Kerala: ಎಂಟು ವಿಧೇಯಕಗಳಿಗೆ ಸಹಿ ಹಾಕಿ ರಾಷ್ಟ್ರಪತಿಗಳಿಗೆ ಕಳಿಸಿದ ಕೇರಳ ಗವರ್ನರ್
Team Udayavani, Nov 28, 2023, 10:07 PM IST
ತಿರುವನಂತಪುರ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ತಮ್ಮ ಬಳಿ ಇದ್ದ ಎಂಟು ಕಡತಗಳಿಗೆ ಸಹಿ ಹಾಕಿದ್ದಾರೆ. ಈ ಪೈಕಿ ಏಳನ್ನು ರಾಷ್ಟ್ರಪತಿಗಳ ಅವಗಾಹನೆಗಾಗಿ ಕಳುಹಿಸಿಕೊಟ್ಟಿದ್ದಾರೆ. ಸಹಿಗಾಗಿ ಕಳುಹಿಸಿಕೊಟ್ಟಿರುವ ಕಡತಗಳನ್ನು ತಮ್ಮಲ್ಲಿಯೇ ಇರಿಸಿಕೊಂಡಿರುವುದರ ವಿರುದ್ಧ ಎಲ್‌ಡಿಎಫ್ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿರುವಂತೆಯೇ ಈ ಬೆಳವಣಿಗೆ ನಡೆದಿದೆ.
ಸಾರ್ವಜನಿಕ ಆರೋಗ್ಯ ವಿಧೇಯಕ, ಎರಡು ವಿವಿಗಳಿಗೆ ಸಂಬಂಧಿಸಿದ ವಿಧೇಯಕಗಳು ಸೇರಿದಂತೆ ಏಳು ವಿಧೇಯಕಗಳನ್ನು ರಾಷ್ಟ್ರಪತಿಗಳ ಅವಗಾಹನೆಗಾಗಿ ರಾಜಭನದಿಂದ ಕಳುಹಿಸಿ ಕೊಡಲಾಗಿದೆ.
ನ.24ರಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠದಲ್ಲಿ ಕೇರಳ ರಾಜ್ಯಪಾಲರ ವಿರುದ್ಧದ ಮೊಕದ್ದಮೆಯ ವಿಚಾರಣೆಯೂ ನಡೆದಿತ್ತು. ಜತೆಗೆ ರಾಜ್ಯಪಾಲರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪಂಜಾಬ್ ರಾಜ್ಯಪಾಲರ ವಿಚಾರದಲ್ಲಿ ನೀಡಿದ್ದ ಆದೇಶ ಪರಿಶೀಲಿಸುವಂತೆ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.