ಡಿಕೆಶಿ, ಎಚ್ಡಿಕೆ “ಕಾರ್ಯತಂತ್ರ’ಕ್ಕೆ ಸಿಗದ ಕೆ.ಆರ್‌.ಪೇಟೆ


Team Udayavani, Nov 24, 2019, 3:08 AM IST

dksi-hdk

ಮಂಡ್ಯ: ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಅತಂತ್ರಸ್ಥಿತಿಗೆ ದೂಡುವುದಕ್ಕೆ ಮಾಜಿ ಸಿಎಂ ಎಚ್‌. ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಪರೋಕ್ಷವಾಗಿ ಕೈಜೋಡಿಸಿರುವ ಕ್ಷೇತ್ರಗಳಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆಯೂ ಒಂದಾಗಿದ್ದು, ವಾಸ್ತವದಲ್ಲಿ ಕ್ಷೇತ್ರದೊಳಗಿನ ಪರಿಸ್ಥಿತಿ ಇಬ್ಬರೂ ನಾಯಕರ ಕಾರ್ಯತಂತ್ರಕ್ಕೆ ಪೂರಕವಾಗಿಲ್ಲ ಎಂಬಂತಾಗಿದೆ.

ಪ್ರತಿ ಚುನಾವಣೆಯಲ್ಲೂ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದ್ದ ಬಿಜೆಪಿ ಈ ಚುನಾವಣೆಯಲ್ಲಿ ತನ್ನೆಲ್ಲ ಶಕ್ತಿಯನ್ನು ಒಟ್ಟಿಗೆ ಪ್ರಯೋಗಿಸುವ ಮೂಲಕ ಹೊಸದೊಂದು ಸಂಚಲನ ಸೃಷ್ಟಿಸಿದೆ. ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗು ಮಾಡುವಂತೆ ಬಿರುಸಿನಿಂದ ಪ್ರಚಾರದ ಅಖಾಡದಲ್ಲಿ ಮುನ್ನುಗ್ಗುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಪ್ರಯತ್ನ ಕಾಂಗ್ರೆಸ್‌-ಜೆಡಿಎಸ್‌ ಪಾಳಯದಲ್ಲಿ ಕಂಡುಬರುತ್ತಿಲ್ಲ.

ಕಾಂಗ್ರೆಸ್‌-ಜೆಡಿಎಸ್‌ ನಿರೀಕ್ಷೆಗೂ ಮೀರಿ ಬಿಜೆಪಿ ಕ್ಷೇತ್ರದೊಳಗೆ ಬಲಪ್ರದರ್ಶನದೊಂದಿಗೆ ಮತಬೇಟೆಗಿಳಿ ದಿದೆ. ಪ್ರತಿ ಚುನಾವಣೆಯಲ್ಲೂ ಕಾಂಗ್ರೆಸ್‌-ಜೆಡಿಎಸ್‌ ನಡುವೆ ನೇರ ಕದನ ಏರ್ಪಡುತ್ತಿತ್ತಾದರೂ ಈ ಬಾರಿ ಬಿಜೆಪಿ ಎರಡೂ ಪಕ್ಷಗಳಿಗೆ ಸರಿಸಾಟಿಯಾಗಿ ಸವಾಲೊಡ್ಡುತ್ತಿರುವುದು ಕುಮಾರಸ್ವಾಮಿ-ಡಿ.ಕೆ.ಶಿವಕುಮಾರ್‌ ಅವರನ್ನು ದಿಕ್ಕೆಡಿಸುವಂತೆ ಮಾಡಿದೆ.

ಪಕ್ಷಕ್ಕೆ ದ್ರೋಹವೆಸಗಿ ಕಮಲ ಪಾಳಯ ಸೇರ್ಪಡೆಗೊಂಡ ಕೆ.ಸಿ.ನಾರಾಯಣಗೌಡರ ವಿರುದ್ಧ ಕ್ಷೇತ್ರದೊ ಳಗೆ ಸೃಷ್ಟಿಯಾಗಿದ್ದ ಜನವಿರೋಧಿ ಅಲೆಯನ್ನು ಜೆಡಿ ಎಸ್‌ಗೆ ಅನುಕೂಲಕರವಾಗುವಂತೆ ಬಳಸಿಕೊಳ್ಳುವಲ್ಲಿ ಕುಮಾರಸ್ವಾಮಿ ಎಡವಿದಂತೆ ಕಾಣುತ್ತಿದೆ. ಕ್ಷೇತ್ರದಲ್ಲಿ ಒಕ್ಕಲಿಗರೇ ಹೆಚ್ಚಿನ ಸಂಖ್ಯೆ ಯಲ್ಲಿದ್ದು, ಆ ಓಟ್‌ಬ್ಯಾಂಕ್‌ಗೆ ಬಿಜೆಪಿ ಲಗ್ಗೆ ಇಡದಂತೆ ಎಚ್ಚರ ವಹಿಸುವಲ್ಲೂ ವಿಫ‌ಲರಾಗಿ ದ್ದಾರೆಂಬ ಮಾತುಗಳು ಕೇಳಿಬರುತ್ತಿವೆ.

ಲೋಕಸಭಾ ಚುನಾವಣೆ ಸಮಯದಲ್ಲಿ ನಿಖಿಲ್‌ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿ ದ್ದಾಗ ಜಿಲ್ಲೆಯಲ್ಲೇ ಠಿಕಾಣಿ ಹೂಡಿ ಶಾಸಕರೊಟ್ಟಿಗೆ ಸೇರಿ ಕಾರ್ಯತಂತ್ರ ರೂಪಿಸಿದ್ದರು. ಆದರೆ, ಪಕ್ಷಕ್ಕೆ ದ್ರೋಹವೆಸಗಿದ ನಾರಾಯಣಗೌಡರ ವಿರುದ್ಧ ಆರಂಭದಲ್ಲಿ ಜೆಡಿಎಸ್‌ ವರಿಷ್ಠರು ತೋರಿದ ಆವೇಶ, ಆಕ್ರೋಶ ಚುನಾವಣೆ ಸಮೀಪಿಸಿರುವ ಸಮಯದಲ್ಲಿ ತೋರ್ಪಡಿಸದಿರುವುದು ಪಕ್ಷದ ಕಾರ್ಯಕರ್ತರಲ್ಲೂ ಅಸಮಾಧಾನ ಭುಗಿಲೇಳುವಂತೆ ಮಾಡಿದೆ.

ಜಿಲ್ಲೆಯ ಎಲ್ಲ ಶಾಸಕರು, ಮುಖಂಡರು, ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಚುನಾವಣೆಗೆ ರಂಗು ತುಂಬುವುದಕ್ಕೆ ವರಿಷ್ಠರು ಆಸಕ್ತಿ ವಹಿಸುತ್ತಿಲ್ಲ. ವರಿಷ್ಠರ ಅನುಪಸ್ಥಿತಿಯಲ್ಲಿ ಕ್ಷೇತ್ರಕ್ಕೆ ಬರುವುದಕ್ಕೆ ಶಾಸಕರು ಸಿದ್ಧರಿಲ್ಲ. ಜೆಡಿಎಸ್‌ ಅಭ್ಯರ್ಥಿ ಬಿ.ಎಲ್‌.ದೇವರಾಜು ಎಲ್ಲ ಶಾಸಕರನ್ನು ಭೇಟಿ ಮಾಡಿ ಪ್ರಚಾರಕ್ಕೆ ಕರೆತರುವ ಗೋಜಿಗೆ ಹೋಗದೆ ತಮ್ಮ ಕೆಲವೇ ಬೆಂಬಲಿಗರೊಂದಿಗೆ ಅಲ್ಲಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಜೆಡಿಎಸ್‌ ಪಾಳಯದಲ್ಲಿ ನೀರಸ ವಾತಾವರಣ ಮುಂದುವರಿದಿದೆ.

ಇನ್ನು ಕಾಂಗ್ರೆಸ್‌ ಪರಿಸ್ಥಿತಿಯೂ ಜೆಡಿಎಸ್‌ಗಿಂತ ಭಿನ್ನವಾಗೇನೂ ಇಲ್ಲ. ಅಲ್ಲಿಯೂ ರಾಜ್ಯಮಟ್ಟದ ನಾಯಕರು ಬಂದು ಠಿಕಾಣಿ ಹೂಡಿಲ್ಲ. ಉಸ್ತುವಾರಿ ವಹಿಸಿಕೊಂಡಿ ರುವ ಕೆ.ಜೆ.ಜಾರ್ಜ್‌ ಕ್ಷೇತ್ರದಿಂದ ದೂರವೇ ಉಳಿದಿ ದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಜತೆ ಮಾಜಿ ಸಚಿವ ರಾದ ಎನ್‌.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರ ಸ್ವಾಮಿ, ಮಾಜಿ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಬಂದು ಹೋಗಿದ್ದಾರಷ್ಟೆ. ಒಲ್ಲದ ಮನಸ್ಸಿನಿಂದಲೇ ಚುನಾವಣಾ ರಣಾಂಗಣ ಪ್ರವೇಶಿಸಿರುವ ಕೆ.ಬಿ.ಚಂದ್ರ ಶೇಖರ್‌ ಚುನಾವಣಾ ಪ್ರಚಾರದ ಕಣದಲ್ಲಿದ್ದಾರೆ.

ಕಾಂಗ್ರೆಸ್‌-ಜೆಡಿಎಸ್‌ನಿಂದ ಮುಖಂಡರು- ಕಾರ್ಯಕರ್ತರು ಬಿಜೆಪಿ ಪಾಲಾಗುತ್ತಿದ್ದರೂ ಅದನ್ನು ತಡೆಯುವ ಸಣ್ಣ ಪ್ರಯತ್ನಕ್ಕೂ ಉಭಯ ಪಕ್ಷಗಳ ನಾಯಕರು ಮುಂದಾಗಿಲ್ಲ. ಕ್ಷೇತ್ರಕ್ಕೆ ಆಗಮಿಸಿ ಶಾಸಕರೆಲ್ಲರಿಗೂ ಜವಾಬ್ದಾರಿ ಹಂಚಿ ಕ್ಷೇತ್ರದಲ್ಲೇ ಬೀಡು ಬಿಡುವಂತೆ ಮಾಡುವ ಮುಖಂಡರು- ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ, ಧೈರ್ಯ ತುಂಬುವ ಪ್ರಯತ್ನಕ್ಕೆ ಜೆಡಿಎಸ್‌ ವರಿಷ್ಠರು ಮುಂದಾಗಿಲ್ಲ.

ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅಭ್ಯರ್ಥಿಗಳು ಬಿಜೆಪಿಗೆ ಪೈಪೋಟಿ ನೀಡಲಾಗದಷ್ಟು ಅಸಮರ್ಥ ರಾದರೇ ಎಂಬ ಅನುಮಾನಗಳೂ ಕ್ಷೇತ್ರದ ಜನರನ್ನು ಕಾಡಲಾರಂಭಿಸಿವೆ. ಉಭಯ ಪಕ್ಷಗಳಿಗೆ ಸಮರ್ಥ ಅಭ್ಯರ್ಥಿ ಸಿಗಲಿಲ್ಲವೇ ಅಥವಾ ಚುನಾವಣೆ ಬಗ್ಗೆ ಎರಡೂ ಪಕ್ಷಗಳ ರಾಜ್ಯ ನಾಯಕರು ನಿರಾಸಕ್ತಿ ವಹಿಸಿ ನಿರ್ಲಕ್ಷ್ಯ ಮಾಡಿದ್ದಾರೆಯೇ ಎಂಬ ಪ್ರಶ್ನೆಗಳೂ ಕಾರ್ಯಕರ್ತರಲ್ಲಿದೆ.

ಲೋಕಸಭಾ ಚುನಾವಣೆಯಲ್ಲಿ ನಿಖಿಲ್‌ ಸೋಲಿಗೆ ಹೆಣೆಯಲಾಗಿದ್ದ ಸೂತ್ರವನ್ನೇ ಇಲ್ಲಿಯೂ ರೂಪಿಸ ಲಾಗಿದೆಯೇ ಎಂಬ ಅನುಮಾನಗಳು ಮೇಲೆದ್ದಿವೆ. ಸಂಸದೆ ಸುಮಲತಾ ಕೂಡ ಬಿಜೆಪಿ ಬೆನ್ನಿಗೆ ನಿಂತಿದ್ದಾರೆಂಬ ಮಾತುಗಳು ಕೇಳಿ ಬಂದಿದ್ದು, ಬಿಜೆಪಿ ದಿನೇದಿನೆ ಕ್ಷೇತ್ರದಲ್ಲಿ ಬಲ ಹೆಚ್ಚಿಸಿಕೊಳ್ಳುತ್ತಿದೆ.

ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್‌ ಕಾರ್ಯತಂತ್ರ ಕೆ.ಆರ್‌.ಪೇಟೆಯಲ್ಲಿ ಎರಡೂ ಪಕ್ಷಗಳಿಗೆ ಅನುಕೂಲಕರವಾಗಿರುವಂತೆ ಕಂಡು ಬಾರದ ಹಿನ್ನೆಲೆಯಲ್ಲಿ ಅವರಿಬ್ಬರೂ ಯಶವಂತಪುರ, ಗೋಕಾಕ್‌, ಹುಣಸೂರು, ಚಿಕ್ಕಬಳ್ಳಾಪುರಗಳಿಗೆ ಅದನ್ನು ಸೀಮಿತಗೊಳಿಸಿಕೊಳ್ಳುವರೇ ನೋಡಬೇಕು.

* ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.