KPME : ನಕಲಿ ವೈದ್ಯರ ಕ್ಲಿನಿಕ್ ತಡೆಗೆ ಕೆಪಿಎಂಇ ಕಡ್ಡಾಯ
Team Udayavani, Dec 3, 2023, 11:10 PM IST
ಬೆಂಗಳೂರು: ರಾಜ್ಯದಲ್ಲಿ ನಕಲಿ ವೈದ್ಯರು ಅನಧಿಕೃತವಾಗಿ ಕ್ಲಿನಿಕ್ ಮತ್ತು ಪ್ರಯೋಗಾಲಯ ನಡೆಸುತ್ತಿರುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲ ಖಾಸಗಿ ವೈದ್ಯಕೀಯ ಸಂಸ್ಥೆಗಳು ಕಡ್ಡಾಯವಾಗಿ ಕೆಪಿಎಂಇ ಅಡಿಯಲ್ಲಿ ನೋಂದಾಯಿಸುವಂತೆ ಆರೋಗ್ಯ ಇಲಾಖೆ ಆಯುಕ್ತ ಡಾ| ರಂದೀಪ ತಿಳಿಸಿದ್ದಾರೆ.
ಕೆಪಿಎಂಇಯ ನೋಂದಣಿ ಮಾಡಿಕೊಳ್ಳದೆ ಖಾಸಗಿಯಾಗಿ ವೈದ್ಯಕೀಯ ಸಂಸ್ಥೆ ಸ್ಥಾಪಿಸಿ ಚಿಕಿತ್ಸೆ ನೀಡುವುದು ಅಪರಾಧ. ಇಂತಹ ಪ್ರಕರಣಗಳು ಇಲಾಖೆ ಗಮನಕ್ಕೆ ಬಂದರೆ, ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ 1ಲಕ್ಷ ರೂ.ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅನಧಿಕೃತ ವೈದ್ಯಕೀಯ ಸಂಸ್ಥೆ, ಕ್ಲಿನಿಕ್, ಪ್ರಯೋಗಾಲಯಗಳು ಕಂಡು ಬಂದರೆ ತತ್ಕ್ಷಣವೇ ಬಂದ್ ಮಾಡಿಸಬೇಕು. ಜತೆಗೆ ಕೆಪಿಎಂಇಗೆ ನಕಲಿ ವೈದ್ಯರ ಬಗ್ಗೆ ಮಾಹಿತಿ ನೀಡಬೇಕು. ಅಲ್ಲಿನ ಕುಂದುಕೊರತೆ ಸಭೆಯಲ್ಲಿ ವೈಯಕ್ತಿಕ ದೂರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಇದರ ಸಂಪೂರ್ಣ ವಿವರವನ್ನು ಪ್ರತಿ ತಿಂಗಳು 5ನೇ ತಾರೀಕಿನ ಒಳಗೆ ಆರೋಗ್ಯ ಇಲಾಖೆ ಡಿಎಚ್ಒಗಳು ಸಲ್ಲಿಕೆ ಮಾಡುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.