ಕೆಎಂಎಫ್: 8 ಲಕ್ಷ ಲೀಟರ್‌ಹಾಲು ಮಾರಾಟ ಸ್ಥಗಿತ
Team Udayavani, Mar 30, 2020, 5:15 AM IST
ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್‌ಡೌನ್ ಘೋಷಣೆಯಾಗಿರುವುದರಿಂದ ನಂದಿನಿ ಹಾಲು ಮತ್ತು ಮೊಸರಿಗೆ ಬೇಡಿಕೆ ಕುಸಿದಿದೆ. ನಿತ್ಯ 8 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿ ಯುತ್ತಿದ್ದು ಅದನ್ನು ಪೌಡರ್‌ಗೆ ಪರಿವರ್ತಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ 10 ಲ.ಲೀ. ಮಾರಾಟ ವಾಗದೆ ಉಳಿಯುವ ಸಾಧ್ಯತೆ ಯೂ ಇದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲ ಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಕೋವಿಡ್-19 ಹರಡುವುದನ್ನು ತಡೆಯಲು ಕೆಎಂಎಫ್ ಮುನ್ನಚ್ಚರಿಕೆ ಕ್ರಮ ಕೈಗೊಂಡಿದೆ. ಹಾಲು ಉತ್ಪಾದಕರ ಸಂಘಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. 14 ಜಿಲ್ಲಾ ಹಾಲು ಒಕ್ಕೂಟಗಳ ಮೂಲಕ ನಿತ್ಯ 9 ಲಕ್ಷ ಹೈನುಗಾರರಿಂದ 68 ಲ.ಲೀ. ಹಾಲು ಸಂಗ್ರಹಿಸಲಾಗುತ್ತಿದ್ದು, ಆ ಪೈಕಿ 40 ಲ.ಲೀ. ಹಾಲು, ಮೊಸರು ಮಾರಾಟವಾಗುತ್ತಿದೆ. ಉಳಿದ ಹಾಲನ್ನು ಪೌಡರ್ ಮಾಡಲಾಗುತ್ತಿದೆ ಎಂದವರು ತಿಳಿಸಿದರು.
ಕೋವಿಡ್ 19 ಹಿನ್ನೆಲೆಯಲ್ಲಿ 15 ಸಾವಿರ ಕಾರ್ಮಿಕರ ಪೈಕಿ 5,000 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಕಾರ್ಮಿಕರ ಕೊರತೆ ಎದುರಾಗಿದೆ. ಹಾಲಿನ ಮಾರಾಟಕ್ಕೆ ಕಚ್ಚಾ ಪದಾರ್ಥಗಳು, ಸಾರಿಗೆ ವ್ಯವಸ್ಥೆಗೆ ಚಾಲಕರ ಕೊರತೆ ಎದುರಾಗಿದೆ. ರೈತರು ಮತ್ತು ಗ್ರಾಹಕರು ಕೆಎಂಎಫ್ಗೆ ಸಹಕಾರ ನೀಡಬೇಕು ಎಂದು ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
MUST WATCH
ಹೊಸ ಸೇರ್ಪಡೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.