Kota ಮಗು ಸಾವು ಪ್ರಕರಣ: ರೆಸಾರ್ಟ್ ಮಾಲಕನ ವಿರುದ್ಧ ದೂರು
Team Udayavani, Nov 22, 2023, 11:58 PM IST
ಕೋಟ: ಆಟವಾಡುತ್ತಿದ್ದ ವೇಳೆ ರೆಸಾರ್ಟ್‌ನ ಗೇಟ್ ಮೈ ಮೇಲೆ ಬಿದ್ದು ಸ್ಥಳೀಯ ನಿವಾಸಿ ಸುಧಿಧೀರ್ ಕೋಟ್ಯಾನ್ ಅವರ ಪುತ್ರ ಸುಶಾಂತ್ (3) ಮೃತಪಟ್ಟ ಘಟನೆ ಕೋಟತಟ್ಟು-ಪಡುಕರೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿತ್ತು. ಇದೀಗ ದುರ್ಘಟನೆಗೆ ರೆಸಾರ್ಟ್ ಮಾಲಕನ ನಿರ್ಲಕ್ಷತನ ಹಾಗೂ ಬೇಜವಾಬ್ದಾರಿತನ ಕಾರಣವಾಗಿದ್ದು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಗುವಿನ ಹೆತ್ತವರು ಕೋಟ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಘಟನೆಗೆ ರೆಸಾರ್ಟ್‌ನ ಗೇಟ್ ಸರಿಯಾಗಿ ಜೋಡಣೆ ಮಾಡದಿರುವುದು ಹಾಗೂ ಸುಸ್ಥಿತಿಯಲ್ಲಿಡದೇ ನಿರ್ಲಕ್ಷ್ಯ ತೋರಿದ್ದು ಕಾರಣವಾಗಿದ್ದು, ಮಾಲಕ ಪೃಥ್ವಿರಾಜ್ ಮತ್ತು ಪಾಲುದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೆತ್ತವರು ದೂರಿನಲ್ಲಿ ಮನವಿ ಮಾಡಿದ್ದಾರೆ.
ಶಾಸಕರ ಭೇಟಿ; ಅಕ್ರಮ ವಿರುದ್ಧ ಆಕ್ರೋಶ
ಮೃತ ಮಗುವಿನ ಮನೆಗೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಬುಧವಾರ ಭೇಟಿ ನೀಡಿ ಸಾಂತ್ವನ ತಿಳಿಸಿದರು. ಈ ಸಂದರ್ಭ ನಿಯಮಗಳನ್ನು ಉಲ್ಲಂಘಿಸಿ ಕಾರ್ಯಚರಿಸುತ್ತಿರುವ ಅಕ್ರಮ ರೆಸಾರ್ಟ್‌ಗಳಿಂದ ಸ್ಥಳೀಯರಿಗೆ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ದೂರು ನೀಡಿದರು ಕ್ರಮಕೈಗೊಳ್ಳುವವರಿಲ್ಲ ಎಂದು ಸ್ಥಳೀಯರು ದೂರಿದರು ಹಾಗೂ ಇಂತಹ ಅನಧಿಕೃತ ರೆಸಾರ್ಟ್‌ಗಳ ವಿರುದ್ಧ ಕ್ರಮಕೈಗೊಳ್ಳ ಬೇಕು, ಸಂತ್ರಸ್ತ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದರು.
ಘಟನೆ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಚರ್ಚಿಸಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದು ಶಾಸಕರು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಗ್ರಾಹಕನ ಸೋಗಿನಲ್ಲಿ ಜ್ಯುವೆಲರಿ ಶಾಪ್‌ಗೆ ಬಂದು ಒಡವೆ ಕದ್ದು ಪರಾರಿಯಾದ ಕಳ್ಳ
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫಲಪ್ರದ?
Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Karkala: ಗ್ರಾಹಕನ ಸೋಗಿನಲ್ಲಿ ಜ್ಯುವೆಲರಿ ಶಾಪ್‌ಗೆ ಬಂದು ಒಡವೆ ಕದ್ದು ಪರಾರಿಯಾದ ಕಳ್ಳ
Subramanya: ನಾಪತ್ತೆಯಾದ ವ್ಯಕ್ತಿ ಹರಿಹರ ಪಳ್ಳತ್ತಡ್ಕದಲ್ಲಿ ಪತ್ತೆ
Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.