Kokkada: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಪಶು ವೈದ್ಯಾಧಿಕಾರಿಯಿಂದ ಹಲ್ಲೆ, ಸಾವು?
Team Udayavani, May 14, 2024, 12:32 AM IST
ಬೆಳ್ತಂಗಡಿ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯಿಂದ ಮರಳುತ್ತಿದ್ದಂತೆ ಆತನನ್ನು ಕಂಡು ಪರಿಚಿತ ಪಶು ವೈದ್ಯಾಧಿಕಾರಿಯೊಬ್ಬರು ಹಲ್ಲೆ ನಡೆಸಿದ್ದು, ಇದೇ ವೇಳೆ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್ನಲ್ಲಿ ಸೋಮವಾರ ಸಂಜೆ ನಡೆದಿದೆ.
ಪಟ್ರಮೆ ಗ್ರಾಮದ ಕೃಷ್ಣ ಯಾನೆ ಕಿಟ್ಟ (58) ಮೃತರು.ಕೃಷ್ಣ ಅವರು ವಿಪರೀತ ಜ್ವರ ಇದ್ದ ಕಾರಣ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡ ಕಾರಣ ಸೋಮವಾರ ಕೊಕ್ಕಡಕ್ಕೆ ಬಂದಿಳಿದಿದ್ದಾರೆ. ಇದೇ ವೇಳೆ ತನ್ನ ಪರಿಚಿತರೇ ಆದ ಕೊಕ್ಕಡದ ಪಶು ವೈದ್ಯ ಡಾ| ಕುಮಾರ್ಅವರು ಕೃಷ್ಣ ಅವರಲ್ಲಿ ಮಾತನಾಡುತ್ತ ಜ್ವರ ಇದ್ದು ಇಷ್ಟು ಬೇಗ ಡಿಸಾcರ್ಜ್ ಆಗಿ ಯಾಕೆ ಬಂದೆ, ಆರೋಗ್ಯ ಸುಧಾರಿಸಿ ಬರಬೇಕಿತ್ತು ಎಂದು ಬುದ್ದಿ ಮಾತು ಹೇಳಿ ಒಂದು ಏಟು ಹೊಡೆದಿದ್ದಾರೆ ಎನ್ನಲಾಗಿದೆ.
ಪಶು ವೈದ್ಯರು ಹೊಡೆದ ರಭಸಕ್ಕೆ ಕೃಷ್ಣ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಸ್ವಲ್ಪ ಹೊತ್ತಿನಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.
ವೈದ್ಯರು ಹೊಡೆದ ಕಾರಣಕ್ಕೋ ಅಥವಾ ಜ್ವರದಿಂದ ಬಳಲಿ ಕೃಷ್ಣ ಅವರು ಸಾವನ್ನಪ್ಪಿದ್ದಾರೆಯೇ ಅಥವಾ ಇನ್ನಾವುದೋ ಆರೋಗ್ಯ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆಯೇ ಎಂಬುದು ತಿಳಿದುಬಂದಿಲ್ಲ.
ಸ್ಥಳಕ್ಕೆ ಧರ್ಮಸ್ಥಳ ಠಾಣಾಧಿಕಾರಿ ಸಮರ್ಥ್ ಮತ್ತು ಅವರ ತಂಡ ಆಗಮಿಸಿ ತನಿಖೆ ನಡೆಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆ ಆಸ್ಪತ್ರೆಗೆ ರವಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.