PTI ಅಧ್ಯಕ್ಷರಾಗಿ ಕೆ.ಎನ್.ಶಾಂತಕುಮಾರ್ ನೇಮಕ
Team Udayavani, Sep 29, 2023, 10:03 PM IST
ನವದೆಹಲಿ: ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಪ್ರತಿಕೆಗಳ ಮಾತೃ ಸಂಸ್ಥೆಯಾದ ದಿ ಪ್ರಿಂಟರ್ಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಕೆ.ಎನ್. ಶಾಂತಕುಮಾರ್ ಅವರು ಸುದ್ದಿಸಂಸ್ಥೆ ಪ್ರಸ್ ಟ್ರಸ್ಟ್ ಆಫ್ ಇಂಡಿಯಾದ(ಪಿಟಿಐ) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಶುಕ್ರವಾರ ನಡೆದ ಪಿಟಿಐನ ಆಡಳಿತ ಮಂಡಳಿ ನಿರ್ದೇಶಕರ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದೂಸ್ಥಾನ್ ಟೈಮ್ಸ್ ಸಿಇಒ ಪ್ರವೀಣ್ ಸೋಮೇಶ್ವರ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಅಧಿಕಾರಾವಧಿ 1 ವರ್ಷದ್ದಾಗಿದ್ದು, ಈ ಹಿಂದೆ ಅವೀಕ್ ಸರ್ಕಾರ್ 2 ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ಬಾರಿ ಅಧ್ಯಕ್ಷರಾಗಿರುವ ಶಾಂತಕುಮಾರ್ ಅವರು ಈ ಹಿಂದೆ ಪಿಟಿಐನ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಇತ್ತೀಚಿನ ದಿನಗಳಲ್ಲಿ ಸುದ್ದಿಗಳ ಜತೆಗೆ ವಿಡಿಯೋ ಸುದ್ದಿಗಳನ್ನೂ ನೀಡುವ ಮೂಲಕ ಪಿಟಿಐ ಸಂಕ್ರಮಣ ಕಾಲದಲ್ಲಿದ್ದು, ಈ ಸಮಯದಲ್ಲಿ ತಾವು ಅಧ್ಯಕ್ಷನಾಗಿರುವುದು ಸಂತಸ ತಂದಿದೆ ಎಂದೂ ಶಾಂತಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.