ಪರಿಸ್ಥಿತಿ ನಿಭಾಯಿಸಲು ಕೆಪಿಟಿಸಿಎಲ್, ಕೆಪಿಸಿಎಲ್ ಸಜ್ಜು
Team Udayavani, Apr 5, 2020, 10:01 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಕರೆ ಹಿನ್ನೆಲೆಯಲ್ಲಿ ಎ. 5ರಂದು ರಾತ್ರಿ 9ರಿಂದ 9 ನಿಮಿಷಗಳ ಕಾಲ ರಾಜ್ಯದ ಜನ ವಿದ್ಯುತ್ ದೀಪಗಳನ್ನು ಆರಿಸಿದರೆ ಆ ಹೊತ್ತಿನಲ್ಲಿ ದಿಢೀರ್ 700 ಮೆಗಾವ್ಯಾಟ್ ವಿದ್ಯುತ್ ಬಳಕೆ ಕಡಿಮೆಯಾಗಲಿದ್ದು, ಆ ಸಂದರ್ಭದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಲು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ಮತ್ತು ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ಸಜ್ಜಾಗಿವೆ.
ದಿಲ್ಲಿಯಲ್ಲಿನ ನ್ಯಾಶನಲ್ ಲೋಡ್ ಡಿಸ್‌ಪ್ಯಾಚ್ ಸೆಂಟರ್ (ಎನ್‌ಎಲ್‌ಡಿಸಿ) ವತಿಯಿಂದ ಶನಿವಾರ ವೀಡಿಯೋ ಸಂವಾದದ ಮೂಲಕ ಎಲ್ಲ ರಾಜ್ಯಗಳ ವಿದ್ಯುತ್ ಪ್ರಸರಣ ವಿಭಾಗದ ಅಧಿಕಾರಿಗಳೊಂದಿಗೆ ಸಂವಾದ ನಡೆಯಿತು. ವೀಡಿಯೋ ಸಂವಾದ ಬಳಿಕ ಮಾತನಾಡಿದ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕಿ ಡಾ| ಎನ್. ಮಂಜುಳಾ ಅವರು ರಾಜ್ಯದಲ್ಲಿ ರವಿವಾರ ರಾತ್ರಿ 9 ಗಂಟೆಯಿಂದ 9 ನಿಮಿಷಗಳ ಕಾಲ ವಿದ್ಯುತ್ ದೀಪಗಳ ಬಳಕೆ ಸ್ಥಗಿತಗೊಂಡಾಗ ಸುಮಾರು 600ರಿಂದ 700 ಮೆ.ವ್ಯಾ. ವಿದ್ಯುತ್ ಬಳಕೆ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ. ವಿದ್ಯುತ್ ದೀಪಗಳನ್ನಷ್ಟೇ ಆರಿಸಿ ಇತರ ವಿದ್ಯುತ್ ಉಪಕರಣಗಳ ಬಳಕೆ ಮುಂದುವರಿಸಬಹುದಾಗಿದೆ. ಜತೆಗೆ ಬೀದಿದೀಪಗಳು ಇತರ ವಿದ್ಯುತ್ ಬಳಕೆ ಯಥಾಸ್ಥಿತಿಯಲ್ಲಿರುತ್ತದೆ. ಆ 9 ನಿಮಿಷದ ಅವಧಿಯಲ್ಲಿ ವಿದ್ಯುತ್ ಬಳಕೆ ಕಡಿಮೆಯಾಗುವ ಪರಿಸ್ಥಿತಿಯ ನಿರ್ವಹಣೆಗೆ ಪೂರಕ ರೂಪುರೇಷೆ ಸಿದ್ಧಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಲವಿದ್ಯುತ್ ಘಟಕದಿಂದ ನಿಯಂತ್ರಣ
ಉಷ್ಣ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆಯನ್ನು ದಿಢೀರ್ ಸ್ಥಗಿತಗೊಳಿಸುವುದು, ದಿಢೀರ್ ಕಾರ್ಯಾರಂಭ ಮಾಡುವುದೂ ಕಷ್ಟ. ಆದರೆ ಜಲವಿದ್ಯುತ್ ಘಟಕಗಳಿಂದ ವಿದ್ಯುತ್ ಉತ್ಪಾದನೆಯನ್ನು ದಿಢೀರ್ ಸ್ಥಗತಿಗೊಳಿಸಲು ಮತ್ತು ಕೇವಲ ಅರ್ಧ ನಿಮಿಷದಲ್ಲಿ ಮತ್ತೆ ಪೂರ್ಣ ಪ್ರಮಾಣದಲ್ಲಿ ಗರಿಷ್ಠ ವಿದ್ಯುತ್ ಉತ್ಪಾದನೆಗೆ ಅವಕಾಶವಿದೆ. ಹಾಗಾಗಿ ಜಲವಿದ್ಯುತ್ ಘಟಕದ ಮೂಲಕ ಆ 9 ನಿಮಿಷಗಳಲ್ಲಿ ವಿದ್ಯುತ್ ಬಳಕೆ ಸ್ಥಗಿತ ಪರಿಸ್ಥಿತಿ ನಿಯಂತ್ರಿಸಲಾಗುವುದು ಎಂದರು.
ಇನ್ನೊಂದೆಡೆ ಉಷ್ಣ ವಿದ್ಯುತ್ ಘಟಕಗಳನ್ನು ಸಾಧ್ಯವಾದಷ್ಟು ಕಡಿಮೆ ಉತ್ಪಾದನೆಗೆ ಸೀಮಿತಗೊಳಿಸಿಕೊಳ್ಳಲಾಗುತ್ತದೆ. ಜತೆಗೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಹಂಚಿಕೆಯಡಿ ಪೂರೈಕೆಯಾಗುವ ವಿದ್ಯುತ್ ಪ್ರಮಾಣವನ್ನು ಆ ಹೊತ್ತಿನಲ್ಲಿ ಸಾಧ್ಯವಾದಷ್ಟು ಕನಿಷ್ಠ ಮಟ್ಟಕ್ಕೆ ಸೀಮಿತಗೊಳಿಸಲಾಗುತ್ತದೆ. ಕೃಷಿ ಪಂಪ್‌ಸೆಟ್ ಸಹಿತ ಇತರ ಚಟುವಟಿಕೆಗಳಿಗೆ ವಿದ್ಯುತ್ ಪೂರೈಕೆ ಸಹಜ ಸ್ಥಿತಿಯಲ್ಲಿರಲಿದೆ. 9 ನಿಮಿಷಗಳ ಅವಧಿ ಪೂರ್ಣಗೊಳ್ಳುತ್ತಿದ್ದಂತೆ ಜಲವಿದ್ಯುತ್ ಉತ್ಪಾದನೆ ಆರಂಭವಾಗಲಿದ್ದು, ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತದೆ ಎಂದು ವಿವರಿಸಿದರು.
ರಾಜ್ಯಾದ್ಯಂತ 9 ನಿಮಿಷಗಳ ಕಾಲ ವಿದ್ಯುತ್ ದೀಪಗಳು ಬಂದ್ ಆಗುವ ಹಿನ್ನೆಲೆಯಲ್ಲಿ ವಿದ್ಯುತ್ ಪ್ರಸರಣ ಫೀಡರ್‌ಗಳಲ್ಲೂ ಒತ್ತಡ ಉಂಟಾಗದಂತೆ ನಿಯಂತ್ರಣದಲ್ಲಿಟ್ಟುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಿದ್ಯುತ್ ಬಳಕೆ ಏರಿಳಿತವನ್ನು ಪರಿಸ್ಥಿತಿಗೆ ತಕ್ಕಂತೆ ನಿಭಾಯಿಸಲು ವ್ಯವಸ್ಥೆ ಮಾಡಿ ಕೊಳ್ಳುವಂತೆಯೂ ಸೂಚಿಸಲಾಗಿದೆ ಎಂದರು.
ರವಿವಾರ ರಾತ್ರಿ 9ಕ್ಕೆ 9 ನಿಮಿಷಗಳ ಕಾಲ ದೇಶದ ಜನ ವಿದ್ಯುತ್ ದೀಪಗಳನ್ನು ಆರಿಸಿದರೆ 13,000 ಮೆ.ವ್ಯಾ. ವಿದ್ಯುತ್ ಬಳಕೆ ಸ್ಥಗಿತವಾಗಲಿದೆ ಎಂಬುದಾಗಿ ಸಂವಾದದ ವೇಳೆ ತಿಳಿಸಲಾಯಿತು. ದಕ್ಷಿಣ ಭಾರತದಲ್ಲಿ 3,500 ಮೆ.ವ್ಯಾ. ವಿದ್ಯುತ್ ಬಳಕೆ ಕಡಿಮೆಯಾಗಲಿದ್ದು, ಕರ್ನಾಟಕದಲ್ಲಿ 600ರಿಂದ 700 ಮೆ.ವ್ಯಾ.ಗಳಷ್ಟು ಬಳಕೆ ಇಳಿಕೆಯಾಗುವ ಸಾಧ್ಯತೆ ಇದೆ.
-ಡಾ| ಎನ್.ಮಂಜುಳಾ,
ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.