ಮನೆಬಾಗಿಲಿಗೆ ಕೆಐಎಡಿಬಿ ಪರಿಹಾರ
ಎಂಆರ್‌ಪಿಎಲ್ ವಿಸ್ತರಣೆಗೆ ಭೂಸ್ವಾಧೀನ
Team Udayavani, May 11, 2020, 5:49 AM IST
ಮಂಗಳೂರು: ಹಲವು ಸಂದರ್ಭಗಳಲ್ಲಿ ಸಂತ್ರಸ್ತರು ಪರಿಹಾರಕ್ಕಾಗಿ ವರ್ಷಗಟ್ಟಲೆ ಕಚೇರಿಗಳಿಗೆ ಸುತ್ತಾಡಿ, ನ್ಯಾಯಾಲಯದ ಮೊರೆ ಹೋಗಿ ಹತ್ತಾರು ವರ್ಷ ಗಳ ವಿಳಂಬವಾಗಿ ಪರಿಹಾರ ದೊರಕುವ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿವೆ. ಆದರೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮಂಗಳೂರು ಕಚೇರಿಯು ಭೂಸ್ವಾಧೀನದಿಂದ ಜಮೀನು ಕಳೆದುಕೊಂಡ ನಿರ್ವಸಿತರಿಗೆ ಎಲ್ಲ ಪ್ರಕ್ರಿಯೆ ಮುಗಿದ ಬಳಿಕ ನೇರವಾಗಿ ಅವರ ಮನೆಬಾಗಿಲಿಗೇ ತೆರಳಿ ಪರಿಹಾರ ಮೊತ್ತವನ್ನು ನೀಡುವ ಮೂಲಕ ಈ ಪ್ರಕ್ರಿಯೆಗಳನ್ನು ತ್ವರಿತಗೊಳಿಸಿದೆ.
ಎಂಆರ್‌ಪಿಎಲ್ 4ನೇ ಹಂತದ ವಿಸ್ತರಣೆ ಯೋಜನೆಗಾಗಿ ಮಂಗಳೂರು ತಾಲೂಕಿನ ಪೆರ್ಮುದೆ, ಕುತ್ತೆತ್ತೂರು, ತೋಕೂರು ಗ್ರಾಮಗಳ 962 ಎಕರೆ ಜಮೀನನ್ನು ಕೆಐಎಡಿಬಿ ಸ್ವಾಧೀನಪಡಿಸಿದೆ. ಈ ಜಮೀನು ಭೂಸ್ವಾಧೀನ ಪ್ರಕ್ರಿಯೆ ಮುಗಿದಿದ್ದರೂ ಜನರು ಪರಿಹಾರ ಪಡೆದುಕೊಳ್ಳುವುದು ಬಾಕಿ ಇತ್ತು. ಇದಕ್ಕಾಗಿ ನಿರ್ವಸಿತರು ಬೈಕಂಪಾಡಿ ಕೆಐಎಡಿಬಿ ಕಚೇರಿಗೆ ಆಗಮಿಸಬೇಕಿತ್ತು.
ಈ ಮಧ್ಯೆ ಲಾಕ್‌ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಜನರು ಕೆಐಎಡಿಬಿ ಕಚೇರಿಗೆ ಆಗಮಿಸುವುದು ದುಸ್ತರವಾಗಿ ಒಂದೂವರೆ ತಿಂಗಳಿನಿಂದ ಈ ಪರಿಹಾರ ವಿತರಣೆ ಪ್ರಕ್ರಿಯೆ ನನೆಗುದಿಗೆ ಬಿತ್ತು. ಬಹುತೇಕ ಜಮೀನುಗಳ ದಾಖಲೆಗಳು ಕುಟುಂಬದ ಹಿರಿಯ ನಾಗರಿಕರ ಹೆಸರಿನಲ್ಲಿರುವುದರಿಂದ ಪರಿಹಾರ ಪಡೆದುಕೊಳ್ಳಲು ಖುದ್ದು ಅವರೇ ಬರಬೇಕಾಗಿತ್ತು. ಇದರಿಂದ ಪರಿಹಾರ ಪಡೆದುಕೊಳ್ಳುವುದು ದುಸ್ತರವಾಗಿತ್ತು.
ಸಂತ್ರಸ್ತರ ಈ ಕಷ್ಟ ಅರ್ಥೈಸಿಕೊಂಡ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ಬಿನೊಯ್ ಪಿ.ಕೆ. ಅವರು ಮನೆಯಿಂದ ಹೊರಗೆ ಬರಲು ಕಷ್ಟವಿರುವ ಹಿರಿಯ ನಾಗರಿಕರು, ಅನಾರೋಗ್ಯಪೀಡಿತ ಅರ್ಹ ಸಂತ್ರಸ್ತರ ಪಟ್ಟಿಯನ್ನು ತಯಾರಿಸಿದರು. ಅನಂತರ ಅ ಧಿಕಾರಿಗಳು ಸಿಬಂದಿ ತಂಡವೇ ಸಂತ್ರಸ್ತರ ಮನೆಗಳಿಗೆ ತೆರಳಿ, ಅಲ್ಲಿಯೇ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ, ನಿಗದಿತ ಪರಿಹಾರದ ಮೊತ್ತವನ್ನೂ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.