ಡಿಕೆಶಿ ಬಂಧನ ಖಂಡಿಸಿ ನಾಳೆ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ
Team Udayavani, Sep 3, 2019, 10:18 PM IST
ಬೆಂಗಳೂರು: ಮಾಜೀ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರನ್ನು ನವದೆಹಲಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಬುಧವಾರದಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೂಚನೆ ನೀಡಿದೆ.
ರಾಜಕೀಯ ಜಿದ್ದಿಗಾಗಿ ಕೇಂದ್ರದಲ್ಲಿರುವ ಬಿಜೆಪಿ ಸರಕಾರ ಶಿವಕುಮಾರ್ ಅವರನ್ನು ಬಂಧಿಸಿದೆ. ಅವರ ಮೇಲೆ ಇಲ್ಲದ ಆರೋಪಗಳನ್ನು ಹೊರಿಸಿ ತನಿಖೆಯ ನೆಪದಲ್ಲಿ ಅವರಿಗೆ ಮಾನಸಿಕ ಹಿಂಸೆ ನೀಡಲಾಗಿದೆ. ಕೇಂದ್ರದ ಈ ಸೇಡಿನ ರಾಜಕಾರಣವನ್ನು ಖಂಡಿಸಿ ನಾಳೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಕೇಂದ್ರ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಬೇಕು ಎಂದು ಕೆಪಿಸಿಸಿ ತನ್ನ ಸೂಚನೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.