ಕೆಎಂಸಿ ಆಸ್ಪತ್ರೆ: ನಾಳೆಯಿಂದ ಎಲ್ಲ ಹೊರರೋಗಿ ವಿಭಾಗಗಳಲ್ಲಿ ಸೇವೆ
Team Udayavani, Jun 14, 2020, 5:45 AM IST
ಉಡುಪಿ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಜೂ.15ರಿಂದ ಆಸ್ಪತ್ರೆಯ ಎಲ್ಲ ಹೊರರೋಗಿ ವಿಭಾಗಗಳು ಬೆಳಗ್ಗೆ 8ರಿಂದ ಸಂಜೆ 4ರ ವರೆಗೆ ಹಿಂದಿನಂತೆ ಸೇವೆಗೆ ಲಭ್ಯವಿರಲಿವೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
ಆಸ್ಪತ್ರೆಗೆ ಬರುವ ಪ್ರತಿಯೊಬ್ಬರು ಆಸ್ಪತ್ರೆಯ ಹೊರಾಂಗಣದಲ್ಲಿ ಹಾಕಿರುವ ತಾತ್ಕಾಲಿಕ ಜ್ವರದ ಚಿಕಿತ್ಸಾಲಯಕ್ಕೆ ಭೇಟಿ ನೀಡಬೇಕು. ಅನಂತರ ಸಂಬಂಧಪಟ್ಟ ವಿಭಾಗಗಳಿಗೆ ಕಳುಹಿಸಿಕೊಡಲಾಗುವುದು. ಎಲ್ಲ ರೋಗಿಗಳು ಮತ್ತು
ಆಸ್ಪತ್ರೆಗೆ ಭೇಟಿ ನೀಡುವ ಪ್ರತಿಯೊಬ್ಬರು ಕಡ್ಡಾಯವಾಗಿ ಮುಖಗವಸು (ಮಾಸ್ಕ್) ಧರಿಸಬೇಕು. ಪ್ರತೀ ರೋಗಿಗಳೊಂದಿಗೆ ಒಬ್ಬ ಸಹಾಯಕ ರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು.
ಆಸ್ಪತ್ರೆಯ ಎಲ್ಲ ಮಾಹಿತಿ ಕೇಂದ್ರಗಳು ಸಹ ಸೋಮವಾರದಿಂದ ಕಾರ್ಯ ನಿರ್ವಹಿಸಲಿವೆ. ಜನರು ತಮ್ಮ ಊರಿ ನಿಂದ ನೋಂದಣಿ ಮಾಡಿ ಬರಬಹುದು. ಇದರಿಂದ ಆಸ್ಪತ್ರೆಯಲ್ಲಿ ನೋಂದಣಿಗಾಗಿ ಸರತಿ ಸಾಲಿನಲ್ಲಿ ನಿಲ್ಲುವುದು ಮತ್ತು ಜನದಟ್ಟಣೆ ಸೇರುವುದನ್ನು ಕಡಿಮೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
MUST WATCH
ಹೊಸ ಸೇರ್ಪಡೆ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.