ಕೃತಿಗೆ ಲಾಕ್ಡೌನ್ ಬೇಸರ ತರಿಸಿದೆಯಂತೆ
Team Udayavani, May 15, 2020, 4:56 AM IST
ಕೊರೊನಾ ಲಾಕ್ ಡೌನ್ ಸಮಯದಲ್ಲಿ ಗೂಗ್ಲಿ ಬೆಡಗಿ ಕೃತಿ ಕರಬಂಧ ತಾವು ಪೋಲ್ ಡ್ಯಾನ್ಸ್ ಮಾಡುತ್ತಿರುವ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡು ಲಾಕ್ ಡೌನ್ ಸಮಯದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕೊರೊನಾ ಲಾಕ್ಡೌನ್ ನಡುವೆ ತನ್ನ ಪ್ರಿಯಕರ ಪುಲ್ಕಿತ್ ಸಾಮ್ರಾಟ್ ಜೊತೆ ಕಾಲಕಳೆಯುತ್ತಿರುವ ನಟಿ ಕೃತಿ ಕರಬಂಧ, ಸಾಮಾಜಿಕ ಜಾಲತಾಣದಲ್ಲಿ ಬಹಳ ಸಕ್ರಿಯವಾಗಿ ಇದ್ದಾರೆ. ಸದ್ಯ ಶೂಟಿಂಗ್ ಇಲ್ಲದೇ ಮನೆಯಲ್ಲೇ ಉಳಿದಿರುವ ಕೃತಿ ತಾವು ಪೋಲ್ ಹಿಡಿದು ಸೊಂಟ ಬಳುಕಿಸಿರುವ ವಿಡಿಯೋವನ್ನು ಶೇರ್ ಮಾಡಿದ್ದಾರೆ. ಈ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಾಕಿಕೊಂಡಿರುವ ಕೃತಿ, ಈ ವಿಡಿಯೋ ಈ ಹಿಂದೆ ಶೂಟ್ ಮಾಡಲಾಗಿತ್ತು.
ವಕೌìಟ್ ಸಮಯದಲ್ಲಿ ನನಗೆ ಇದನ್ನು ಮಾಡಲು ಇಷ್ಟ. ಆದರೆ ಈ ಪೋಲ್ ನಮ್ಮ ಮನೆಯಲ್ಲಿ ಇಲ್ಲ ಎಂದು ನಿಜಕ್ಕೂ ಬೇಸರವಾಗುತ್ತಿದೆ. ಪೋಲ್ ಇದ್ದಿದ್ದರೆ ಲಾಕ್ಡೌನ್ ವೇಳೆ ನಾನು ಮಾಡುವ ವೇಳಾಪಟ್ಟಿಯಲ್ಲಿ ಇದನ್ನು ಸೇರಿಸಿಕೊಳ್ಳುತ್ತಿದ್ದೆ ಎಂದು ಬರೆದುಕೊಂಡಿದ್ದಾರೆ. ಮೊದಲಿನಿಂದಲೂ ಪೋಲ್ ಡ್ಯಾನ್ಸ್ ಎಂದರೆ ಇಷ್ಟವಿರುವ ಕೃತಿ, ಕಳೆದ ವರ್ಷ ತಾನು ಮತ್ತು ತನ್ನ ಪ್ರಿಯಕರ ಪುಲ್ಕಿತ್ ಸಾಮ್ರಾಟ್ ಪೋಲ್ ಡ್ಯಾನ್ಸ್ ಮಾಡುತ್ತಿರುವ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದರು. ಜೊತೆಗೆ ನಮ್ಮಿಬ್ಬರಲ್ಲಿ ಯಾರು ಚೆನ್ನಾಗಿ ಪೋಲ್ ಡ್ಯಾನ್ಸ್ ಮಾಡುತ್ತಾರೆ ಕಮೆಂಟ್ ಮಾಡಿ ಎಂದು ಬರೆದುಕೊಂಡಿದ್ದರು.
ಅಂದು ಈ ಫೋಟೋ ಕೂಡ ಸಖತ್ ವೈರಲ್ ಆಗಿತ್ತು. ಸದ್ಯ ಸಾಮ್ರಾಟ್ ಮತ್ತು ಕೃತಿ ಒಂದೇ ಮನೆಯಲ್ಲಿ ಇದ್ದಾರೆ. ಇದರ ಜೊತೆಗೆ ಕೃತಿ ಖಾಸಗಿ ವಾಹಿನಿಗಳಿಗೆ ಸಂದರ್ಶನವನ್ನು ನೀಡುತ್ತಿರುತ್ತಾರೆ. ಹೀಗೆ ಸಂದರ್ಶನ ನೀಡುವ ಸಮಯದಲ್ಲಿ ತಮ್ಮ ಮದುವೆಯ ಬಗ್ಗೆ ಮಾತನಾಡಿರುವ ಕೃತಿ, ಈಗಲೇ ನಮಗೆ ಮದುವೆಯಗಲೂ ಇಷ್ಟವಿಲ್ಲ. ಪುಲ್ಕಿತ್ಗೆ ಕೂಡ ಈಗ ಮದುವೆಯಾಗುವುದು ಇಷ್ಟವಿಲ್ಲ. ಅವನು ಇನ್ನು ಬಚ್ಚಾ, ಸ್ವಲ್ಪ ಸಮಯದ ಬಳಿಕ ಮದುವೆಯಾಗುವ ಬಗ್ಗೆ ಯೋಚನೆ ಮಾಡುತ್ತೇವೆ ಎಂದು ಹೇಳಿದ್ದರು. ಇನ್ನು ಕೃತಿ ಕೊನೆಯದಾಗಿ ಕನ್ನಡದಲ್ಲಿ ಮಾಸ್ತಿಗುಡಿ ಸಿನಿಮಾದಲ್ಲಿ ನಟಿಸಿದ್ದರು. ಇದಾದ ನಂತರ ಬಾಲಿವುಡ್ಗೆ ಹಾರಿದ ಕೃತಿ ಸದ್ಯ ಅಲ್ಲಿಯೇ ಒಂದಷ್ಟು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.