Madikeri ಮೌಂಟ್ ಎಲ್ಬ್ರಸ್ನಲ್ಲಿ ಭಾರತದ ಪತಾಕೆ ಹಾರಿಸಿದ ಕೊಡಗಿನ ಪ್ರೀತ್ ಅಪ್ಪಯ್ಯ
Team Udayavani, Aug 19, 2024, 12:56 AM IST
ಮಡಿಕೇರಿ: ದಕ್ಷಿಣ ಕೊಡಗಿನ ಗೋಣಿಕೊಪ್ಪಲಿನ ಅತ್ತೂರು ಜಮ್ಮಡ ಅಯ್ಯಣ್ಣ ಅವರ ಪತ್ನಿ ಜಮ್ಮಡ ಪ್ರೀತ್ ಅಪ್ಪಯ್ಯ ಅವರು ಯೂರೋಪ್ ಮತ್ತು ರಷ್ಯಾ ಖಂಡದ ಅತಿ ಎತ್ತರದ ಶಿಖರ ಮೌಂಟ್ ಎಲ್ಬ್ರಸ್ (Mount Elbrus)ನಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವದಂದು ಭಾರತದ ಬಾವುಟವನ್ನು ಎತ್ತಿ ಹಿಡಿಯುವ ಮೂಲಕ ದೇಶಾಭಿಮಾನ ಮೆರೆದಿದ್ದಾರೆ.
ಪ್ರೀತ್ ಅಪ್ಪಯ್ಯ ಈವರೆಗೆ ಹಲವು ಪರ್ವತಾರೋಹಣ ಮಾಡಿದ್ದಾರೆ. ಈ ಬಾರಿ ಯೂರೋಪ್ನ ಅತೀ ದೊಡ್ಡ ಶಿಖರ (5,642 ಮೀಟರ್)ವನ್ನು ಏರುವ ಸಾಧನೆ ಮಾಡಿದ್ದಾರೆ.
2012ರಲ್ಲಿ ನಾಪೋಕ್ಲು ಸಮೀಪದ ಪೇರೂರು ಗ್ರಾಮದ ಪರ್ವತರೋಹಿ ತೆಕ್ಕಡ ಭವಾನಿಮೌಂಟ್ ಎಲ್ಬ್ರಸ್ ಏರಿ ಭಾರತದ ಪತಾಕೆಯನ್ನು ಹಾರಿಸಿದ ಕರ್ನಾಟಕದ ಹಾಗೂ ಕೊಡಗಿನ ಮೊದಲ ಮಹಿಳೆಯಾದರೆ ಜಮ್ಮಡ ಪ್ರೀತ್ ಅಪ್ಪಯ್ಯ ದ್ವಿತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.