ಕೊಡಗು: ವಾರದದಲ್ಲಿ 4 ದಿನ ಅಂಗಡಿ ತೆರೆಯಲು ಅವಕಾಶ
Team Udayavani, Apr 29, 2020, 6:28 AM IST
ಮಡಿಕೇರಿ: ಕೊಡಗು ಜಿಲ್ಲೆ ಕೋವಿಡ್-19 ಮುಕ್ತವಾಗಿ ಹಸಿರು ವಲಯಕ್ಕೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ವಾರದಲ್ಲಿ ನಾಲ್ಕು ದಿನ ಬೆಳಗ್ಗೆ 6ರಿಂದ ಸಂಜೆ 4 ಗಂಟೆಯವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸಮ್ಮತಿ ಸೂಚಿಸಿದ್ದಾರೆ.
ಮಂಗಳವಾರ ನಗರದ ಜಿ.ಪಂ. ಸಭಾಂಗಣದಲ್ಲಿ ಸಚಿವ ವಿ. ಸೋಮಣ್ಣ ಅಧ್ಯಕ್ಷತೆಯಲ್ಲಿ ಕೋವಿಡ್-19 ಬಗ್ಗೆ ಜಿಲ್ಲೆಯಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳು ಸೇರಿದಂತೆ ಸ್ವತ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ನಿಯಂತ್ರಿಸುವಲ್ಲಿ ಸಾರ್ವಜನಿಕ ಸಹಕಾರ ಹೆಚ್ಚಿನದ್ದಾಗಿದೆ. ಆ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳು ಮತ್ತು ಮುಖ್ಯಮಂತ್ರಿ ಅವರಿಗೆ ಅಭಿನಂದನೆ ಸಲ್ಲಿಸಬೇಕಾಗಿದೆ ಎಂದು ಎದ್ದು ನಿಂತ ಸಚಿವರು ತಾವು ಚಪ್ಪಾಳೆ ತಟ್ಟುವುದರೊಂದಿಗೆ ಸಭೆಯಲ್ಲಿದ್ದ ವರೂ ಚಪ್ಪಾಳೆ ತಟ್ಟುವ ಮೂಲಕ ಅಭಿನಂದನೆ ಸಲ್ಲಿಸಿದರು.
ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಜೂನ್ ತಿಂಗಳಿನಿಂದ ಮುಂಗಾರು ಮಳೆ ಆರಂಭವಾ ಗುವುದರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಅವಕಾಶ ಮಾಡಬೇಕು. ಮರಳು ತೆಗೆ ಯಲು ಅವಕಾಶ ಮಾಡಬೇಕು ಎಂದು ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.