Keragodu: ಮನೆ ಮನೆಗಳಲ್ಲಿ ಕೇಸರಿ ಧ್ವಜ ಅಭಿಯಾನ

Team Udayavani, Feb 1, 2024, 1:32 AM IST

hindu flag

ಮಂಡ್ಯ: ಕೆರಗೋಡು ಹನುಮ ಧ್ವಜ ವಿವಾದದ ಕಾವು ಮುಂದುವರಿದಿದೆ. ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ವಿರುದ್ಧ ಕೆರಗೋಡು ಗ್ರಾಮಸ್ಥರ ಆಕ್ರೋಶ ತಣ್ಣಗಾಗಿಲ್ಲ. ಸ್ವಯಂ ಪ್ರೇರಿತರಾಗಿ ಮನೆಗಳ ಮೇಲೆ ಕೇಸರಿ ಬಾವುಟ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಕೇಸರಿ ಧ್ವಜ ಅಭಿಯಾನಕ್ಕೆ ನಾಂದಿಯಾಗಿದೆ. ಕೇಸರಿ ಧ್ವಜ ಅಭಿಯಾನ ಮೂಲಕ ಮಂಡ್ಯ ಜಿಲ್ಲಾಡಳಿತಕ್ಕೆ ಗ್ರಾಮಸ್ಥರು ಸಡ್ಡು ಹೊಡೆಯಲು ಮುಂದಾಗಿದ್ದು, ಹಲವು ಮನೆಗಳ ಮೇಲೆ ಕೇಸರಿ ಧ್ವಜ ಹಾರಿಸಲಾಗಿದೆ.

9ನೇ ತರಗತಿ ವಿದ್ಯಾರ್ಥಿ ವಿಚಾರಣೆ
ಹನುಮ ಧ್ವಜ ತೆರವು ಹಿನ್ನೆಲೆಯಲ್ಲಿ ಉಂಟಾದ ಘರ್ಷಣೆಗೆ ಸಂಬಂಧಿಸಿ ಕೆರಗೋಡು ಹಾಗೂ ಮಂಡ್ಯ ಪೊಲೀಸ್‌ ಠಾಣೆಯಲ್ಲಿ 60ಕ್ಕೂ ಹೆಚ್ಚು ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬುಧವಾರ ಬೆಳಗ್ಗೆ ಕೆರಗೋಡು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಮುಂಜಾನೆ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿ ವಾಪಸ್‌ ಕಳುಹಿಸಿದ್ದಾರೆ. ಈತನ ಮನೆಗೆ ಭೇಟಿ ನೀಡಲು ಬಂದ ಬಿಜೆಪಿ ನಿಯೋಗಕ್ಕೆ ಮನೆಯವರು ಅವಕಾಶ ನೀಡಲಿಲ್ಲ. ನಮಗೆ ಯಾವುದೇ ಧ್ವಜ, ರಾಜಕೀಯ ಬೇಡ ಎಂದು ಹೇಳಿ ವಾಪಸ್‌ ಕಳುಹಿಸಿದ್ದಾರೆ.

ಗಾಯಾಳುಗಳಿಗೆೆ ಬಿಜೆಪಿ ಸಾಂತ್ವನ
ಕೆರಗೋಡು ಹನುಮ ಧ್ವಜ ತೆರವು ವಿವಾದ ಹಿನ್ನೆಲೆಯಲ್ಲಿ ಉಂಟಾದ ಪ್ರತಿಭಟನೆ ಹಾಗೂ ಪಾದಯಾತ್ರೆಯಲ್ಲಿ ಪೊಲೀಸರ ಲಾಠಿಚಾರ್ಜ್‌ನಿಂದ ಗಾಯಗೊಂಡವರ ಮನೆಗೆ ಬಿಜೆಪಿ ನಿಯೋಗ ಭೇಟಿ ನೀಡಿ ಸಾಂತ್ವನ ಹೇಳಿತು.

ಮೈಸೂರಿನ ಅಂಬೇಡ್ಕರ್‌ ಪಾರ್ಕ್‌ನಲ್ಲಿದ್ದ ಟಿಪ್ಪು ಧ್ವಜ ತೆರವು
ಮೈಸೂರು: ಮಂಡ್ಯದ ಕೆರಗೋಡು ಹನುಮ ಧ್ವಜ ಗಲಾಟೆ ಕಾವು ಆರುವ ಮುನ್ನವೇ ಮೈಸೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಸುರು ಬಾವುಟ ಮತ್ತು ಟಿಪ್ಪು ಬಾವುಟ ಹಾರಿಸುತ್ತಿರುವ ಬಗ್ಗೆ ಸಂಸದ ಪ್ರತಾಪಸಿಂಹ ತಮ್ಮ ಎಕ್ಸ್‌ ಖಾತೆಯಲ್ಲಿ ಜಿಲ್ಲಾಡಳಿತ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಮಂಗಳವಾರ ರಾತೋರಾತ್ರಿ ಮೈಸೂರಿನ ಕೈಲಾಸಪುರಂನ ಮೊಟ್ಟೆಕೇರಿಯ ಅಂಬೇಡ್ಕರ್‌ ಪಾರ್ಕ್‌ನಲ್ಲಿ ಟಿಪ್ಪು ಧ್ವಜವನ್ನು ತೆರವು ಮಾಡಿದ್ದಾರೆ. ಇದಾದ ಬಳಿಕ ಮೈಸೂರು ಜಿಲ್ಲಾಡಳಿತಕ್ಕೆ ತಮ್ಮ ಎಕ್ಸ್‌ ಖಾತೆಯಲ್ಲಿ ಧನ್ಯವಾದ ತಿಳಿಸಿರುವ ಸಂಸದರು, ಒಂದು ಬಾವುಟ ತೆಗೆದು, ಪಕ್ಕದಲ್ಲೇ ಇನ್ನೊಂದನ್ನು ಯಾಕೆ ಬಿಟ್ಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ನಾನೇ ಸ್ಥಳಕ್ಕೆ ಬಂದು ತೋರಿಸಬೇಕಾ? ಕೈಲಾಸಪುರಂನ ನಾಲ್ಕನೇ ಮುಖ್ಯರಸ್ತೆ ಅಂಬೇಡ್ಕರ್‌ ಪಾರ್ಕ್‌, ಶ್ರೀನಿವಾಸ ದೇವಸ್ಥಾನ ರಸ್ತೆಯಲ್ಲಿ ಮತ್ತೂಂದು ಧ್ವಜ ಕಾಣುತ್ತಿಲ್ಲವೇ ಎಂದು ಫೋಟೊ ಸಮೇತ ಜಿಲ್ಲಾಡಳಿತವನ್ನು ಪ್ರಶ್ನಿಸಿದ್ದಾರೆ.

ಸಿರಿವಾರದಲ್ಲಿ ಟಿಪ್ಪು ನಾಮಫ‌ಲಕಕ್ಕೆ ಅವಮಾನ
ಸಿರವಾರ: ರಾಯಚೂರು ನಗರದ ಮುಖ್ಯ ರಸ್ತೆಯಲ್ಲಿರುವ ಟಿಪ್ಪು ಸುಲ್ತಾನ್‌ ನಾಮಫಲಕಕ್ಕೆ ಮಂಗಳವಾರ ರಾತ್ರಿ ಕಿಡಿಗೇಡಿಗಳು ಅವಮಾನ ಮಾಡಿದ್ದು, ಘಟನೆಯನ್ನು ಖಂಡಿಸಿ ಬುಧವಾರ ಪಟ್ಟಣದ ಮುಖ್ಯರಸ್ತೆ ತಡೆದು ಪ್ರತಿ ಭಟನೆ ಮಾಡ ಲಾಯಿ ತು. ಕಿಡಿಗೇಡಿ ಗಳು ಮಂಗಳವಾರ ತಡರಾತ್ರಿ ನಾಮಫಲಕಕ್ಕೆ ಅಪಚಾರ ಎಸಗಿದ್ದರು. ಬೆಳ್ಳಂಬೆಳಗ್ಗೆ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾ ಣವಾಗಿತ್ತು. ಮುಸ್ಲಿಂ ಯುವಕರು ಮುಖ್ಯರಸ್ತೆ ತಡೆದು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ತಹಶೀಲ್ದಾರ್‌ ರವಿ ಎಸ್‌. ಅಂಗಡಿ ಭೇಟಿ ಪಟ್ಟಣದ ಎಲ್ಲ ವೃತ್ತಗಳಲ್ಲಿ ಸಿಸಿ ಕೆಮರಾ ಅಳವಡಿಸಲಾಗುವುದು. 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿ ಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ಫೆ.7ರಂದು ಮಂಡ್ಯ ನಗರ ಬಂದ್‌
ಮಂಡ್ಯ ಜಿಲ್ಲೆಯ ಸೌಹಾರ್ದ ಮತ್ತು ಶಾಂತಿಯನ್ನು ಕದಡುತ್ತಿರುವ ಶಕ್ತಿಗಳ ವಿರುದ್ಧ ಹೋರಾಟ ನಡೆಸಲು ಫೆ.7ರಂದು ಮಂಡ್ಯ ನಗರ ಬಂದ್‌ ಕರೆ ನೀಡಲಾಗಿದೆ ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ತಿಳಿಸಿದರು. ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಜಿಲ್ಲೆಯ ಸೌಹಾರ್ದ ಪರಂಪರೆಗೆ ಮಸಿ ಬಳಿದು, ಶಾಂತಿ, ನೆಮ್ಮದಿಯನ್ನು ಕೆಡಿಸುತ್ತಿರುವ ಶಕ್ತಿಗಳ ವಿರುದ್ಧ ಬಂದ್‌ ಮೂಲಕ ಜಿಲ್ಲೆಯನ್ನು ಸೌಹಾರ್ದದ ನೆಲೆಯಾಗಿ ಉಳಿಸಿಕೊಳ್ಳುತ್ತೇವೆ ಎಂಬ ಸಂದೇಶ ಕೊಡಲು ಬಂದ್‌ ನಡೆಸಲಾಗುತ್ತಿದೆ ಎಂದು ಬುಧವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಸಂಘಟನೆಗಳ ಮುಖಂಡರು ಹೇಳಿದರು.

ಟಾಪ್ ನ್ಯೂಸ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.