ವಿಡಿಯೋ ಮಾಡಿ ಆತ್ಮಹತ್ಯೆ : ಕೆ.ಆರ್.ಪೇಟೆ ರೈತನ ಮನೆಗೆ ಸಿಎಂ
ಕುಟುಂಬಸ್ಥರಿಗೆ ಪರಿಹಾರ ಧನ ವಿತರಣೆ
Team Udayavani, Jun 18, 2019, 12:24 PM IST
ಕೆ.ಆರ್.ಪೇಟೆ: ಸಾಲಬಾಧೆ ತಾಳಲಾರದೆ ಸೆಲ್ಪಿ ವಿಡಿಯೋ ಮಾಡಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದ ತಾಲೂಕಿನ ಅಘಲಯ ಗ್ರಾಮದ ರೈತ ಸುರೇಶ್ ನಿವಾಸಕ್ಕೆಮಂಗಳವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ.
ಸಿಎಂ ಕುಮಾರಸ್ವಾಮಿ ಅವರು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. 5 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್‌ಅನ್ನು ಕುಟುಂಬಸ್ಥರಿಗೆ ನೀಡಿದರು.
ಬರಪೀಡಿತ ಸಂತೇಬಾಚಹಳ್ಳಿಹೋಬ ಳಿಯ ಕೆರೆಗಳಿಗೆ ನೀರು
ತುಂಬಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದ 50 ವರ್ಷದ ರೈತ ಸುರೇಶ್ ತಮ್ಮ ಜಮೀನಿನ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಸುಮಾರು ಎರಡೂವರೆ ಎಕರೆ ಜಮೀನು ಮತ್ತು ತೋಟ ಹೊಂದಿದ್ದ ಸುರೇಶ್ ತೋಟದ ಅಭಿವೃದ್ಧಿಗಾಗಿ ಅಘಲಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪತ್ನಿ ಜಯಶೀಲ ಹೆಸರಿನಲ್ಲಿ ಸಾಲ ಪಡೆದಿದ್ದರು. ಅಲ್ಲದೆ ಬೇಸಾಯಕ್ಕಾಗಿ ಖಾಸಗಿ ವ್ಯಕ್ತಿಗಳಿಂದ ಲಕ್ಷಾಂತರ ರೂ. ಸಾಲ ಮಾಡಿದ್ದರೆನ್ನ ಲಾಗಿದೆ. ಮಳೆ ಇಲ್ಲದೆ ಯಾವುದೇ ಬೆಳೆ ಬೆಳೆಯಲು ಸಾಧ್ಯವಾಗಿರಲಿಲ್ಲ. ಗ್ರಾಮದ ಕೆರೆ ತುಂಬಿರಲಿಲ್ಲ ಕೊಳವೆ ಬಾವಿಗಳು ಬತ್ತಿ ಹೋಗಿವೆ. ಇದರಿಂದ ತೋಟದಲ್ಲಿನ ತೆಂಗು, ಅಡಕೆ ಮರಗಳು ಒಣಗುತ್ತಿದ್ದವು. ಇದನ್ನು ನೋಡಲಾಗದೇ ತನ್ನಮೊಬೈಲ್‌ನಲ್ಲಿ ಸೆಲ್ಪಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ನಾನು ಮುಖ್ಯಮಂತ್ರಿ ಕುಮಾರಸ್ವಾಮಿಯವರಕಟ್ಟಾಭಿಮಾನಿ. ನನ್ನ ಅಂತಿಮ ದರ್ಶನಕ್ಕೆ ನೀವು ಬರಬೇಕು ಎಂದು ಸಿಎಂ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದರು. ಅಲ್ಲದೆ, ಹೋಬಳಿಯ ಅಭಿವೃದ್ಧಿಗಾಗಿ ಸಚಿವ ಪುಟ್ಟರಾಜು, ಶಾಸಕ ನಾರಾಯಣಗೌಡ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಜಾನಕಿರಾಮ್ ಸೇರಿದಂತೆ ಎಲ್ಲರೂ ಪಕ್ಷಾತೀತವಾಗಿ ಶ್ರಮಿಸಿ ಹೋಬಳಿಯ ಎಲ್ಲಾ ಕೆರೆಗಳನ್ನು ತುಂಬಿಸುವಂತೆ ವಿಡಿಯೋದಲ್ಲಿ ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.