕೆರಾಡಿ ಸಂಪರ್ಕ ರಸ್ತೆ ಕಾಂಕ್ರೀಟ್‌ಗೆ ಬೇಡಿಕೆ
Team Udayavani, Jun 8, 2020, 5:33 AM IST
ಕುಂದಾಪುರ: ಹಾಡಿಬಿರ್ಗಿ ಕ್ರಾಸ್‌ನಿಂದ ಕೆರಾಡಿಗೆ ಸಂಪರ್ಕಿಸುವ ಮುಖ್ಯ ರಸ್ತೆ ಹದಗೆಟ್ಟಿದೆ. ಅದರಲ್ಲೂ ಈಗ ಬಂದ ಮೊದಲ ಮಳೆಗೆ ಈಗಾಗಲೇ ಹಾಳಾಗಿದ್ದು 1 ಕಿ.ಮೀ. ಉದ್ದದ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಬೇಡಿಕೆ ಕೇಳಿ ಬಂದಿದೆ.
ನೇರಳಕಟ್ಟೆ-ಚಿತ್ತೂರು ಮುಖ್ಯ ರಸ್ತೆಯ ಹಾಡಿಬಿರ್ಗಿಯಿಂದ ಕೆರಾಡಿಗೆ ಸಂಪರ್ಕಿಸುವ ಸುಮಾರು 366 ಮೀಟರ್ ಉದ್ದದ, 3.75 ಮೀಟರ್ ಅಗಲದ ಸಂಪರ್ಕ ರಸ್ತೆಗೆ ಎರಡು ವರ್ಷಗಳ ಹಿಂದೆ ಡಾಮರು ಹಾಕಲಾಗಿತ್ತು. ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಡಿ ಇದಕ್ಕೆ 10 ಲಕ್ಷ ರೂ. ಮಂಜೂರಾಗಿತ್ತು. ಬಳಿಕ ಮಳೆಗಾಲದಲ್ಲಿಯೇ ಈ ರಸ್ತೆಯ ಡಾಮರು ಕಿತ್ತು ಹೋಗಿ ಅಲ್ಲಲ್ಲಿ ಬೃಹತ್ ಹೊಂಡಗಳು ಎದ್ದಿವೆ. ಅದರಲ್ಲೂ 50 ಮೀ. ರಸ್ತೆಗೆ ಡಾಮರು ಹಾಕಿದ ಜಾಗ ಸಂಪೂರ್ಣ ಕೆಸರಿನಿಂದ ಕೂಡಿದೆ.
ಕಾಂಕ್ರೀಟ್‌ಗೆ ಬೇಡಿಕೆ
ಹಾಡಿಬಿರ್ಗಿ ಕ್ರಾಸ್-ಕೆರಾಡಿ ರಸ್ತೆ ಹಾಳಾಗಲು ಮುಖ್ಯ ಕಾರಣ ರಸ್ತೆಯ ಎರಡೂ ಬದಿಗಳಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಆಗಿದೆ. ಒಂದೆರಡು ಕಡೆಗಳಲ್ಲಿ ಅಗತ್ಯವಿದ್ದರೂ ಮೋರಿ ಅಳವಡಿಸಿಲ್ಲ. ಅಲ್ಲದೆ ಒಂದು ಕಡೆಯಿಂದ ಜೇಡಿಮಣ್ಣಿನ ಬರೆಯಿದ್ದು, ಅದು ವರ್ಷ- ವರ್ಷವೂ ಮಳೆಗಾಲದಲ್ಲಿ ಕುಸಿಯುತ್ತದೆ. ಹಾಗಾಗಿ ಈ 1 ಕಿ.ಮೀ. ಉದ್ದದ ರಸ್ತೆಗೆ ಡಾಮರು ಹಾಕಿದರೂ ಒಂದೇ ಮಳೆಗಾಲದಲ್ಲಿ ಎದ್ದು ಹೋಗುತ್ತದೆ. ಕಾಂಕ್ರೀಟ್ ಕಾಮಗಾರಿ ನಡೆಸಿದರೆ ಮಾತ್ರ ಅನುಕೂಲವಾಗಬಹುದು ಎನ್ನುವುದು ಗ್ರಾಮಸ್ಥರ ಅಭಿಪ್ರಾಯ.
ಪ್ರಮುಖ ರಸ್ತೆ
ಕೆರಾಡಿ ಹಾಗೂ ಬೆಳ್ಳಾಲ ಗ್ರಾಮಗಳೆರಡು ಸೇರಿ ಒಟ್ಟು 6 ಸಾವಿರ ಮಂದಿ ಗ್ರಾಮಸ್ಥರಿದ್ದು, ಇದರಲ್ಲಿ ಶೇ. 90ರಷ್ಟು ಮಂದಿ ಇದೇ ರಸ್ತೆಯನ್ನು ಆಶ್ರಯಿಸಿದ್ದಾರೆ. ಕೆರಾಡಿ ಗ್ರಾ.ಪಂ., ಶಾಲೆ, ಶ್ರೀ ವರಸಿದ್ಧಿ ವಿನಾಯಕ ಕಾಲೇಜು, ಬ್ಯಾಂಕ್, ಉಪ ಆರೋಗ್ಯ ಕೇಂದ್ರಗಳಿಗೆ ತೆರಳಲು ಗ್ರಾಮಸ್ಥರಿಗೆ ಇರುವುದು ಇದೊಂದೇ ರಸ್ತೆ. ಈಗಲೇ ಇಷ್ಟೊಂದು ಹದಗೆಟ್ಟ ರಸ್ತೆ ಮಳೆಗಾಲದಲ್ಲಿ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ.
ಶಾಸಕರಿಗೆ
ಪ್ರಸ್ತಾವನೆ ಸಲ್ಲಿಕೆ
ಹಿಂದೆ ಈ ರಸ್ತೆಗೆ ಹಾಕಲಾದ ಡಾಮರು ಮಳೆಗಾಲದಲ್ಲಿ ಎದ್ದು ಹೋಗಿದೆ. ಜೇಡಿಮಣ್ಣಿನ ಬರೆ ರಸ್ತೆಗೆ ಬೀಳುತ್ತಿದ್ದು, ಇದರಿಂದ ಡಾಮರು ಉಳಿಯುವುದಿಲ್ಲ, ಕಾಂಕ್ರೀಟ್ ಹಾಕಿದರೆ ಸ್ವಲ್ಪ ಮಟ್ಟಿಗೆ ಪ್ರಯೋಜನವಾಗಲಿದೆ. ಈ ಬಗ್ಗೆ ಈಗಾಗಲೇ ಶಾಸಕರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
– ರಾಘವೇಂದ್ರ ಕೊಠಾರಿ, ಅಧ್ಯಕ್ಷರು, ಕೆರಾಡಿ ಗ್ರಾ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು
Karkala: ನಕ್ಸಲ್ ಚಟುವಟಿಕೆ 15 ವರ್ಷ ಬಳಿಕ ಬಹಿರಂಗವಾದ ಕಾರಣ ಸರಕಾರ ತಿಳಿಸಲಿ: ಸುನೀಲ್
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್‌ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Udupi: ವಿಸಿಲ್ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್ ನಿರ್ವಹಣೆ!
MUST WATCH
ಹೊಸ ಸೇರ್ಪಡೆ
BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ
Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.