ಕೃತಿಗೆ ಲಾಕ್‌ಡೌನ್ ಬೇಸರ ತರಿಸಿದೆಯಂತೆ
Team Udayavani, May 31, 2020, 4:10 AM IST
ಕೋವಿಡ್ 19 ಲಾಕ್ ಡೌನ್ ಸಮಯದಲ್ಲಿ ಗೂಗ್ಲಿ ಬೆಡಗಿ ಕೃತಿ ಕರಬಂಧ ತಾವು ಪೋಲ್ ಡ್ಯಾನ್ಸ್ ಮಾಡುತ್ತಿರುವ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡು ಲಾಕ್ ಡೌನ್ ಸಮಯದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕೋವಿಡ್ 19 ಲಾಕ್‌ಡೌನ್ ನಡುವೆ ತನ್ನ ಪ್ರಿಯಕರ ಪುಲ್ಕಿತ್ ಸಾಮ್ರಾಟ್ ಜೊತೆ ಕಾಲಕಳೆಯುತ್ತಿರುವ ನಟಿ ಕೃತಿ ಕರಬಂಧ, ಸಾಮಾಜಿಕ ಜಾಲತಾಣದಲ್ಲಿ ಬಹಳ ಸಕ್ರಿಯವಾಗಿ ಇದ್ದಾರೆ. ಸದ್ಯ ಶೂಟಿಂಗ್ ಇಲ್ಲದೇ ಮನೆಯಲ್ಲೇ ಉಳಿದಿರುವ ಕೃತಿ ತಾವು ಪೋಲ್ ಹಿಡಿದು ಸೊಂಟ ಬಳುಕಿಸಿರುವ ವಿಡಿಯೋವನ್ನು ಶೇರ್ ಮಾಡಿದ್ದಾರೆ. ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಾಕಿಕೊಂಡಿರುವ ಕೃತಿ, ಈ ವಿಡಿಯೋ ಈ ಹಿಂದೆ ಶೂಟ್ ಮಾಡಲಾಗಿತ್ತು.
ವಕೌìಟ್ ಸಮಯದಲ್ಲಿ ನನಗೆ ಇದನ್ನು ಮಾಡಲು ಇಷ್ಟ. ಆದರೆ ಈ ಪೋಲ್ ನಮ್ಮ ಮನೆಯಲ್ಲಿ ಇಲ್ಲ ಎಂದು ನಿಜಕ್ಕೂ ಬೇಸರವಾಗುತ್ತಿದೆ. ಪೋಲ್ ಇದ್ದಿದ್ದರೆ ಲಾಕ್‌ಡೌನ್ ವೇಳೆ ನಾನು ಮಾಡುವ ವೇಳಾಪಟ್ಟಿಯಲ್ಲಿ ಇದನ್ನು ಸೇರಿಸಿಕೊಳ್ಳುತ್ತಿದ್ದೆ ಎಂದು ಬರೆದುಕೊಂಡಿದ್ದಾರೆ. ಮೊದಲಿನಿಂದಲೂ ಪೋಲ್ ಡ್ಯಾನ್ಸ್ ಎಂದರೆ ಇಷ್ಟವಿರುವ ಕೃತಿ, ಕಳೆದ ವರ್ಷ ತಾನು ಮತ್ತು ತನ್ನ ಪ್ರಿಯಕರ ಪುಲ್ಕಿತ್ ಸಾಮ್ರಾಟ್ ಪೋಲ್ ಡ್ಯಾನ್ಸ್ ಮಾಡುತ್ತಿರುವ ಫೋಟೋವನ್ನು ತಮ್ಮ ಇನ್‌ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದರು. ಜೊತೆಗೆ ನಮ್ಮಿಬ್ಬರಲ್ಲಿ ಯಾರು ಚೆನ್ನಾಗಿ ಪೋಲ್ ಡ್ಯಾನ್ಸ್ ಮಾಡುತ್ತಾರೆ ಕಮೆಂಟ್ ಮಾಡಿ ಎಂದು ಬರೆದುಕೊಂಡಿದ್ದರು.
ಅಂದು ಈ ಫೋಟೋ ಕೂಡ ಸಖತ್ ವೈರಲ್ ಆಗಿತ್ತು. ಸದ್ಯ ಸಾಮ್ರಾಟ್ ಮತ್ತು ಕೃತಿ ಒಂದೇ ಮನೆಯಲ್ಲಿ ಇದ್ದಾರೆ. ಇದರ ಜೊತೆಗೆ ಕೃತಿ ಖಾಸಗಿ ವಾಹಿನಿಗಳಿಗೆ ಸಂದರ್ಶನವನ್ನು ನೀಡುತ್ತಿರುತ್ತಾರೆ. ಹೀಗೆ ಸಂದರ್ಶನ ನೀಡುವ ಸಮಯದಲ್ಲಿ ತಮ್ಮ ಮದುವೆಯ ಬಗ್ಗೆ ಮಾತನಾಡಿರುವ ಕೃತಿ, ಈಗಲೇ ನಮಗೆ ಮದುವೆಯಗಲೂ ಇಷ್ಟವಿಲ್ಲ. ಪುಲ್ಕಿತ್‌ಗೆ ಕೂಡ ಈಗ ಮದುವೆಯಾಗುವುದು ಇಷ್ಟವಿಲ್ಲ. ಅವನು ಇನ್ನು ಬಚ್ಚಾ, ಸ್ವಲ್ಪ ಸಮಯದ ಬಳಿಕ ಮದುವೆಯಾಗುವ ಬಗ್ಗೆ ಯೋಚನೆ ಮಾಡುತ್ತೇವೆ ಎಂದು ಹೇಳಿದ್ದರು. ಇನ್ನು ಕೃತಿ ಕೊನೆಯದಾಗಿ ಕನ್ನಡದಲ್ಲಿ ಮಾಸ್ತಿಗುಡಿ ಸಿನಿಮಾದಲ್ಲಿ ನಟಿಸಿದ್ದರು. ಇದಾದ ನಂತರ ಬಾಲಿವುಡ್‌ಗೆ ಹಾರಿದ ಕೃತಿ ಸದ್ಯ ಅಲ್ಲಿಯೇ ಒಂದಷ್ಟು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.