Kollur: ಶ್ರೀ ಮೂಕಾಂಬಿಕಾ ದೇವಸ್ಥಾನದ ತಂತ್ರಿ, ಅರ್ಚಕ ಮಂಜುನಾಥ ಅಡಿಗ ನಿಧನ
Team Udayavani, Jan 1, 2025, 7:30 PM IST
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ತಂತ್ರಿ, ಅರ್ಚಕ ಮಂಜುನಾಥ ಅಡಿಗ (66) ಅವರು ಜ. 1ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ದೇಗುಲದ ಅರ್ಚಕ ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯ ನಿತ್ಯಾನಂದ ಅಡಿಗ ಸಹಿತ ಪುತ್ರಿಯನ್ನು ಅಗಲಿದ್ದಾರೆ. ಕೊಲ್ಲೂರಿನ ತಾಂತ್ರಿಕ ಗೆಸ್ಟ್ ಹೌಸ್ ಮಾಲಕರಾಗಿರುವ ಮಂಜುನಾಥ ಅಡಿಗ ಅವರು ಎಲ್ಲಾ ವರ್ಗದ ಭಕ್ತರೊಡನೆ ಅನ್ಯೋನ್ಯವಾಗಿದ್ದು, ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಧಾರ್ಮಿಕ ಕಾರ್ಯ ನಡೆಸುವಲ್ಲಿ ಪೂಜಾ ವಿಧಾನದ ಕ್ರಮವನ್ನು ತಿಳಿಹೇಳುತ್ತಿದ್ದರು. ಬಹಳಷ್ಟು ವರುಷಗಳಿಂದ ದೇಗುಲದ ಪ್ರಧಾನ ತಂತ್ರಿಯಾಗಿ ಸೇವೆ ಸಲ್ಲಿಸಿದ ಮೃತರು ಅನಾರೋಗ್ಯದ ನಿಮಿತ್ತ ದೇಗುಲದ ಪೂಜಾ ಕೈಂಕರ್ಯ ನೆರವೇರಿಸಲು ತನ್ನ ಸ್ಥಾನವನ್ನು ಪುತ್ರ ನಿತ್ಯಾನಂದ ಅಡಿಗ ಅವರಿಗೆ ನೀಡಿದ್ದರು. ಕೊಲ್ಲೂರು ಪರಿಸರದಲ್ಲಿ ಅಡಿಗರೆಂದೇ ಪರಿಚಿತರಾಗಿರುವ ಅವರ ಸರಳ ಸಜ್ಜನಿಕೆ ಸ್ವಭಾವವೂ ಭಕ್ತ ವೃಂದದೊಡನೆ ಒಡನಾಟ ಹೆಚ್ಚಿಸಿತ್ತು.
ಗಣ್ಯರ ಸಂತಾಪ: ಸಂಸದ ಬಿ.ವೈ.ರಾಘವೇಂದ್ರ, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಮಾಜಿ ಶಾಸಕರಾದ ಕೆ.ಗೋಪಾಲಪೂಜಾರಿ, ಬಿ.ಎಂ.ಸುಕುಮಾರ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉದ್ಯಮಿ ವಾಸುದೇವ ಶೆಟ್ಟಿ ಕಾಪು, ತಾ.ಪಂ. ಮಾಜಿ ಸದಸ್ಯ ರಮೇಶ ಗಾಣಿಗ ಕೊಲ್ಲೂರು, ಕೊಲ್ಲೂರು ದೇಗುಲದ ಕಾರ್ಯನಿರ್ವಹಣಾ ಕಾರಿ ಪ್ರಶಾಂತ ಕುಮಾರ್ ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬುಶೆಟ್ಟಿ, ಸದಸ್ಯರು, ಸಿಬಂದಿಗಳು,ಅರ್ಚಕವೃಂದ ಕಂಬನಿ ಮಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tamilnadu: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್
Social Media A/c: ಮಕ್ಕಳ ಸೋಷಿಯಲ್ ಮೀಡಿಯಾ ಖಾತೆಗೆ ಹೆತ್ತವರ ಒಪ್ಪಿಗೆ ಕಡ್ಡಾಯ?
Jagdeep Singh: ಈ ಸಿಇಒ ಪ್ರತಿದಿನ ಪಡೆಯುವ ಸಂಬಳ 48 ಕೋಟಿ ರೂ!…ಯಾರೀತ ಜಗದೀಪ್ ಸಿಂಗ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.