ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿ
Team Udayavani, Dec 10, 2020, 7:23 PM IST
ಬೆಂಗಳೂರು: ಹೊಸ ಶಿಕ್ಷಣ ನೀತಿಯಲ್ಲಿ ಒಂದನೆಯ ತರಗತಿಯಿಂದ ಐದನೆಯ ತರಗತಿಯವರೆಗೆ ಕೊಂಕಣಿ ಮಾತೃಭಾಷಾ ಮಾಧ್ಯಮದಲ್ಲಿ ಶಿಕ್ಷಣದ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿಸೆಂಬರ್ 10, ಗುರುವಾರದಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ನಿಯೋಗವು ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪನವರನ್ನು ಬೇಟಿ ಮಾಡಿತು.
ಆರನೆಯ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ಕೊಂಕಣಿ ಭಾಷೆಯಲ್ಲಿ ಕಲಿಕೆ, ಡಿ.ಎಡ್, ಬಿ.ಎಡ್, ಎಂ.ಎಡ್. ತರಗತಿಗಳಲ್ಲಿ ಕೊಂಕಣಿ ಭಾಷೆ ಅಳವಡಿಕೆ, ವಿವಿಧ ಹಂತಗಳಲ್ಲಿ ಕೊಂಕಣಿ ಭಾಷಾ ಶಿಕ್ಷಕರ ನೇಮಕಾತಿಯೇ ಮೊದಲಾದ ಬೇಡಿಕೆಗಳನ್ನು ಮುಖ್ಯ ಮಂತ್ರಿ ಯಡಿಯೂರಪ್ಪ ನವರು ಸಹಾನುಭೂತಿಯಿಂದ ಆಲಿಸಿದರು. ಹೊಸ ಶಿಕ್ಷಣ ನೀತಿಯನ್ವಯ ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣದ ಬೇಡಿಕೆ ಸಮಂಜಸವಾದುದು ಎಂದು ತಿಳಿಸಿದರು.
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾಕ್ಟರ್ ಕೆ. ಜಗದೀಶ್ ಪೈಯವರ ನೇತೃತ್ವದ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗದಲ್ಲಿ, ಅಕಾಡೆಮಿಯ ಸದಸ್ಯರಾದ ಸಾಣೂರು ನರಸಿಂಹ ಕಾಮತ್, ಅರುಣ್ ಶೇಟ್, ನವೀನ್ ನಾಯಕ್ ಮತ್ತು ಗುರುಮೂರ್ತಿ ಶೇಟ್ ರವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.