ಹಣಕೊಟ್ಟು ಆಮ್ಲಜನಕ ಖರೀದಿಸುವ ದುಃಸ್ಥಿತಿ ಬೇಡ

ಕೃಷಿ ಮೇಳ ಸಮಾರೋಪ, ಸಾಧಕರಿಗೆ ಸಮ್ಮಾನ ಸಮಾರಂಭದಲ್ಲಿ ಭಟ್ಟಾರಕ ಸ್ವಾಮೀಜಿ

Team Udayavani, Mar 14, 2022, 6:35 AM IST

ಹಣಕೊಟ್ಟು ಆಮ್ಲಜನಕ ಖರೀದಿಸುವ ದುಃಸ್ಥಿತಿ ಬೇಡ

ಮೂಲ್ಕಿ : 15ನೇ ಶತಮಾನಕ್ಕೂ ಮೊದಲೇ ಜಗತ್ತಿನ ವಿವಿಧ ಕಡೆಗೆ ಇಲ್ಲಿನ ಸಂಬಾರ ಪದಾರ್ಥ, ಉಪ್ಪು, ಗಂಧಸಾಲೆ ಅಕ್ಕಿ ರವಾನೆಯಾಗುತ್ತಿತ್ತು. ಇದು ದಕ್ಷಿಣ ಕನ್ನಡ ಜಿಲ್ಲೆಯ ಸಾಧನೆ. ನಮಗೆ ಉಸಿರಾಡಲು ಆಮ್ಲಜನಕ ಬೇಕು. ಆದರೆ ಇಂದು ಹಣಕೊಟ್ಟು ಅದನ್ನು ಖರೀದಿಸಬೇಕಾದ ಪರಿಸ್ಥಿತಿ ಬಂದಿದೆ ಎಂದು ಮೂಡುಬಿದಿರೆ ಜೈನ ಮಠದ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಹೇಳಿದರು.

ಅವರು ರವಿವಾರ ಮೂಲ್ಕಿ ಕೊಲಾ°ಡಿನಲ್ಲಿ ನಡೆದ ರಾಜ್ಯ ಮಟ್ಟದ ಕೃಷಿ ಮೇಳ “ಕೃಷಿ ಸಿರಿ-2022’ರ ಸಮಾರೋಪದಲ್ಲಿ ಮಾತನಾಡಿ, ಮಕ್ಕಳಿಗೆ ಕೃಷಿಯ ಬಗ್ಗೆ ಪ್ರೇರಣೆ ನೀಡಬೇಕು ಮತ್ತು ಕೃಷಿಬದುಕನ್ನು ಪರಿಚಯಿಸಬೇಕು. ಕೃಷಿಯಲ್ಲಿ ಲಾಭ ಕಡಿಮೆ. ಆದರೆ ಅರೋಗ್ಯ ಖಂಡಿತ ಇದೆ ಎಂದರು.

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮಾತನಾಡಿ, ಸಿರಿ ಎಂದರೆ ತುಳುವಿ ನಲ್ಲಿ ಪೊಲಿ ಎಂಬ ಅರ್ಥವಿದೆ. ಕೃಷಿ ಮತ್ತು ಋಷಿ ಜತೆಯಾಗಿ ಸಾಗಿದಾಗ ಮಾತ್ರ ರಾಷ್ಟ್ರ ಉದ್ಧಾರವಾಗುವುದು. ರಾಸಾಯನಿಕ ಮುಕ್ತ ಕೃಷಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದರು.

ಶಾಸಕ ಉಮಾನಾಥ ಕೋಟ್ಯಾನ್‌ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಮೇಳದ ಠರಾವನ್ನು ಮೇಳದ ಕಾರ್ಯದರ್ಶಿ ಸಂತೋಷ್‌ ಶೆಟ್ಟಿ ಅವರು ಶಾಸಕ ಕೋಟ್ಯಾನ್‌ ಅವರ ಮೂಲಕ ಸರಕಾರಕ್ಕೆ ಸಲ್ಲಿಸಿದರು.

ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಕೆ. ಭುವನಾಭಿರಾಮ ಉಡುಪ, ಉದ್ಯಮಿ ಸುರೇಶ ರೈ, ಮೇಯರ್‌ ಪ್ರೇಮಾನಂದ ಶೆಟ್ಟಿ, ಸ್ಥಳದಾನಿ ಫ್ರಾನ್ಸಿಸ್‌ ಪೀಟರ್‌, ಮೂಲ್ಕಿ ಸೀಮೆ ಅರಮನೆಯ ದುಗ್ಗಣ್ಣ ಸಾವಂತರು, ಕೃಷಿಮೇಳದ ಗೌರವಾಧ್ಯಕ್ಷ ಜಿ. ಆರ್‌. ಪ್ರಸಾದ್‌, ಅಧ್ಯಕ್ಷ ವಿಜಯ ಶೆಟ್ಟಿ ಕೊಲಾ°ಡು, ಲಯನ್ಸ್‌ ಮಾಜಿ ಗವರ್ನರ್‌ ದೇವದಾಸ ಭಂಡಾರಿ, ಬಿಜೆಪಿ ಮುಖಂಡ ಜಗದೀಶ್‌ ಶೇಣವ, ಪೂಜಾ ಪೈ, ಮೇಳದ ಜತೆ ಕೋಶಾಧಿಕಾರಿ ಸಂತೋಷ್‌ ಹೆಗ್ಡೆ, ಜತೆ ಕಾರ್ಯದರ್ಶಿಗಳಾದ ಸೋಮಪ್ಪ ನಾಯ್ಕ, ಚಂದ್ರಹಾಸ್‌ ಕುಂದರ್‌, ಸಂಚಾಲಕ ಡಾ| ಅಣ್ಣಯ್ಯ ಕುಲಾಲ್‌ ಉಳೂ¤ರು ಉಪಸ್ಥಿತರಿದ್ದರು.

ಕೃಷಿ ಮೇಳದ ಉಸ್ತುವಾರಿ ಸಮಿತಿ ಸದಸ್ಯ ಮಹಿಮ್‌ ಹೆಗ್ಡೆ ಸ್ವಾಗತಿಸಿದರು. ಕೋಶಾಧಿಕಾರಿ ಜಗದೀಶ್‌ ಪೈ ಪ್ರಸ್ತಾವನೆಗೈದರು. ರಾಮಚಂದ್ರ ನಾಯಕ್‌ ವಂದಿಸಿದರು. ಆರ್‌.ಜೆ. ಅಭಿಷೇಕ್‌ ಕಾರ್ಯಕ್ರಮ ನಿರೂಪಿಸಿದರು.

ಠರಾವು ಮುಖ್ಯಾಂಶಗಳು
1. ಅವಸಾನದಂಚಿಗೆ ಸಾಗುತ್ತಿರುವ ಕೃಷಿ ಪುನಶ್ಚೇತನಕ್ಕೆ ಸರಕಾರ ಇನ್ನಷ್ಟು ಕ್ರಾಂತಿಕಾರಿ ಹೆಜ್ಜೆಗಳನ್ನು ಇಡಬೇಕು, ಅವಿಭಜಿತ ದ.ಕ. ಜಿಲ್ಲೆಯ ರೈತರ ಭತ್ತದ ಬೆಳೆಗೆ ಬೆಂಬಲ ಬೆಲೆ ನೀಡಬೇಕು.
2. ಸರಕಾರವು ರೈತರು ಮತ್ತು ಗ್ರಾಹಕರ ನಡುವಿನ ಮಧ್ಯವರ್ತಿಗಳ ಕಾಟವನ್ನು ತಪ್ಪಿಸಿ ಬೆಳೆಗೆ ಸೂಕ್ತ ಮೌಲ್ಯವನ್ನು ನೇರವಾಗಿ ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕು.
3. ರೈತರು ಸೌಲಭ್ಯಗಳನ್ನು ಸುಲಭದಲ್ಲಿ ಪಡೆಯಲು ಈಗಿರುವ ನಿಯಮಾವಳಿಗಳಲ್ಲಿ ಸಡಿಲಿಕೆ ಮಾಡಬೇಕು, ವಿಶೇಷವಾಗಿ ಅವಿಭಜಿತ ದ.ಕ. ಜಿಲ್ಲೆಯ ರೈತರ ಪಹಣಿ ಪತ್ರವನ್ನು ಸರಳಗೊಳಿಸಿ ಸೂಕ್ತ ಪರಿಹಾರ ಒದಗಿಸಿಕೊಡಬೇಕು.
4. ರೈತರ ಜಮೀನಿಗೆ ಭೇಟಿ ನೀಡಿ ಬೆಳೆಯ ಸಮೀಕ್ಷೆ ಮಾಡಬೇಕು ಮತ್ತು ಸರಕಾರದ ಸವಲತ್ತು ನೀಡಲು ವ್ಯವಸ್ಥೆ ಮಾಡಬೇಕು.
5. ಹೈನುಗಾರಿಕೆಗೆ ಉತ್ತೇಜನ ನಿಟ್ಟಿನಲ್ಲಿ ಹಾಲಿಗೆ ಬೆಂಬಲ ಬೆಲೆಯನ್ನು ಕನಿಷ್ಠ 3 ರೂಪಾಯಿಗಳಿಗೆ ಹೆಚ್ಚಿಸಬೇಕು.
6. ಅವಿಭಜಿತ ದ.ಕ. ಜಿಲ್ಲೆಗೆ ಅನುಕೂಲ ಆಗುವ ನಿಟ್ಟಿನಲ್ಲಿ ಮೂಲ್ಕಿ ಕೊಲಾ°ಡಿನಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಆವಿಷ್ಕಾರ ಅಧ್ಯಯನವನ್ನು ನಡೆಸಲು ಅನುಕೂಲವಾಗುವಂತೆ ಕೃಷಿ ವಿಶ್ವದ್ಯಾನಿಲಯವನ್ನು ಸ್ಥಾಪಿಸಬೇಕು.
7. ಕೃಷಿ ಮತ್ತು ಮತೊÕ$Âàದ್ಯಮಕ್ಕೆ ಅನುಕೂಲ ಆಗುವಂತೆ ಮೌಲ್ಯವರ್ಧಿತ ಉತ್ಪಾದಕ ಘಟಕಗಳನ್ನು ಅವಿಭಜಿತ ದ.ಕ. ಜಿಲ್ಲೆಯಲ್ಲಿ ಹೆಚ್ಚು ಸ್ಥಾಪಿಸಬೇಕು.
8. ಸಾವಯವ ಕೃಷಿಗೆ ಇನ್ನಷ್ಟು ಪ್ರಯೋಜನ ನೀಡುವುದು ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯುವಂತೆ ಪ್ರೇರೇಪಿಸಬೇಕು.

ಸಾಧಕರಿಗೆ ಸಮ್ಮಾನ
ಕೃಷಿಯಲ್ಲಿ ಆವಿಷ್ಕಾರ ಮಾಡಿರುವ ಜನಾರ್ದನ ಗೌಡ ಮೂಡುಬಿದಿರೆ, ಬಿ.ಕೆ. ದೇವರಾಯ ರಾವ್‌ ಬೆಳ್ತಂಗಡಿ, ಜೇನು ಕೃಷಿಯಲ್ಲಿ ಸಾಧನೆ ಮಾಡಿರುವ ಬಸವನ ಬಾಗೇವಾಡಿಯ ಮಹಾಂತೇಶ್‌ ಎನ್‌. ಚೌಧರಿ, ಕೃಷಿ ಕ್ಷೇತ್ರದ ಸಾಧನೆಗಾಗಿ ಚಿಕ್ಕಬಳ್ಳಾಪುರದ ಎಸ್‌.ಆರ್‌.ಎಸ್‌. ದೇವರಾಜ್‌, ಬೆಳ್ತಂಗಡಿಯ ವಿಠಲ ಶೆಟ್ಟಿ ತಾರೆಮಾರು ಅವರನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

1-huli

Pilikula: 2 ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.